ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಪ್ರದರ್ಶನ: ಕೈ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿದ ಬಿಜೆಪಿಗರು
ಚಿಕ್ಕಮಗಳೂರಿನ ವಿಜಯಪುರದಲ್ಲಿ ನಮೋ ಬ್ರಿಗೇಡ್ ಹಮ್ಮಿಕೊಂಡಿದ್ದ ‘ನಮೋ ಭಾರತ್' ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹೈಡ್ರಾಮ ತೋರಿದೆ. ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸೂಲಿಬೆಲೆ ವಿರುದ್ದ ಕಪ್ಪುಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದಾರೆ.
ಚಿಕ್ಕಮಗಳೂರು, ಫೆ.08: ನಗರದ ವಿಜಯಪುರದಲ್ಲಿ ಇಂದು(ಫೆ.08) ನಮೋ ಬ್ರಿಗೇಡ್ ಆಯೋಜಿಸಿದ್ದ ‘ನಮೋ ಭಾರತ್’ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಯುವ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಿದ್ದು, ಪುಂಗಿದಾಸ ಚಕ್ರವರ್ತಿ ಎಂದು ಘೋಷಣೆ ಕೂಗಿದ್ದಾರೆ. ಇನ್ನು ಏಕಾಏಕಿ 2 ತಂಡವಾಗಿ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಾಟ
ಇದರಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋಡ ನೋಡುತ್ತಿದ್ದಂತೆ ನಮೋ ಭಾರತ್ ಕಾರ್ಯಕ್ರಮ ಉದ್ವಿಗ್ನತೆ ಸ್ವರೂಪ ಪಡೆದಿದ್ದು, ಕಲ್ಲು ತೂರಿದ ಕಟ್ಟಡದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಆರೋಪ: ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್
ಚಕ್ರವರ್ತಿ ಹೇಳುವ ಸುಳ್ಳಿಗೆ ನಮ್ಮ ವಿರೋಧ- ಕಾಂಗ್ರೆಸ್
ನಮೋ ಭಾರತ್ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನದ ಬಳಿಕ ಪ್ರತಿಕ್ರಿಯಿಸಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ‘ನಮೋ ಭಾರತ್ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಚಕ್ರವರ್ತಿ ಬರೀ ಸುಳ್ಳು ಹೇಳುತ್ತಾರೆ, ಅದಕ್ಕೆ ಬುಕಾಳಿ ರಾಜ ಚಕ್ರವರ್ತಿಗೆ ಅಷ್ಟೆ ನಮ್ಮ ವಿರೋಧ. ನಾಲಿಗೆಗೆ ಹಾಗೂ ತಲೆಗೆ ಬುದ್ದಿನೇ ಇಲ್ಲ. ಇನ್ನಾದರೂ ಸುಳ್ಳು ಹೇಳುವುದನ್ನು ಬಿಡಲಿ, ಅವರು ಸುಳ್ಳು ಹೇಳುವುದನ್ನ ಮೊದಲು ಬಿಡಬೇಕು ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:28 pm, Thu, 8 February 24