AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಟಿ.ರವಿ ಅಪ್ತನಿಂದಲೇ ಮುಖಭಂಗ, ಚಿಕ್ಕಮಗಳೂರು ನಗರಸಭೆಯಲ್ಲಿ ಅವಿಶ್ವಾಸ ಮಂಡನೆಯಲ್ಲಿ ಬಿಜೆಪಿಗೆ ಸೋಲು

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ವಿರುದ್ಧ ಇಂದು ಬಿಜೆಪಿ ಅವಿಶ್ವಾಸ ಮಂಡನೆ ಮಾಡಿತು. ಆದರೆ, ಒಂದೇ ಒಂದು ಮತ ಕೂಡ ಅವಿಶ್ವಾಸಕ್ಕೆ ಬೀಳದ ಹಿನ್ನೆಲೆ ವೇಣುಗೋಪಾಲ್ ಅವರು ವಿಶ್ವಾಸಮತ ಗೆದ್ದು ಬೀಗಿದರು. ಇದು ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಸಿ.ಟಿ.ರವಿ ಅಪ್ತನಿಂದಲೇ ಮುಖಭಂಗ, ಚಿಕ್ಕಮಗಳೂರು ನಗರಸಭೆಯಲ್ಲಿ ಅವಿಶ್ವಾಸ ಮಂಡನೆಯಲ್ಲಿ ಬಿಜೆಪಿಗೆ ಸೋಲು
ವಿಶ್ವಾಸಮತ ಗೆದ್ದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ (ಎಡಚಿತ್ರ), ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ (ಬಲಚಿತ್ರ)
TV9 Web
| Edited By: |

Updated on:Nov 10, 2023 | 1:31 PM

Share

ಚಿಕ್ಕಮಗಳೂರು, ನ.10: ನಗರಸಭೆ (Chikkamagaluru City Municipal Council) ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ (Varasiddhi Venugopal) ವಿರುದ್ಧ ಇಂದು ಬಿಜೆಪಿ ಅವಿಶ್ವಾಸ ಮಂಡನೆ ಮಾಡಿತು. ಆದರೆ, ಒಂದೇ ಒಂದು ಮತ ಕೂಡ ಅವಿಶ್ವಾಸಕ್ಕೆ ಬೀಳದ ಹಿನ್ನೆಲೆ ವೇಣುಗೋಪಾಲ್ ಅವರು ವಿಶ್ವಾಸಮತ ಗೆದ್ದು ಬೀಗಿದರು. ಇದು ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಸ್ವಪಕ್ಷದದಿಂದಲೇ‌ ಎದುರಾದ ಅವಿಶ್ವಾಸ ನಿರ್ಣಯದಲ್ಲಿ ಹಾಲಿ ಅಧ್ಯಕ್ಷ ವೇಣುಗೋಪಾಲ್ ಅವರು ಗೆದ್ದಿದ್ದಾರೆ. ಮೂರು ತಿಂಗಳಿನಿಂದ ನಾನಾ ರೀತಿಯ ಹೈಡ್ರಾಮಕ್ಕೆ ನಗರಸಭೆ ಸಾಕ್ಷಿಯಾಗಿತ್ತು. ಎರಡು ಬಾರಿ ರಾಜೀನಾಮೆ ನೀಡಿ ಬಳಿಕ ವಾಪಸ್ ಪಡೆದಿದ್ದ ವೇಣುಗೋಪಾಲ್ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತು ಮಾಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು, ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲು ಸಿದ್ದರಾಮಯ್ಯ ಸೂಚನೆ

ಅಲ್ಲದೆ, ಇಂದು ಅವಿಶ್ವಾಸ ಮಂಡನೆ ಮಾಡಿದ ಬಿಜೆಪಿಗೆ ಮುಖಭಂಗ ಉಂಟಾಗಿದೆ. 30 ತಿಂಗಳ ಆಡಳಿತಕ್ಕೆ ಬಿಜೆಪಿಯು 18-12 ತಿಂಗಳಿಗೆ ಅಧಿಕಾರ ಹಂಚಿಕೆ ಮಾಡಿಕೊಂಡಿತ್ತು. ಮೊದಲ ಅವಧಿಗೆ ವೇಣುಗೋಪಾಲ್ ಅಧ್ಯಕ್ಷರಾಗಿದ್ದರು. ಈಗ ರಾಜೀನಾಮೆ ನೀಡದೆ ವೇಣುಗೋಪಾಲ್ ಅವರು ಆಟ ಆಡಿಸುತ್ತಿದ್ದಾರೆ.

ಇತ್ತ, ಸೋಲಿನ ಮುನ್ಸೂಚನೆ ಹಿನ್ನೆಲೆ ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಸದಸ್ಯ ಪ್ರಾಣೇಶ್ ಅವರು ಜಿಲ್ಲಾ ಕೇಂದ್ರದಲ್ಲಿ ನೆಲೆಸಿದ್ದಾರೆ. ಆ ಮೂಲಕ ಅವಿಶ್ವಾಸ ಮತ ಚಲಾವಣೆಗೆ ಗೈರಾಗಿದ್ದಾರೆ. ಇತ್ತ ಕಾಂಗ್ರೆಸ್​ನ ನಗರಸಭಾ ಸದಸ್ಯರು, ಹಾಲಿ ಶಾಸಕ ಹೆಚ್.ಡಿ. ತಮ್ಮಯ್ಯ ಭಾಗಿಯಾಗಿದ್ದಾರೆ.

ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿ 17, ಜೆಡಿಎಸ್ 3, ಎಸ್​ಡಿಪಿಐ 1, ಕಾಂಗ್ರೆಸ್ 12, ಪಕ್ಷಾಂತರ 1, ಶಾಸಕರು 1, ಬಂಡಾಯ ಅಧ್ಯಕ್ಷರ 1 ಮತ ಇದ್ದು, ಅವಿಶ್ವಾಸ ಮತಗಳ ವಿರುದ್ಧ ಒಂದು ಮತವೂ ಬೀಳದ ಹಿನ್ನೆಲೆ ಅಧ್ಯಕ್ಷ ವೇಣುಗೋಪಾಲ್ ಅವರು ವಿಶ್ವಾಸ ಮತ ಗೆದ್ದಿದ್ದಾರೆ.

ಇತ್ತ, ತೀವ್ರ ಮುಖಭಂಗ ಅನುಭವಿಸಿದ ಬಿಜೆಪಿ, ವರಸಿದ್ಧಿ ವೇಣುಗೋಪಾಲ್ ಕಚೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Fri, 10 November 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ