AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾಬುಡನ್​​ ದರ್ಗಾದಲ್ಲಿ ಮತ್ತೊಂದು ವಿವಾದ: ಗೋರಿಗಳ ಮಧ್ಯೆದ ಔದುಂಬರ ವೃಕ್ಷ ಪೂಜೆಗೆ ಬಜರಂಗದಳ ಪಟ್ಟು

ಚಿಕ್ಕಮಗಳೂರಿನ ವಿವಾದಿತ ಕೇಂದ್ರ ಬಾಬಾಬುಡನ್‌ಗಿರಿ ದತ್ತಾತ್ರೇಯ ದರ್ಗಾದಲ್ಲಿ ಔದುಂಬರ ವೃಕ್ಷಕ್ಕೆ ಪೂಜೆ ಸಲ್ಲಿಸಲು ಬಜರಂಗದಳ ಪಟ್ಟು ಹಿಡಿದಿದೆ. ಜಿಲ್ಲಾಡಳಿತ ಬೇಲಿ ಹಾಕಿ ಪೂಜೆಗೆ ಅವಕಾಶ ನಿರಾಕರಿಸಿರುವುದರಿಂದ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಔದುಂಬರ ವೃಕ್ಷಕ್ಕೆ ಪೂಜೆಗೆ ಅವಕಾಶ ನೀಡುವಂತೆ ಬಜರಂಗದಳ ಒತ್ತಾಯಿಸಿದೆ.

ಬಾಬಾಬುಡನ್​​ ದರ್ಗಾದಲ್ಲಿ ಮತ್ತೊಂದು ವಿವಾದ: ಗೋರಿಗಳ ಮಧ್ಯೆದ ಔದುಂಬರ ವೃಕ್ಷ ಪೂಜೆಗೆ ಬಜರಂಗದಳ ಪಟ್ಟು
ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:May 15, 2025 | 10:19 AM

Share

ಚಿಕ್ಕಮಗಳೂರು, ಮೇ 15: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ವಿವಾದಿತ ಕೇಂದ್ರ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ (Bababudangiri Inam Datta Peetha) ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಗೋರಿಗಳ ನಡುವಿನ ಔದುಂಬರ ವೃಕ್ಷ ಪೂಜೆಗೆ ಅವಕಾಶ ನೀಡುವಂತೆ ಬಜರಂಗದಳ (Bajrang Dal) ಪಟ್ಟು ಹಿಡಿದಿದ್ದು, ಸದ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಹೊಸ ಟೆನ್ಶನ್ ಶುರುವಾಗಿದೆ.

ಔದುಂಬರ ವೃಕ್ಷಕ್ಕೆ ಪೂಜೆ ಸಲ್ಲಿಸದಂತೆ ಬೇಲಿ: ಜಿಲ್ಲಾಡಳಿತದ ವಿರುದ್ಧ ಹಿಂದೂ ಕಾರ್ಯಕರ್ತರು ಅಸಮಾಧಾನ

ಚಿಕ್ಕಮಗಳೂರು ತಾಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದ ವಿವಾದವು ಮತ್ತೆ ಮುನ್ನೆಲೆಗೆ ಬಂದಿದೆ. ದತ್ತ ಪೀಠದಲ್ಲಿರುವ ಔದುಂಬರ ವೃಕ್ಷಕ್ಕೆ ಪೂಜೆ ಸಲ್ಲಿಸದಂತೆ ಮರದ ಸುತ್ತಲೂ ಜಿಲ್ಲಾಡಳಿತ ಬೇಲಿ ಹಾಕಿದೆ ಅಂತ ಹಿಂದೂ ಪರ ಸಂಘಟನೆಗಳು ಆರೋಪ ಮಾಡುತ್ತಿವೆ. ಇಲ್ಲಿ ಪೂಜೆ ಸಲ್ಲಿಸಲು ನ್ಯಾಯಾಲಯ ಅಥವಾ ಧಾರ್ಮಿಕ ದತ್ತಿ ಇಲಾಖೆ ನಿಷೇಧ ಹೇರಿಲ್ಲ ಆದರೂ ನಮಗೆ ಜಿಲ್ಲಾಡಳಿತ ಪೂಜೆಗೆ ಅವಕಾಶ ನೀಡಿಲ್ಲ ಅಂತ ಹಿಂದೂ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: ಬಾಬಾಬುಡನ್​ಗಿರಿ ದತ್ತಪೀಠ ಮತ್ತೊಂದು ವಿವಾದ: ಹಿಂದೂ ಸಂಘಟನೆಗಳು ಆಕ್ರೋಶ

ಇದನ್ನೂ ಓದಿ
Image
ಬಾಬಾಬುಡನ್​ಗಿರಿ ದತ್ತಪೀಠ ಮತ್ತೊಂದು ವಿವಾದ: ಹಿಂದೂ ಸಂಘಟನೆಗಳು ಆಕ್ರೋಶ
Image
ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ 3 ದಿನ ಉರೂಸ್
Image
ಉರುಸ್ ಆಚರಣೆ ವೇಳೆ ಬಾಬಾ ಬುಡನ್​ಸ್ವಾಮಿ ದರ್ಗಾದಲ್ಲಿ ಬೆಂಕಿ
Image
Baba Budan Giri: ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ, ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ

ಇದೇ ಸ್ಥಳದಲ್ಲಿ ಮುಸಲ್ಮಾನರಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಆದರೆ ನಮಗೆ ಪೂಜೆ ಸಲ್ಲಿಸಲು ಯಾಕೆ ಅವಕಾಶ ಇಲ್ಲ? ಇದು ಯಾವ ನ್ಯಾಯ ಅಂತ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ದತ್ತ ಪೀಠದಲ್ಲಿ ಮುಜರಾಯಿ ಇಲಾಖೆ ಹೊರತುಪಡಿಸಿ ಬೇರೆ ಯಾರು ಕಾಣಿಕೆ ಡಬ್ಬ ಇಡುವಂತಿಲ್ಲ ಆದರೂ ಅಲ್ಲಿ ಹಸಿರು ಬಟ್ಟೆ ಹಾಸಿ ಕಾಣಿಕೆ ಡಬ್ಬ ಇಟ್ಟು ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ದತ್ತಪೀಠದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ ಎಂದು ಬಜರಂಗದಳ ಮುಖಂಡ ರಂಗನಾಥ್​ ಹೇಳಿದ್ದಾರೆ.

ಇನ್ನು ದತ್ತಪೀಠದ ವ್ಯಾಪ್ತಿಯಲ್ಲಿರುವ ಮಾಣಿಕ್ಯಧಾರಾ ಬಳಿ ಅನಧಿಕೃತ ಅಂಗಡಿಗಳು ಹೆಚ್ಚಾಗಿವೆ. ಅಲ್ಲಿ ಮಾಂಸಹಾರವನ್ನು ತಯಾರಿಸುತ್ತಿರುವುದರಿಂದ ಮಾಣಿಕ್ಯಧಾರಾದಲ್ಲಿ ಸ್ನಾನ ಮಾಡುವವರ ಧಾರ್ಮಿಕ ನಂಬಿಕೆಗೆ ಧಕ್ಕೆ ತರಲಾಗುತ್ತಿದೆ. ಜೊತೆಗೆ ದತ್ತಪೀಠಕ್ಕೆ ಆಗಮಿಸುವ ಪ್ರವಾಸಿಗರನ್ನು ಅಲ್ಲಿನ ಜೀಪ್ ಚಾಲಕರು ಹೆಚ್ಚಿನ ಜನರನ್ನು ಕೂರಿಸಿಕೊಂಡು ಓವರ್ ಲೋಡ್ ಮಾಡಿ ಪ್ರವಾಸಿಗರಿಂದ ಹೆಚ್ಚಿನ ವಸೂಲಿ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಜಿಲ್ಲಾಡಳಿತ ಕಡಿವಾಣ ಹಾಕಬೇಕೆಂದು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ 3 ದಿನ ಉರೂಸ್; ಮಾಂಸದಡುಗೆ ಮಾಡದಂತೆ ಸಂಘಟನೆ ಪಟ್ಟು

ಒಟ್ಟಾರೆ ದಶಕಗಳಿಂದ ಕರ್ನಾಟಕದ ಅಯೋಧ್ಯೆಯಲ್ಲಿ ನಡೆಯುತ್ತಿರುವ ವಿವಾದ ನ್ಯಾಯಾಲಯದಲ್ಲಿದ್ದು, ಇದಕ್ಕೆ ಬ್ರೇಕ್ ಬೀಳುವ ಲಕ್ಷಣವಂತೂ ಗೋಚರಿಸುತ್ತಿಲ್ಲ. ಇದೀಗ ಹಿಂದೂ ಪರ ಕಾರ್ಯಕರ್ತರು ಔದುಂಬರ ವೃಕ್ಷದ ಪೂಜೆಯ ವಿಚಾರವಾಗಿ ಜಿಲ್ಲಾಡಳಿತದ ಕಡೆಗೆ ಬೊಟ್ಟು ಮಾಡುತ್ತಿದ್ದು, ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಅಂತ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:17 am, Thu, 15 May 25

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!