AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಹಂದಿ ಶಿಕಾರಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಶವ ಹೂತು ಹಾಕಿದ್ದ ಮೂವರ ಬಂಧನ!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ಕಾಡುಹಂದಿ ಶಿಕಾರಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕರಿಯಪ್ಪ ಎಂಬುವರು ಮೃತಪಟ್ಟಿದ್ದಾರೆ. ಪ್ರಕರಣದಿಂದ ಬಚಾವ್ ಆಗಲು ಶವವನ್ನು ಗುಟ್ಟಾಗಿ ಹೂತುಹಾಕಿದ್ದ ಮೂವರು ಆರೋಪಿಗಳನ್ನು ಸಿಸಿಟಿವಿ ಆಧಾರದ ಮೇಲೆ ಯಗಟಿ ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಾಡುಹಂದಿ ಶಿಕಾರಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಶವ ಹೂತು ಹಾಕಿದ್ದ ಮೂವರ ಬಂಧನ!
ಮೃತ ಕರಿಯಪ್ಪ (55)
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 27, 2026 | 9:53 AM

Share

ಮುಖ್ಯಾಂಶಗಳು

  • ಶಿಕಾರಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕರಿಯಪ್ಪ ಎಂಬುವರು ಸಾವು.
  • ಯಾರೂ ಕಾಣದಂತೆ ಶವವನ್ನು ಗುಟ್ಟಾಗಿ ಹೂತುಹಾಕಿದ್ದ ಗ್ರಾಮದ ಮೂವರ ಬಂಧನ.
  • ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ ಪೊಲೀಸರಿಗೆ ಸಿಕ್ಕಿತು ಅಪರಾಧದ ಸುಳಿವು.

ಚಿಕ್ಕಮಗಳೂರು, ಜುಲೈ 27: ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಿಷಯ ಹೊರಬಾರದಂತೆ ಶವವನ್ನು ಹೂತುಹಾಕಿದ್ದ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ಈ ದೋರಣ ಘಟನೆ ನಡೆದಿದೆ. ಗ್ರಾಮದ ಕರಿಯಪ್ಪ (55) ಮೃತಪಟ್ಟ ದುರದೃಷ್ಟಕರ ವ್ಯಕ್ತಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅದೇ ಗ್ರಾಮದ ಚಂದ್ರಪ್ಪ, ಕೆಂಚಪ್ಪ ಮತ್ತು ಯದುಕುಮಾರ್ ಎಂಬುವವರನ್ನು ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ.

ನಡೆದಿದ್ದೇನು?

ದೊಣ್ಣೆಕೋರನಹಳ್ಳಿ ಗ್ರಾಮದ ಬಳಿ ಆರೋಪಿಗಳು ಕಾಡುಹಂದಿ ಬೇಟೆಯಾಡಲು ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಈ ವೇಳೆ ಅಲ್ಲಿಗೆ ತೆರಳಿದ್ದ ಕರಿಯಪ್ಪ ಅವರು ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆಯಿಂದ ಗಾಬರಿಗೊಂಡ ಆರೋಪಿಗಳು, ಪ್ರಕರಣದಿಂದ ನುಣುಚಿಕೊಳ್ಳಲು ಯಾರಿಗೆ ವಿಷಯ ತಿಳಿಯದಂತೆ ಕರಿಯಪ್ಪ ಅವರ ಶವವನ್ನು ಗುಟ್ಟಾಗಿ ಹೂತುಹಾಕಿ ಪುರಾವೆ ನಾಶಪಡಿಸಲು ಯತ್ನಿಸಿದ್ದಾರೆ.

ಸಿಸಿಟಿವಿ ಪರಿಶೀಲನೆಯಿಂದ ಬೆಳಕಿಗೆ ಬಂದ ಸತ್ಯ!

ಇತ್ತ ಕರಿಯಪ್ಪ ಅವರು ಮನೆಗೆ ವಾಪಸ್ ಬಾರದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಸುಳಿವು ಸಿಗದಿದ್ದಾಗ ಯಗಟಿ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು FIR ದಾಖಲಿಸಿದ್ದರು.

ಪ್ರಕರಣದ ಬೆನ್ನತ್ತಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ (CCTV) ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸುದೀರ್ಘವಾಗಿ ಪರಿಶೀಲಿಸಿದಾಗ ಅಸಲಿ ಸತ್ಯ ಹೊರಬಿದ್ದಿದೆ. ಪ್ರಕರಣದ ಗಂಭೀರತೆ ತಿಳಿದ ಗ್ರಾಮಸ್ಥರು ಯಗಟಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಸದ್ಯ ಯಗಟಿ ಠಾಣೆ ಪೊಲೀಸರು ಮೂವರನ್ನೂ ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್