AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi: ಜೀಪ್-ಕಾರು ಡಿಕ್ಕಿ; ಕಾರಿನಲ್ಲಿ ಮದ್ಯ, ಸಿ.ಟಿ. ರವಿ ಭಾವಚಿತ್ರವಿರುವ ಕ್ಯಾಲೆಂಡರ್ ಪತ್ತೆ!

ಕರ್ನಾಟಕ ಚುನಾವಣೆ ಸಮೀಪಿಸುತ್ತಿದ್ದಂತೆ ಹಣ ಮದ್ಯ, ಚಿನ್ನ ಸಾಗಾಟವಾಗಲು ಆರಂಭವಾಗಿದೆ. ರಾಜ್ಯಾದ್ಯಂತ ಪೊಲೀಸರು ಭರ್ಜರಿ ಬೇಟೆಯನ್ನೂ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ ಚಿಕ್ಕಮಗಳೂರಿನಲ್ಲಿ ಅಪಘಾತಕ್ಕೀಡಾದ ಕಾರಿನಲ್ಲಿ ಸಿಟಿ ರವಿ ಭಾವಚಿತ್ರವಿರುವ ಕ್ಯಾಲೆಂಡರ್​ ಹಾಗೂ ಮದ್ಯ ಪತ್ತೆಯಾಗಿವೆ.

CT Ravi: ಜೀಪ್-ಕಾರು ಡಿಕ್ಕಿ; ಕಾರಿನಲ್ಲಿ ಮದ್ಯ, ಸಿ.ಟಿ. ರವಿ ಭಾವಚಿತ್ರವಿರುವ ಕ್ಯಾಲೆಂಡರ್ ಪತ್ತೆ!
ಚಿಕ್ಕಮಗಳೂರಿನಲ್ಲಿ ಅಪಘಾತಕ್ಕೀಡಾದ ಕಾರಿನಲ್ಲಿ ಮದ್ಯ, ಸಿ.ಟಿ. ರವಿ ಭಾವಚಿತ್ರವಿರುವ ಕ್ಯಾಲೆಂಡರ್ ಪತ್ತೆ!
Rakesh Nayak Manchi
|

Updated on:Mar 27, 2023 | 7:05 AM

Share

ಚಿಕ್ಕಮಗಳೂರು: ಜೀಪ್​ಗೆ ಕಾರು ಡಿಕ್ಕಿ (Jeep And Car Accident) ಹೊಡೆದು ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸ್ಥಳೀಯರು ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ (AIT Circle) ಬಳಿ ನಡೆದಿದೆ. ಅಪಘಾತದ ವೇಳೆ ಕಾರು ಪರಿಶೀಲಿಸಿದ ಸ್ಥಳೀಯರು ಶಾಕ್ ಕೂಡ ಆಗಿದ್ದಾರೆ. ಇದಕ್ಕೆ ಕಾರಣ, ಲಕ್ಷಾಂತರ ಮೌಲ್ಯದ ಮದ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಅವರ ಭಾವಚಿತ್ರ ಇರುವ ಕ್ಯಾಲೆಂಡರ್​ಗಳು ಪತ್ತೆಯಾಗಿರುವುದು. ಕರ್ನಾಟಕ ಚುನಾವಣೆ ಹೊತ್ತಲ್ಲೇ ಲಕ್ಷಾಂತರ ಮೌಲ್ಯದ ಮಾಲ್​ಗಳು ಪತ್ತೆಯಾಗಿರುವುದರಿಂದ ಆಕ್ರೋಶಗೊಂಡ ಕೆಲವು ಸ್ಥಳೀಯರು ಸಿಟಿ ರವಿ ವಿರುದ್ಧ ಒಟಿ ರವಿ ಎಂದು ಘೋಷಣೆ ಕೂಗಿದ್ದಾರೆ.

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ಬಳಿ ಜೀಪ್​ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಘಟನೆ ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಹಿಡಿದ ಸ್ಥಳೀಯರು ಕಾರು ಪರಿಶೀಲನೆಗೆ ಮುಂದಾಗಿದ್ದಾರೆ. ಈ ವೇಳೆ ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಮದ್ಯದ ಬಾಟಲಿಗಳು ಹಾಗೂ ಸಿ.ಟಿ.ರವಿ ಭಾವ ಚಿತ್ರಗಳಿರುವ ನೂರಾರು ಕ್ಯಾಲೆಂಡರ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಟಿ ರವಿ: ಪಾದಯಾತ್ರೆಯಲ್ಲಿ ಘೋಷಣೆ

ಕಾರಿನಲ್ಲಿ ಮದ್ಯ ಪತ್ತೆಯಾದ ಹಿನ್ನೆಲೆ OT ರವಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಕಾರು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಐಟಿ ಸರ್ಕಲ್ ಬಳಿ ನೂರಾರು ಸ್ಥಳೀಯರು ಜಮಾಯಿಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಮಗಳೂರು ನಗರ ಪೋಲಿಸ್ ಠಾಣೆಯ ಪೋಲಿಸರು‌‌ ಪರಿಶೀಲನೆ ನಡೆಸಿದ್ದಾರೆ.

ಪರವಾನಿಗೆ ಹೊರತಾದ ವಾಹನದಲ್ಲಿ ಲಕ್ಷಾಂತರ ಮೌಲ್ಯದ ಬಿಯರ್ ಸಾಗಾಟ

ವಿಜಯಪುರ: ಲಕ್ಷಾಂತರ ಮೌಲ್ಯದ ಬಿಯರ್ ಸಾಗಾಟ ಮಾಡುತ್ತಿದ್ದ ಪರವಾನಿಗೆ ಹೊರತಾದ ವಾಹನವನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿದ ಘಟನೆ ಇಂಡಿ ತಾಲೂಕಿನ ಧೂಳಖೇಡ್ ಚೆಕ್ ಪೋಸ್ಟ್​ನಲ್ಲಿ ನಡೆದಿದೆ. ಧೂಳಖೇಡ್ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ವೇಳೆ ಅಕ್ರಮ ಪತ್ತೆ ಮಾಡಿದ ಅಬಕಾರಿ ಪೊಲೀಸರು, ಲಾರಿಯಲ್ಲಿದ್ದ 47,38,851 ಮೌಲ್ಯದ ಬಿಯರ್ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಇಂಡಿ ವಲಯ ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತುಮಕೂರು ನಿವಾಸಿಯಾಗಿರುವ ಲಾರಿ ಚಾಲಕ  ಫೈರೋಜ್ ಸೈಯದ್ ಅಬ್ದುಲ್ ರಹಮಾನ್‌ ಎಂಬಾತನನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Mon, 27 March 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ