ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್

ಚಿಕ್ಕಮಗಳೂರು ನಗರಸಭೆಯ ಬಿಜೆಪಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೀಗ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೆ ಬೀಳದೆ ಕಣ್ಮರೆಯಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಶಿಸ್ತುಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಇತ್ತ, ಆಪರೇಷನ್ ಹಸ್ತದ ಮೂಲಕ ನಗರಸಭೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡುತ್ತಿದ್ದಾರೆ.

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ವಾಪಸ್ ಪಡೆದು ಕಣ್ಮರೆಯಾಗಿದ್ದು, ಸಿಟಿ ರವಿಗೆ ಮುಜುಗರ ತಂದಿದೆ
Follow us
| Updated By: Rakesh Nayak Manchi

Updated on:Oct 15, 2023 | 10:17 AM

ಚಿಕ್ಕಮಗಳೂರು, ಅ.15: ನಗರಸಭೆಯಲ್ಲಿ ಬಿಜೆಪಿ ಹೈಡ್ರಾಮೇ ನಡೆಯುತ್ತಿದೆ. ಬಿಜೆಪಿ ನಾಯಕರ ಸೂಚನೆಯಂತೆ ಎರಡನೇ ಬಾರಿ ರಾಜೀನಾಮೆ ಕೊಟ್ಟಿದ್ದ ನಗರಸಭೆ (Chikkamagalur City Council) ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದಂತೆ ಕಣ್ಮರೆಯಾಗಿದ್ದಾರೆ. ಇದರಿಂದ ಮಾಜಿ ಸಚಿವ ಸಿಟಿ ರವಿಗೆ (CT Ravi) ಮುಜುಗರ ಉಂಟಾಗಿದ್ದು, ವೇಣುಗೋಪಾಲ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಇದನ್ನೇ ಬಂಡವಳವನ್ನಾಗಿಸಿಕೊಂಡು ನಗರಸಭೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತಕ್ಕೆ ಇಳಿದಿದ್ದಾರೆ.

ವೇಣುಗೋಪಾಲ್ ಅವರು ಸಿಟಿ ರವಿ ಅವರ ಆಪ್ತರಾಗಿದ್ದು, ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್​ ಅವರಿಗೆ ವೇಣುಗೋಪಾಲ್ ಅವರು ರಾಜೀನಾಮೆ ನೀಡಿದ್ದರು. ಪಕ್ಷದ ಒಪ್ಪಂದದಂತೆ ರಾಜೀನಾಮೆ ನೀಡಿದ್ದ ವೇಣುಗೋಪಾಲ್ ಇದೀಗ ಯು ಟರ್ನ್ ಹೊಡೆದಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಅನ್ನದಾತನ ಆತ್ಮಹತ್ಯೆ, ಕಳೆದ 40 ದಿನಗಳಲ್ಲಿ ಐವರು ರೈತರು ನೇಣಿಗೆ ಶರಣು

ಬಿಜೆಪಿ ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆ ಶುಕ್ರವಾರದಂದು ರಾಜೀನಾಮೆ ಹಿಂಪಡೆದ ವೇಣುಗೋಪಾಲ್ ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದಾರೆ. ಅದರಂತೆ ಈ ಹಿಂದೆಯೂ ವರಸಿದ್ಧಿ ವೇಣುಗೋಪಾಲ್ ಅವರು ರಾಜೀನಾಮೆ ನೀಡಿ ವಾಪಸ್ ಪಡೆದಿದ್ದರು. ಒಟ್ಟು ಮೂರು ತಿಂಗಳಿನಲ್ಲಿ ಎರಡು ಬಾರಿ ರಾಜೀನಾಮೆ ನೀಡಿ ಹಿಂಪಡೆದಿದ್ದಾರೆ. ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ ಸೂಚನೆ ಮೇರೆಗೆ ರಾಜೀನಾಮೆ ವಾಪಸ್ ಪಡೆದಿರುವ ಸಾಧ್ಯತೆ ಇದೆ.

35 ಸಂಖ್ಯಾಬಲದ ನಗರಸಭೆಯಲ್ಲಿ ಬಿಜೆಪಿ 18 ವಾರ್ಡ್​ಗಳನ್ನು ಗೆದ್ದಿದೆ. ಸತತ ನಾಲ್ಕು ಬಾರಿ ನಗರಸಭೆಯನ್ನು ವಶಕ್ಕೆ ಪಡೆದಿರುವ ಬಿಜೆಪಿಗೆ ಇದು ಪ್ರತಿಷ್ಠೆಯ ನಗರಸಭೆಯಾಗಿದೆ. ಆದರೆ ಆಪರೇಷನ್ ಹಸ್ತದ ಕಾಂಗ್ರೆಸ್ ಮೂಲಕ ನಗರ ಸಭೆ ವಶಪಡಿಸಿಕೊಳ್ಳಲು ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಇತ್ತ, ವರಸಿದ್ಧಿ ವೇಣುಗೋಪಾಲ್ ಹೈಡ್ರಾಮದಿಂದಾಗಿ ಸಿಟಿ ರವಿ ಅವರು ಮುಜುಗರಕ್ಕೊಳಗಾಗಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಬಿಜೆಪಿ ಸಿದ್ಧತೆ ನಡೆಸುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Sun, 15 October 23

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?