AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru News: ಕುಸಿಯುವ ಹಂತ ತಲುಪಿದ ಭದ್ರಾ ಜಲಾಶಯದ ಬಲದಂಡೆ ನಾಲೆಯ ತಡೆಗೋಡೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಜಲಾಶಯದ ಬಲದಂಡೆ ನಾಲೆಯ ತಡೆಗೋಡೆ ಕುಸಿಯುವ ಹಂತ ತಲುಪಿದೆ.

Chikkamagaluru News: ಕುಸಿಯುವ ಹಂತ ತಲುಪಿದ ಭದ್ರಾ ಜಲಾಶಯದ ಬಲದಂಡೆ ನಾಲೆಯ ತಡೆಗೋಡೆ
ನಾಲೆ
ವಿವೇಕ ಬಿರಾದಾರ
|

Updated on: Jun 09, 2023 | 11:29 AM

Share

ಚಿಕ್ಕಮಗಳೂರು: ಲಕ್ಕವಳ್ಳಿಯ ಭದ್ರಾ ಜಲಾಶಯದ (Bhadra dam) ಬಲದಂಡೆ ನಾಲೆಯ ತಡೆಗೋಡೆ ಕುಸಿಯುವ ಹಂತ ತಲುಪಿದೆ. ತರೀಕೆರೆ ತಾಲೂಕಿನ ಬರಗೇನಹಳ್ಳಿ ಗ್ರಾಮದ ಬಳಿ ಸುಮಾರು 5 ಕಿಮೀವರೆಗೂ ನಾಲೆಯ ತಡೆಗೋಡೆ ಕುಸಿಯುವ ಹಂತಕ್ಕೆ ತಲುಪಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಈ ನಾಲೆ ದಾವಣಗೆರೆ ಜಿಲ್ಲೆಗೆ ನೀರು ಪೂರೈಸುತ್ತಿದೆ. ಬಲದಂಡೆ ನಾಲೆಯಲ್ಲಿ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತದೆ. ಇದೀಗ ಮಳೆಗಾಲ ಆರಂಭಕ್ಕೂ ಮುನ್ನವೇ ತಡೆಗೋಡೆ ಕುಸಿಯಲು ಆರಂಭವಾಗಿದ್ದು ಅಕ್ಕಪಕ್ಕದ ಗ್ರಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಮತ್ತೊಂದಡೆ ಬೇಲೆನಹಳ್ಳಿ ಬಹುಗ್ರಾಮ ಕುಡಿಯುವ ನೀರು ಪೂರೈಕೆಗೆ ನಿರ್ಮಿಸಿರುವ ಜಾಕ್​​ವೆಲ್ ಬಳಿಯೂ ಗೋಡೆ ಕುಸಿಯುವ ಹಂತಕ್ಕೆ ತಲುಪಿದೆ.

ಬತ್ತುತ್ತಿರುವ ತುಂಗಭದ್ರ ನದಿ

ದಾವಣಗೆರೆ: ದಾವಣಗೆರೆ, ಹರಿಹರ ಹಾಗೂ ಹೊನ್ನಾಳಿ ಸೇರಿದಂತೆ ಪ್ರಮುಖ ಕಡೆ ಕುಡಿಯುವ ನೀರಿನ‌ ಸಮಸ್ಯೆ ಆಗುವ ಸಾದ್ಯತೆ ಇದೆ. ತುಂಬಿ ಹರಿಯುತ್ತಿದ್ದ ತುಂಗಭದ್ರ ನದಿ ಸಂಪೂರ್ಣ ಖಾಲಿಯಾಗುತ್ತಿದೆ. ದಾವಣಗೆರೆ ಜಿಲ್ಲೆ ವ್ಯಾಪ್ತಿಯ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕಿನಲ್ಲಿ ಹರಿಯುವ ತುಂಗಭದ್ರ ನದಿ ಬರಿದಾಗುತ್ತಿದೆ.

ನದಿಯ ನೀರು ಅವಲಂಬಿಸಿ ಜೀವನ ಸಾಗಿಸುತ್ತಿರುವ ಜನರಲ್ಲಿ ಆತಂಕ ಶುರುವಾಗಿದೆ. ಇದೇ ರೀತಿ ಇನ್ನು ಸ್ವಲ್ಪ ಮುಂದುವರೆದರೇ ನ್ಯಾಮತಿ, ಹೊನ್ನಾಳಿ ಹಾಗೂ ಹರಿಹರ ತಾಲೂಕಿನ 80 ಕ್ಕೂ ಹೆಚ್ಚು ಹಳ್ಳಿಯ ಜನ-ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ.

ಕಳೆದ ಐದು ವರ್ಷಗಳಲ್ಲಿ ಮೊದಲಬಾರಿಗೆ ನದಿಯಲ್ಲಿ ನೀರು ಬತ್ತುತ್ತಿದೆ. ಕಳೆದ ವರ್ಷ ಭರ್ಜರಿ ಮಳೆಯಾಗಿ ಜನ ಪ್ರವಾಹದ ಭೀತಿಯಲ್ಲಿದ್ದರು. ಈಗ ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ. ಭದ್ರಾ ಡ್ಯಾಂ ನೀರು ಬಿಡಲು ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!