ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜಾಮೀನು ರಹಿತ ವಾರಂಟ್ ಜಾರಿ

| Updated By: ವಿವೇಕ ಬಿರಾದಾರ

Updated on: Sep 23, 2022 | 10:31 PM

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರಂಟ್ ನೀಡಿದೆ.

ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜಾಮೀನು ರಹಿತ ವಾರಂಟ್ ಜಾರಿ
ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ
Follow us on

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಕ್ಷೇತ್ರದ ಬಿಜೆಪಿ (BJP) ಶಾಸಕ ಎಂ.ಪಿ.ಕುಮಾರಸ್ವಾಮಿ (M P Kumaraswamy) ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಮಾಡಿದೆ. ಎಂ.ಪಿ.ಕುಮಾರಸ್ವಾಮಿ ಅನಾರೋಗ್ಯದ ಕಾರಣ ನೀಡಿ ವಿಚಾರಣೆಗೆ ಗೈರಾಗಿದ್ದರು. ಆದರೆ ಅಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಕುರಿತು ಪತ್ರಿಕಾ ವರದಿಯನ್ನು ದೂರುದಾರ ಹೂವಪ್ಪಗೌಡ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಹೀಗಾಗಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ನೀಡಿ ಅ.10 ರಂದು ಎಂ.ಪಿ.ಕುಮಾರಸ್ವಾಮಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Fri, 23 September 22