ಚಿಕ್ಕಮಗಳೂರು: ಸಿ.ಟಿ.ರವಿ ವಿರುದ್ಧ ಕಣಕ್ಕಿಳಿಯುವಂತೆ ಸಿದ್ದರಾಮಯ್ಯಗೆ ಆಹ್ವಾನ ನೀಡಿದ ಅಭಿಮಾನಿ

ಚುನಾವಣೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ಕಾಂಗ್ರೆಸ್​ನ ಸಿದ್ದರಾಮಯ್ಯ ಅವರಿಗೆ ನಮ್ಮ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ 1 ಕೋಟಿ ರೂ. ಕೊಡುತ್ತೆವೆ ಎಂದು ಆಫರ್​ಗಳು ಬರುತ್ತಿವೆ.

ಚಿಕ್ಕಮಗಳೂರು: ಸಿ.ಟಿ.ರವಿ ವಿರುದ್ಧ ಕಣಕ್ಕಿಳಿಯುವಂತೆ ಸಿದ್ದರಾಮಯ್ಯಗೆ ಆಹ್ವಾನ ನೀಡಿದ ಅಭಿಮಾನಿ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 02, 2023 | 3:10 PM

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಅದರಲ್ಲೂ ಕಾಂಗ್ರೆಸ್​ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟವನ್ನ ನಡೆಸಿ ಕೊನೆಗೆ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಇದಾದ ಬಳಿಕ ಇದೀಗ ಸಿದ್ದರಾಮಯ್ಯನವರಿಗೆ ನಮ್ಮ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಸಾಲು ಸಾಲು ಆಹ್ವಾನಗಳು ಬರಲು ಶುರುವಾಗಿದೆ. ಅಷ್ಟೇ ಅಲ್ಲದೇ ನಮ್ಮ ಕ್ಷೇತ್ರದಿಂದ ಕಣಕ್ಕಿಳಿದರೆ 1 ಕೋಟಿ ರೂ. ನೀಡುತ್ತೇವೆ ಎಂದು ಆಫರ್​ ಮಾಡುತ್ತಿದ್ದಾರೆ. ಅದರಂತೆ ಇಂದು ಚಿಕ್ಕಮಗಳೂರು ಜಿಲ್ಲೆಯ ಸಿದ್ದರಾಮಯ್ಯ ಅವರ ಅಭಿಮಾನಿ ಕೆಂಪನಹಳ್ಳಿಯ ಬಾಲಕೃಷ್ಣ ಎಂಬುವವರು ಸಿ.ಟಿ.ರವಿ ವಿರುದ್ಧ ಕಣಕ್ಕಿಳಿದರೆ ಸಿದ್ದರಾಮಯ್ಯಗೆ 1 ಕೋಟಿ ಹಣ ನೀಡುವುದಾಗಿ ಆಫರ್​ ನೀಡಿದ್ದಾರೆ.

ಈ ಹಿಂದೆ ಯಾದಗಿರಿ ಕ್ಷೇತ್ರದಿಂದ ಸ್ಪರ್ಧಿಸಿದರೆ ನನ್ನ ಜಮೀನು ಮಾರಿಯಾದರೂ 1 ಕೋಟಿ ರೂ. ಕೊಡುತ್ತೇನೆ ಎಂದು ಬಿಜೆಪಿ ಮುಖಂಡ ಚಂದ್ರಾಯ ನಾಗರಾಳ್​ ಹೇಳಿದ್ದರು. ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿ 50-60 ಸಾವಿರ ಮತಗಳಿಂದ ಗೆಲ್ಲಿಸುತ್ತೇವೆ. ಯಾದಗಿರಿಯಲ್ಲಿ ಸ್ಪರ್ಧಿಸಿ ಎಂದು ಕಾಲು ಹಿಡಿದು ಮನವಿ ಮಾಡುತ್ತೇನೆ ಎಂದಿದ್ದರು. ಇದಾದ ಬಳಿಕ ಈಗ ಚಿಕ್ಕಮಗಳೂರು ಜಿಲ್ಲೆಯಿಂದ ಮತ್ತೊಮ್ಮೆ ಸಿದ್ದರಾಮಯ್ಯ ಅವರಿಗೆ ಆಫರ್​ ಬಂದಿದೆ. ಒಟ್ಟಿನಲ್ಲಿ ಚುನಾವಣೆ ದಿನಾಂಕದವರೆಗೂ ಸಿದ್ದರಾಮಯ್ಯ ಅವರಿಗೆ ಅದೆಷ್ಟು ಆಫರ್​ ಬರಲಿದೆ ಎಂದು ಕಾದು ನೋಡಬೇಕು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ