AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲೀಕನ ಅಟ್ಟಹಾಸ: ಮಹಿಳಾ ಕಾರ್ಮಿಕರ ಮೇಲೂ ಮನಸೋ ಇಚ್ಛೆ ಹಲ್ಲೆ.

ಚಿಕ್ಕಮಗಳೂರಿನ ಬಸಗೂಡು ಗ್ರಾಮದಲ್ಲಿ ಕಾಫಿ ಎಸ್ಟೇಟ್ ಮಾಲೀಕ ಬಂದೂಕು ಮತ್ತು ದೊಣ್ಣೆಯಿಂದ ತಮಿಳುನಾಡು ಮೂಲದ ವಲಸೆ ಕಾರ್ಮಿಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಕಾರ್ಮಿಕರು ಮತ್ತು ಮಹಿಳೆಯರನ್ನು ಜೀತದಾಳುಗಳಂತೆ ನಡೆಸಿಕೊಂಡಿರುವ ಆರೋಪ ಕೇಳಿಬಂದಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲೀಕನ ಅಟ್ಟಹಾಸ: ಮಹಿಳಾ ಕಾರ್ಮಿಕರ ಮೇಲೂ ಮನಸೋ ಇಚ್ಛೆ ಹಲ್ಲೆ.
ಕಾರ್ಮಿಕರ ಮೇಲೆ ಹಲ್ಲೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 28, 2026 | 2:29 PM

Share

ಚಿಕ್ಕಮಗಳೂರು, ನವೆಂಬರ್​​ 28: ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿದೆ. ಬಂದೂಕು ಹಿಡಿದು ಮಹಿಳಾ ಕಾರ್ಮಿಕರ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಎಸ್ಟೇಟ್ ಮಾಲೀಕ ಭರತ್ ಎಂಬಾತ ದೊಣ್ಣೆಯಿಂದ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಮಿಕರು ಮತ್ತು ಮಹಿಳೆಯರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಎಂದೂ ನೋಡದೆ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಕೂಡ ದೂರಲಾಗಿದೆ.

ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಕಾರ್ಮಿಕರ ರಕ್ಷಣೆಗೆ ಜಿಲ್ಲಾಡಳಿತ ಮಧ್ಯಪ್ರವೇಶಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದು, ಕಾಫಿ ಎಸ್ಟೇಟ್ ಮಾಲೀಕ ಭರತ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ಕಾರ್ಮಿಕರು ತಮಿಳುನಾಡು ಮೂಲದವರು ಎನ್ನಲಾಗಿದ್ದು, ಕೆಲಸಬಿಟ್ಟು ಹೋಗುತ್ತೇವೆ ಎಂದು ಅವರು ಹೇಳಿದ ಕಾರಣ ಕುಪಿತಕೊಂಡು ಮಾಲೀಕ ಹಲ್ಲೆ ನಡೆಸಿದ್ದಾನೆ. ಮುಂಗಡವಾಗಿ ಪಡೆದಿದ್ದ ಹಣ ನೀಡುವಂತೆ ಆತ ಕೇಳಿದ್ದ. ಈ ವೇಳೆ ಕಾರ್ಮಿಕರು ಅದಕ್ಕೆ ಒಪ್ಪಿದರೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಸೆರೆ ಕಾರ್ಯಾಚರಣೆ ಸುಳಿವು ಸಿಗುತ್ತಿದ್ದಂತೆ ಒಂಟಿ ಸಲಗ ಎಸ್ಕೇಪ್​​: ಸುಮಾರು 20 ಕಿ.ಮೀ. ದೂರದಲ್ಲಿ ಪತ್ತೆ

ಗಾಯಾಳು ಮಹಿಳೆ ಆಸ್ಪತ್ರೆಗೆ ದಾಖಲು

ಇನ್ನು ಹಲ್ಲೆಗೆ ಒಳಗಾಗಿ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಕಾರ್ಮಿಕ ಮಹಿಳೆ ಮೀನಾ ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಂಬಳದ ಹಣದ ವಿಚಾರವಾಗಿ ಮಾತಿನ ಚಕಮಕಿ ನಡೆದು ಗಲಾಟೆ ಆಗಿದೆ. ಸಾಲ ಕೊಟ್ಟಿರುವ ಹಣವನ್ನು ಕಟ್ಟಿ ಬೇರೆ ಕಡೆ ಹೋಗುವಂತೆ ಮಾತುಕತೆ ನಡೆದಿತ್ತು. ಇದೇ ಕಾರಣಕ್ಕೆ ತೋಟದ ಮಾಲೀಕರಾದ ಭರತ್ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಘಟನೆ ವೇಳೆ ಕಿವಿಯಲ್ಲಿದ್ದ ಚಿನ್ನದ ಒಡವೆ ನಾಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಕಲೆಹಾಕುವ ಕೆಲಸ ಪೊಲೀಸರಿಂದಲೂ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More