ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ!

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶವನ್ನು ಸರ್ಕಾರ ನಿರ್ಬಂಧಿಸಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜ ಚಾರಣಕ್ಕೆ ನಿಷೇಧಿಸಲಾಗಿದೆ.

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ!
ಮುಳ್ಳಯ್ಯನಗಿರಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Jun 22, 2024 | 10:09 AM

ಚಿಕ್ಕಮಗಳೂರು, ಜೂನ್​ 22: ಮೂಡಿಗೆರೆ (Mudigere) ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ (Mullayangiri) ಹಾಗೂ ಎತ್ತಿನಭುಜದಲ್ಲಿ (Ettinabhuja) ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂಋಇನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿಗೆ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆವಚ್ಚುತ್ತಲೇ ಇದೆ.

ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶ ನಿರ್ಬಂಧಿಸಿತ್ತು. ಆದರೂ ಕೂಡ ಹಲವು ಚಾರಣಪಥಗಳಲ್ಲಿ ಅನಿರ್ಬಂಧಿತವಾಗಿ ಪ್ರವಾಸಿಗರು ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ

ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೂನ್ 15, 16 ಮತ್ತು 17ರಂದು ರಜೆ ಇದ್ದ ಕಾರಣ ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ಚಿತ್ರ, ವಿಡಿಯೋ ಸಹಿತ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿ ಆಗಿವೆ.

ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?