ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 30 ಕಾಡಾನೆಗಳಿರುವ(Wild elephant) ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು. ಇದೀಗ ಆವರಣದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಪಟಾಕಿ ಸಿಡಿಸಿ ಸಿಬ್ಬಂದಿಗಳು ಓಡಿಸುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ
ಚಿಕ್ಕಮಗಳೂರು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 29, 2024 | 9:47 PM

ಚಿಕ್ಕಮಗಳೂರು, ಜ.29: ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 30 ಕಾಡಾನೆಗಳಿರುವ(Wild elephant) ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು. ಇದೀಗ ಶಾಲೆಯ ಆವರಣದಲ್ಲಿ ಬೀಡುಬಿಟ್ಟಿದ್ದ 30 ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಓಡಿಸಲಾಗಿದ್ದು, ಶಾಲಾ ಆವರಣದಿಂದ ಕಾಡಾನೆ ಹಿಂಡು ಹೊರಬಂದಿದೆ.

ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ

ಆವರಣದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಪಟಾಕಿ ಸಿಡಿಸಿ ಸಿಬ್ಬಂದಿಗಳು ಓಡಿಸುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ಇದೀಗ ಕಾಡಾನೆ ಹಿಂಡು ಕದ್ರಿಮಿದ್ರಿ ಗ್ರಾಮದ ಕಡೆ ಸಂಚಾರ ಮಾಡುತ್ತಿದ್ದು, 9 ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ. ಆದ್ದರಿಂದ ಯಾರೂ ಕೂಡ ಮನೆಗಳಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ:ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ವಾಹನ ಸವಾರರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ

100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿ ಭಾಗಿ

ಬರೊಬ್ಬರಿ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿಗಳು ಸೇರಿ ಕಾಡಾನೆಗಳ ಹಿಂಡನ್ನು ಮತ್ತೆ ಕಾಡಿಗಟ್ಟಲು ಪಟಾಕಿ ಸಿಡಿಸಿ ಹರಸಾಹಸ ಪಡುತ್ತಿದ್ದಾರೆ. ಬೆಳಗ್ಗೆಯಿಂದ ಶಾಲಾ ಆವರಣದಲ್ಲಿ ಬೀಟಮ್ಮ ಕಾಡಾನೆ ಗ್ಯಾಂಗ್ ಬೀಡು ಬಿಟ್ಟಿತ್ತು. ಈ ಹಿನ್ನಲೆ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗಳು ವಸತಿ ಶಾಲೆಯೊಳಗೆ ಇದ್ದರು. ಇದೀಗ ಅರಣ್ಯ ಇಲಾಖೆ ರಾತ್ರಿವರೆಗೂ ಕಾದು ಕಾರ್ಯಾಚರಣೆ ಆರಂಭಿಸಿದ್ದಾರೆ. ಜೊತೆಗೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ