AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು!

ಚಿಕ್ಕಮಗಳೂರಿನ ಹುಣಸೆಹಳ್ಳಿ ಕಾಫಿ ತೋಟದಲ್ಲಿ ಕಾಡಾನೆ ದಾಳಿಯಿಂದ 50 ವರ್ಷದ ಕಾರ್ಮಿಕ ಯಲ್ಲಪ್ಪ ಮೃತಪಟ್ಟಿದ್ದಾರೆ. ಬಾಳೆಹೊನ್ನೂರು ಅರಣ್ಯ ವಿಭಾಗದಲ್ಲಿ ಒಂದು ವಾರದಿಂದ ಓಡಾಡುತ್ತಿದ್ದ ಆನೆ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು 170 ಜನರು ಆನೆ ದಾಳಿಗೆ ಬಲಿಯಾಗಿದ್ದು, ಮಾನವ-ವನ್ಯಜೀವಿ ಸಂಘರ್ಷ ತೀವ್ರಗೊಂಡಿದೆ. ಇದು ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ.

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು!
ಸಾಂದರ್ಭಿಕ ಚಿತ್ರ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Feb 17, 2026 | 6:35 AM

Share

ಚಿಕ್ಕಮಗಳೂರು, ಫೆಬ್ರವರಿ 16: ಚಿಕ್ಕಮಗಳೂರು ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಕಾರ್ಮಿಕ ಯಲ್ಲಪ್ಪ ಆನೆ ದಾಳಿಗೆ (elephant attack) ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿರುವಳ್ಳಿ ಗ್ರಾಮದ ನಿವಾಸಿ ಯಲ್ಲಪ್ಪ, ನಾಗೇಶ್ ಗೌಡ ಅವರ ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ.

ಬಾಳೆಹೊನ್ನೂರು ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುತ್ತಾಡುತ್ತಿದ್ದ ಕಾಡಾನೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ದಾಳಿ ಮಾಡಿತ್ತು.ಈ ವೇಳೆ ಸ್ಥಳದಲ್ಲೇ ಯಲ್ಲಪ್ಪ ಮೃತಪಟ್ಟಿದ್ದು, ಪ್ರಾಥಮಿಕ ಪರಿಶೀಲನೆ ಮತ್ತು ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳ ಪರಿಶೀಲನೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಘಟನೆ ನಂತರ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಕಾಡಾನೆ ಸಂಚಾರವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದೆ.

ಇದನ್ನೂ ಓದಿ ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಅತಿ ಹೆಚ್ಚು ಜನ ಸಾಯುವುದೇ ಕಾಡು ಪ್ರಾಣಿ ದಾಳಿಯಿಂದ!

ಎಲ್ಲೆಲ್ಲಿ ಕಾಡಾನೆ ದಾಳಿಯಿಂದ ಸಾವು ನೋವು?

  • ಹನುಮಂತ, ಹಾಸನ ಸಮೀಪದ ರಾಮನಾಥಪುರದಲ್ಲಿ ಖಾಸಗಿ ಕಾಫಿ ತೋಟದಲ್ಲಿ ಆನೆ ದಾಳಿಗೆ ಬಲಿಯಾಗಿ ಮೃತಪಟ್ಟರು. ಎದೆ ಮತ್ತು ಹೊಟ್ಟೆಯ ಮೇಲೆ ತೀವ್ರ ಗಾಯಗಳಾಗಿದ್ದು, ನವೆಂಬರ್ 11, 2025 ರಂದು ಘಟನೆ ನಡೆದಿದೆ.
  • ಆಗಸ್ಟ್ 12, 2025 ರಂದು ನಂಜನಗೂಡು ಮೂಲದ ಬಸವರಾಜು ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫಿ ತೆಗೆಯಲು ಹೋಗಿ ದಾಳಿಗೆ ಒಳಗಾದರು. ಅರಣ್ಯ ಇಲಾಖೆ ನಂತರ ಪತ್ತೆ ಮಾಡಿ 25 ಸಾವಿರ ರೂ. ದಂಡ ವಿಧಿಸಿದೆ.
  • ರೈತ ಮಹೇಶ್, ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾಗ 9 ಕಾಡಾನೆಗಳ ಹಿಂಡು ದಾಳಿಗೆ ಬಲಿಯಾಗಿದ್ದರು. ಈ ಹಿನ್ನೆಲೆ  ಫೆಬ್ರವರಿ 8, 2026 ರಂದು ಚಾಮರಾಜನಗರದ ಗ್ರಾಮಸ್ಥರಿಂದ ರಸ್ತೆ ತಡೆ ಪ್ರತಿಭಟನೆ ನಡೆದಿತ್ತು.
  • ತಮಿಳುನಾಡಿನ ಮಾಕಪಾಳ್ಯ ನಿವಾಸಿ ಶಿವಮೂರ್ತಿ, ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಸಮೀಪ ಕಾಡಾನೆ ದಾಳಿಗೆ ಬಲಿಯಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದರು.
  • ಜನವರಿ 13ರಂದು ಮೋಗಲಿ ಗ್ರಾಮದಲ್ಲಿ ಕಾರ್ಮಿಕ ಮಹಿಳೆ ಶೋಭಾ (40) ಕಾಫಿ ತೋಟದಲ್ಲಿ ದುರ್ಘಟನೆಗೆ ಬಲಿಯಾಗಿದ್ದಾರೆ. ಪುತ್ರಿಯರಾದ ಶೋಭ ಮತ್ತು ರಾಗಿಣಿ ಜೊತೆ ಕೆಲಸಕ್ಕೆ ತೆರಳಿದ್ದರು.
  • ಡಿಸೆಂಬರ್ 14 ರಂದು ದುನ್ನಸಂದ್ರದಲ್ಲಿ ರೈತ ದುಂಡಮಾದ (50), ಬೆಳಗಿನ ಜಾವ ಜಮೀನಿಗೆ ನೀರು ಹಾಯಿಸಲು ಹೋಗಿ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
  • ಚಿಕ್ಕಮಗಳೂರಿನ ಕೆರೆಕಟ್ಟೆ ಗ್ರಾಮದಲ್ಲಿ ಆನೆ ತುಳಿತದ ವೇಳೆ ವಸಂತ್ (36) ಮತ್ತು ಮತ್ತೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದ ನಾಲ್ಕು ವರ್ಷಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನಗಳ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಸುಮಾರು 60% ರಷ್ಟು ಸಾವುಗಳು ಮಾನವ-ವನ್ಯಜೀವಿ ಸಂಘರ್ಷಣೆಯಿಂದಲೇ ಸಂಭವಿಸಿವೆ ಎಂದು ಹೇಳಲಾಗಿದೆ. ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು 170 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:40 pm, Mon, 16 February 26

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!