ಚಿಕ್ಕಮಗಳೂರು: ಪಕ್ಷ ತೊರೆದು ಬಿಜೆಪಿ ಸೇರಿದ್ದಕ್ಕೆ ಮನೆಗೆ ನುಗ್ಗಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರವಾಗುವುದು ಸಾಮಾನ್ಯ. ಅದರಂತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತನೊಬ್ಬನಿಗೆ ಕೈ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ಪಕ್ಷ ತೊರೆದು ಬಿಜೆಪಿ ಸೇರಿದ್ದಕ್ಕೆ ಮನೆಗೆ ನುಗ್ಗಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ಬಿಜೆಪಿ ಕಾರ್ಯಕರ್ತ ಶಿವು (ಎಡ ಚಿತ್ರ)
Follow us
TV9 Web
| Updated By: Rakesh Nayak Manchi

Updated on:Feb 01, 2023 | 3:43 PM

ಚಿಕ್ಕಮಗಳೂರು: ಪಕ್ಷ ತೊರೆದು ವಿರೋಧಿ ಪಕ್ಷ ಬಿಜೆಪಿ (BJP) ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ (Congress activists assaults on BJP worker) ನಡೆಸಿದ ಘಟನೆ ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ನಡೆದಿದೆ. ಶಿವು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ (MLA T.D.Rajegowda) ಹಿಂಬಾಲಕರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಕಾಂಗ್ರೆಸ್​ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಶಿವು ಕಳೆದ ತಿಂಗಳು ಪಕ್ಷ ತೊರೆದು ಕೇಸರಿ ಪಡೆ ಸೇರಿದ್ದರು. ಇದು ಶಾಸಕ ಟಿ.ಡಿ.ರಾಜೇಗೌಡ ಅವರ ಬೆಂಬಲಿಗರ ಕಣ್ಣು ಕೆಂಪಗಾಗಿಸಿದ್ದವು. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲಕರು ಗಲಾಟೆ ಕೂಡ ಮಾಡಿದ್ದರು. ಇಂದು ಮನೆಗೆ ನುಗ್ಗಿ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಶಿವುನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಸಂಬಂಧ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್​.ಆರ್​ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:43 pm, Wed, 1 February 23