ಚಿಕ್ಕಮಗಳೂರು: 55ರ ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ಆಕೆಯ ಪತಿಯನ್ನೇ ಕೊಲೆ ಮಾಡಿದ 33 ರ ಯುವಕ

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ವಿಚಿತ್ರ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. 55 ವರ್ಷದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ 33 ವರ್ಷ ವಯಸ್ಸಿನ ಯುವಕನೊಬ್ಬ, ಮಹಿಳೆಯ 60 ವರ್ಷದ ಪತಿಯನ್ನು ಸ್ನೇಹಿತರ ಜೊತೆಗೂಡಿ ಕೊಲೆ ಮಾಡಿ ಕಂಸಾಗರ ಗೇಟ್ ಬಳಿ ಸುಟ್ಟುಹಾಕಿದ್ದಾನೆ. ನಾಪತ್ತೆ ಪ್ರಕರಣ ತನಿಖೆ ನಡೆಸಿದ ಕಡೂರು ಪೊಲೀಸರಿಗೆ ವಾಸ್ತವ ಗೊತ್ತಾಗಿದ್ದು, ಯುವಕ ಪ್ರದೀಪ್ ಹಾಗೂ ಇತರ ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು: 55ರ ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ಆಕೆಯ ಪತಿಯನ್ನೇ ಕೊಲೆ ಮಾಡಿದ 33 ರ ಯುವಕ
ಬಂಧಿತ ಆರೋಪಿಗಳು
Updated By: ವಿವೇಕ ಬಿರಾದಾರ

Updated on: Jun 07, 2025 | 6:58 PM

ಚಿಕ್ಕಮಗಳೂರು, ಜೂನ್ 5: 55 ವರ್ಷದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಯುವಕನೊಬ್ಬ ಆಕೆಯ ಪತಿಯನ್ನು ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರಿನ (Chikmagalur) ಕಡೂರು ಪಟ್ಟಣದ ಕಂಸಾಗರ ಎಂಬಲ್ಲಿ ನಡೆದಿದೆ. ಮೃತದೇಹ ಸಿಕ್ಕಿದ್ದ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಅನೈತಿಕ ಸಂಬಂಧದ ಕಾರಣಕ್ಕೆ ಕೊಲೆಯಾಗಿರುವುದು ತಿಳಿದುಬಂದಿದೆ. ಸದ್ಯ ಯುವಕ ಸೇರಿದಂತೆ ಶವವನ್ನು ಸುಟ್ಟು ಪರಾರಿಯಾಗಿದ್ದ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಕಡೂರು ಪಟ್ಟಣದ ಕಂಸಾಗರ ಗೇಟ್ ಬಳಿ ಜೂನ್ ಎರಡರಂದು ಸಂಪೂರ್ಣ ಸುಟ್ಟು ಹೋಗಿ ಅಸ್ಥಿಪಂಜರದಂತಾಗಿದ್ದ ಶವ ಒಂದು ಪತ್ತೆಯಾಗಿತ್ತು. ಇದಕ್ಕೂ ಮುನ್ನ ನಾಪತ್ತೆ ಪ್ರಕರಣವೊಂದು ಕಡೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇದರ ಜಾಡು ಹಿಡಿದ ಪೊಲೀಸರಿಗೆ ಕೊಲೆ ರಹಸ್ಯ ಗೊತ್ತಾಗಿದೆ.

ನಡೆದಿದ್ದೇನು?

ಕಡೂರು ಪಟ್ಟಣದ ಕೋಟೆ ನಿವಾಸಿ ಸುಬ್ರಹ್ಮಣ್ಯ (60) ಎಂಬವರೇ ಹತ್ಯೆಯಾದ ವ್ಯಕ್ತಿ. ಇವರು ನಾಪತ್ತೆಯಾಗಿದ್ದಾರೆ ಎಂಬುದಾಗಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಡೂರು ಪಟ್ಟಣದ ಕೋಟೆ ಬಡಾವಣೆಯಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದ ಸುಬ್ರಹ್ಮಣ್ಯ ಅವರ 55 ವರ್ಷ ವಯಸ್ಸಿನ ಪತ್ನಿಯ ಜತೆ ಕೋಟೆ ಬಡಾವಣೆಯ ಪ್ರದೀಪ್ (33 ವರ್ಷ) ಎಂಬಾತನಿಗೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ಪ್ರದೀಪ್ ಎಂಬಾತ ಸುಬ್ರಹ್ಮಣ್ಯ ಅವರ ಮನೆಯ ನಿರ್ಮಾಣದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದ. ಇದೇ ನೆಪದಲ್ಲಿ, ಮನೆಯ ನಿರ್ಮಾಣದ ದಾಖಲೆಗಳನ್ನು ನೀಡುವಂತೆ ಸುಬ್ರಹ್ಮಣ್ಯ ಅವರನ್ನು ಕರೆಸಿ ಕೊಲೆ ಮಾಡಲಾಗಿದೆ. ಸ್ನೇಹಿತರಾದ ಸಿದ್ದೇಶ್, ವಿಶ್ವಾಸ್ ಜೊತೆ ಸೇರಿ ಸುಬ್ರಹ್ಮಣ್ಯ ಅವರನ್ನು ಪ್ರದೀಪ್ ಹತ್ಯೆ ಮಾಡಿದ್ದ.

ಇದನ್ನೂ ಓದಿ
ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದ ಪತಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ

ಇದನ್ನೂ ಓದಿ: ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ

ಕಂಸಾಗರ ಗೇಟ್ ಬಳಿ ಕರೆಸಿ ಸುಬ್ರಹ್ಮಣ್ಯ ಹತ್ಯೆ ಮಾಡಿದ್ದ ಪ್ರದೀಪ್ ಹಾಗೂ ಸ್ನೇಹಿತರು ಶವವನ್ನು ಸುಟ್ಟುಹಾಕಿ ತೆರಳಿದ್ದರು. ಮೇ 31 ರಂದು ಗಂಡ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಪತ್ನಿ ಮೀನಾಕ್ಷಮ್ಮ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ರಹಸ್ಯ ಗೊತ್ತಾಗಿದೆ.

ಸದ್ಯ ಪ್ರದೀಪ್ , ಸಿದ್ದೇಶ್, ವಿಶ್ವಾಸ್ ಬಂಧಿಸಿರುವ ಕಡೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Sat, 7 June 25