ಚಿಕ್ಕಮಗಳೂರು: ಫೇಸ್​ಬುಕ್​ನಲ್ಲಿ ಪಾಕಿಸ್ತಾನ ಪರ ಪೋಸ್ಟ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು

| Updated By: Ganapathi Sharma

Updated on: May 24, 2024 | 12:59 PM

Pro Pakistan Post: ಚಿಕ್ಕಮಗಳೂರಿನ ಕೊಪ್ಪದ ಅಸ್ಗರ್ ಕೊಪ್ಪ ಎಂಬಾತ ಫೇಸ್​ಬುಕ್​ನಲ್ಲಿ ಪಾಕಿಸ್ತಾನ ಪರ ಪೋಸ್ಟ್ ಮಾಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸಂದೇಶ ಪ್ರಕಟಿಸಿರುವ ಈತ ಬಜರಂಗ ದಳದ ವಿರುದ್ಧವೂ ಅಸಭ್ಯ ಪೋಸ್ಟ್ ಮಾಡಿದ್ದಾನೆ. ಇದಕ್ಕೆ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಮಗಳೂರು: ಫೇಸ್​ಬುಕ್​ನಲ್ಲಿ ಪಾಕಿಸ್ತಾನ ಪರ ಪೋಸ್ಟ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು
ಫೇಸ್​ಬುಕ್​ನಲ್ಲಿ ಪಾಕಿಸ್ತಾನ ಪರ ಪೋಸ್ಟ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು
Follow us on

ಚಿಕ್ಕಮಗಳೂರು, ಮೇ 24: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಮತ್ತೆ ಪಾಕಿಸ್ತಾನ ಪರ ಪ್ರೇಮದ ಕೂಗು (Pro Pakistan Post) ಕೇಳಿಬಂದಿದೆ. ಅಸ್ಗರ್ ಕೊಪ್ಪ (Asgar Koppa) ಎಂಬ ವ್ಯಕ್ತಿಯ ಫೇಸ್​​ಬುಕ್​ ಪೋಸ್ಟ್​​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಉಲ್ಲೇಖಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಅವಹೇಳನಕಾರಿ ಸಂದೇಶ ಪ್ರಕಟಿಸಲಾಗಿದೆ. ಫೇಸ್​​ಬುಕ್ ಪೋಸ್ಟ್ ಮಾಡಿದ ಬಳಿಕ ಅಕೌಂಟನ್ನೇ ಆತ ಡಿಲೀಟ್ ಮಾಡಿದ್ದಾನೆ. ಇದೀಗ ಘಟನೆ ಸಂಬಂಧ ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪ ಠಾಣೆಯ ಪೊಲೀಸರು, ಅಸ್ಗರ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿ ಅಸ್ಗರ್ ಬಜರಂಗದಳದ ವಿರುದ್ಧವೂ ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಆತನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ವಿಧಾನಸಭೆ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತ ಅಂಥದ್ದೇ ಘಟನೆ ವರದಿಯಾಗಿರುವುದು ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಹಾವಳಿ, ನೂರು ದಾಟಿದ ಪ್ರಕರಣಗಳ ಸಂಖ್ಯೆ: ಹೈ ಅಲರ್ಟ್

ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್​ನ ನಾಸಿರ್ ಹುಸೇನ್ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಕರಣ ರಾಜಕೀಯ ಆಯಾಮ ಪಡೆದುಕೊಂಡು ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಘಟನೆ ಸಂಬಂಧ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಇದೀಗ ರಾಜ್ಯದಲ್ಲಿ ಮತ್ತೆ ಅಂಥದ್ದೇ ಘಟನೆ ಮರುಕಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ