ಕಾಂಗ್ರೆಸ್ ಮುಖಂಡರ ಗಲಾಟೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮೊರೆ ಹೋದ ಮಹಿಳಾ ಕಾರ್ಯದರ್ಶಿ

ಕರ್ನಾಟಕ ಕಾಂಗ್ರೆಸ್​ ಪಕ್ಷದ ಪದಾಧಿಕಾರ ನಡುವೆ ಗಲಾಟೆಯಾಗಿದ್ದು, ಕಾಂಗ್ರೆಸ್ ಮಹಿಳಾ ಘಟಕದ ಮಹಿಳಾ ಕಾರ್ಯದರ್ಶಿ ಮೇಲೆ ಅದೇ ಪಕ್ಷದ ಮುಖಂಡ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಈಗಾಗಲೇ ಮುಖಂಡನನ್ನು ಪೊಲೀಸರು ಬಂಧಿಸಿದ್ದದಾರೆ. ಆದ್ರೆ, ಸಮಗ್ರ ತನಿಖೆ ಆಗುತ್ತಿಲ್ಲವೆಂದು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮೊರೆ ಹೋಗಿದ್ದಾರೆ. ಅರೇ ಇದೇನಿದು ಕಾಂಗ್ರೆಸ್ ಮುಖಂಡೆಗೆ ನ್ಯಾಯಕ್ಕಾಗಿ ಪ್ರಧಾನಿ ಮೊರೆ ಹೋಗಿದ್ದಾರೆ ಎಂದು ಅಚ್ಚರಿ ಅನ್ನಿಸಿದರೂ ಸತ್ಯ.

ಕಾಂಗ್ರೆಸ್ ಮುಖಂಡರ ಗಲಾಟೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮೊರೆ ಹೋದ ಮಹಿಳಾ ಕಾರ್ಯದರ್ಶಿ
ಚೇತನಾ, ರಾಹಿಲ್ ಷರೀಫ್​​
Edited By:

Updated on: Mar 16, 2026 | 11:24 PM

ಚಿಕ್ಕಮಗಳೂರು, (ಮಾರ್ಚ್ 16): ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಮಹಿಳಾ ಕಾರ್ಯದರ್ಶಿ ಮೇಲೆ ಅದೇ ಪಕ್ಷದ ಮುಖಂಡನೋರ್ವ ಹಲ್ಲೆ ನಡೆಸಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ (Chikkamagakuru) ನಡೆದಿದೆ. ಮನೆ ಖಾಲಿ ಮಾಡಿಸಿದ್ದಕ್ಕೆ ಕೋಪಗೊಂಡು ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್​​ ಎನ್ನುವಾತ ತಮ್ಮದೇ ಪಕ್ಷದ ಮಹಿಳಾ ಕಾರ್ಯದರ್ಶಿ ಚೇತನಾ ಹಾಗೂ ಅವರ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಫೆಬ್ರವರಿ 28ರಂದು ರಾತ್ರಿ ಚಿಕ್ಕಮಗಳೂರು ಹೌಸಿಂಗ್ ಬೋರ್ಡ್​ನಲ್ಲಿ ಚೇತನಾ ದಂಪತಿ ಮೇಲೆ ಹಲ್ಲೆ ನಡೆಸಿದ್ದು, ಬಳಿಕ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದ ವೇಳೆ ಪೊಲೀಸರು, ಆರೋಪಿ ರಾಹಿಲ್ ಷರೀಫ್​​ ನನ್ನು ಬಂಧಿಸಿದ್ದಾರೆ. ಆದ್ರೆ, ರಾಹಿಲ್ ಷರೀಫ್​​ ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ಸಮಗ್ರ ತನಿಖೆ ಆಗುತ್ತಿಲ್ಲ ಎಂದು ಹಲ್ಲೆಗೊಳಗಾದ ಚೇತನಾ ಆರೋಪಿಸಿದ್ದು, ಈ ಸಂಬಂಧ ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಗೆ ಪತ್ರ ಬರೆದಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಅವರದ್ದೇ ಪಕ್ಷ ಆಡಳಿತದಲ್ಲಿದ್ದರೂ ಸಹ ನ್ಯಾಯ ಅಂದ್ರೆ ಹೇಗೆ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಮೋದಿಗೆ ಬರೆದ ಪತ್ರದಲ್ಲೇನಿದೆ?

ಮನೆ ಖಾಲಿ ಮಾಡಿಸಿದ್ದಕ್ಕೆ ಫೆಬ್ರವರಿ ಫೆಬ್ರವರಿ 28ರ ರಾತ್ರಿ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಮನೆಗೆ ನುಗ್ಗಿ ರಾಹಿಲ್ ಷರೀಫ್ ಹಲ್ಲೆ ಮಾಡಿದ್ದಾರೆ. ಬಳಿಕ ರಾಹಿಲ್ ಷರೀಫ್ ನೇಪಾಳಕ್ಕೆ ಪರಾರಿಯಾಗುವ ವೇಳೆ ರಾಜಸ್ಥಾನದ ಅಜ್ಮೀರ್ ನಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಬಂಧನದ ಬಳಿಕ ಆರೋಪಿ ರಾಹಿಲ್ ನನ್ನು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕಾಗಿ ಸಮಗ್ರ ತನಿಖೆಯಾಗುತ್ತಿಲ್ಲ. ಆಸ್ಪತ್ರೆಗೆ ದಾಖಲು ಮಾಡಿ ರಕ್ಷಣೆ ಮಾಡಲಾಗುತ್ತಿದೆ. ರಾಹಿಲ್ ಷರೀಫ್ ಮೊಬೈಲ್ ನಲ್ಲಿ ಹಲವು ಹಿಂದೂ ಯುವತಿಯರ ಅಶ್ಲೀಲ ವಿಡಿಯೋಗಳು ಇವೆ. ಹಲವು ಹಿಂದೂ ಹೆಣ್ಣು ಮಕ್ಕಳನ್ನ ಬಳಸಿಕೊಂಡು ಲವ್ ಜಿಹಾದ್ ನಡೆಸಲು ಯತ್ನ ಮಾಡಿದ್ದಾನೆ. ಸಮಗ್ರ ತನಿಖೆ ಕೇಂದ್ರ ಸರ್ಕಾರ ನಡೆಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ತನಗೂ ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿರುವ ಚೇತನಾ, ಈ ಹಿಂದೆಯೂ ಹಲವಾರು ಪ್ರಕರಣದಲ್ಲಿ ರಾಹಿಲ್ ಸಿಕ್ಕಿಬಿದ್ದಿದ್ದ. ಹಿಂದೂ ಯುವತಿಯ ಮನೆಯಲ್ಲಿ ಸಿಕ್ಕಿಬಿದ್ದದ್ದ. ಹೀಗಾಗಿ ಹಿಂದೂ ಹೆಣ್ಣು ಮಕ್ಕಳ ರಕ್ಷಣೆ ಮಾಡಿ ಎಂದಿದ್ದಾರೆ. ಇದರೊಂದಿಗೆ ಒಂದೇ ಪಕ್ಷದ ಮುಖಂಡರು ಗಲಾಟೆ ಮಾಡಿಕೊಂಡು ಇದೀಗ ಪ್ರಧಾನಿ ನರೇಂದ್ರ ಮೋದಿ ಮೊರೆ ಹೋಗಿದ್ದು, ಅಲ್ಲದೇ ಚೇತನಾ ಅವರು ನ್ಯಾಯಕ್ಕಾಗಿ ಮೋದಿ ಅವರಿಗೆ ಪತ್ರ ಬರೆದಿರುವುದು ಅಚ್ಚರಿಗೆ ಕಾರಣವಾಗಿದೆ.

ಪ್ರಕರಣದ ಹಿನ್ನೆಲೆ

ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಎನ್ನುವಾತ ಚೇತನಾ ಅವರಿಗೆ ಸೇರಿದ ಮನೆಯಲ್ಲಿ ಬಾಡಿಗೆ ಇದ್ದ. ಆದ್ರೆ, ಕೆಲ ಕಾರಣಾಂತರಗಳಿಂದ ಚೇತನಾ ಅವರು ಬಾಡಿಗೆಯನ್ನು ಬಿಡಿಸಿದ್ದರು. ಇದರಿಂದ ಕೆರಳಿದ್ದ ರಾಹಿಲ್ ಶರೀಫ್, ಫೆಬ್ರವರಿ 28ರ ರಾತ್ರಿ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಚೇತನಾ ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದ. ಈ ಸಂಬಂಧ ಚೇತನಾ ಅವರು ದೂರು ದಾಖಲಿಸಿದ್ದರು. ಇದರಿಂದ ರಾಹಿಲ್ ಶರೀಫ್, ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಇನ್ಸ್‌ಪೆಕ್ಟರ್ ಅಭಯಪ್ರಕಾಶ್ ನೇತೃತ್ವದ ಪೊಲೀಸ್ ತಂಡ ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಭಾರತ–ನೇಪಾಳ ಗಡಿ ಭಾಗದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ನೇಪಾಳಕ್ಕೆ ಪರಾರಿಯಾಗುವ ಪ್ರಯತ್ನಿಸುತ್ತಿದ್ದ ವೇಳೆ ರಾಜಸ್ಥಾನದ ಅಜ್ಮೀರ್ ನಲ್ಲಿ ಸಿಕ್ಕಿಬಿದ್ದಿದ್ದ. ಆದ್ರೆ, ಇದೀಗ ರಾಹಿಲ್ ಶರೀಫ್ ನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ರಕ್ಷಣೆ ಮಾಡಲಾಗುತ್ತಿದೆ ಎಂದು ಚೇತನಾ ಆರೋಪವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ.

Follow Us