ಚಿಕ್ಕಮಗಳೂರು: ಲಕ್ಕವಳ್ಳಿಯ ಭದ್ರಾ ಜಲಾಶಯದ (Bhadra dam) ಬಲದಂಡೆ ನಾಲೆಯ ತಡೆಗೋಡೆ ಕುಸಿಯುವ ಹಂತ ತಲುಪಿದೆ. ತರೀಕೆರೆ ತಾಲೂಕಿನ ಬರಗೇನಹಳ್ಳಿ ಗ್ರಾಮದ ಬಳಿ ಸುಮಾರು 5 ಕಿಮೀವರೆಗೂ ನಾಲೆಯ ತಡೆಗೋಡೆ ಕುಸಿಯುವ ಹಂತಕ್ಕೆ ತಲುಪಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಈ ನಾಲೆ ದಾವಣಗೆರೆ ಜಿಲ್ಲೆಗೆ ನೀರು ಪೂರೈಸುತ್ತಿದೆ. ಬಲದಂಡೆ ನಾಲೆಯಲ್ಲಿ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತದೆ. ಇದೀಗ ಮಳೆಗಾಲ ಆರಂಭಕ್ಕೂ ಮುನ್ನವೇ ತಡೆಗೋಡೆ ಕುಸಿಯಲು ಆರಂಭವಾಗಿದ್ದು ಅಕ್ಕಪಕ್ಕದ ಗ್ರಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮತ್ತೊಂದಡೆ ಬೇಲೆನಹಳ್ಳಿ ಬಹುಗ್ರಾಮ ಕುಡಿಯುವ ನೀರು ಪೂರೈಕೆಗೆ ನಿರ್ಮಿಸಿರುವ ಜಾಕ್ವೆಲ್ ಬಳಿಯೂ ಗೋಡೆ ಕುಸಿಯುವ ಹಂತಕ್ಕೆ ತಲುಪಿದೆ.
ದಾವಣಗೆರೆ: ದಾವಣಗೆರೆ, ಹರಿಹರ ಹಾಗೂ ಹೊನ್ನಾಳಿ ಸೇರಿದಂತೆ ಪ್ರಮುಖ ಕಡೆ ಕುಡಿಯುವ ನೀರಿನ ಸಮಸ್ಯೆ ಆಗುವ ಸಾದ್ಯತೆ ಇದೆ. ತುಂಬಿ ಹರಿಯುತ್ತಿದ್ದ ತುಂಗಭದ್ರ ನದಿ ಸಂಪೂರ್ಣ ಖಾಲಿಯಾಗುತ್ತಿದೆ. ದಾವಣಗೆರೆ ಜಿಲ್ಲೆ ವ್ಯಾಪ್ತಿಯ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕಿನಲ್ಲಿ ಹರಿಯುವ ತುಂಗಭದ್ರ ನದಿ ಬರಿದಾಗುತ್ತಿದೆ.
ನದಿಯ ನೀರು ಅವಲಂಬಿಸಿ ಜೀವನ ಸಾಗಿಸುತ್ತಿರುವ ಜನರಲ್ಲಿ ಆತಂಕ ಶುರುವಾಗಿದೆ. ಇದೇ ರೀತಿ ಇನ್ನು ಸ್ವಲ್ಪ ಮುಂದುವರೆದರೇ ನ್ಯಾಮತಿ, ಹೊನ್ನಾಳಿ ಹಾಗೂ ಹರಿಹರ ತಾಲೂಕಿನ 80 ಕ್ಕೂ ಹೆಚ್ಚು ಹಳ್ಳಿಯ ಜನ-ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ.
ಕಳೆದ ಐದು ವರ್ಷಗಳಲ್ಲಿ ಮೊದಲಬಾರಿಗೆ ನದಿಯಲ್ಲಿ ನೀರು ಬತ್ತುತ್ತಿದೆ. ಕಳೆದ ವರ್ಷ ಭರ್ಜರಿ ಮಳೆಯಾಗಿ ಜನ ಪ್ರವಾಹದ ಭೀತಿಯಲ್ಲಿದ್ದರು. ಈಗ ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ. ಭದ್ರಾ ಡ್ಯಾಂ ನೀರು ಬಿಡಲು ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ