AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಗೇರಮರಡಿ ಗ್ರಾಮದಲ್ಲಿ ದಲಿತರ ಪ್ರತಿಭಟನೆ ತೀವ್ರ, ಉದ್ವಿಗ್ನ ಪರಿಸ್ಥಿತಿ

ದಲಿತ ಯುವಕರ ಪ್ರತಿಭಟನೆ ತೀವ್ರಗೊಂಡಿರುವುದರಿಂದ ಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತಹಶೀಲ್ದಾರ್, ಪಿ.ಎಸ್.ಐ. ದಲಿತ ಮುನ್ನೆಚ್ಚರಿಕಾ ಕ್ರಮಗಳ ನೇತೃತ್ವ ವಹಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ಗೇರಮರಡಿ ಗ್ರಾಮದಲ್ಲಿ ದಲಿತರ ಪ್ರತಿಭಟನೆ ತೀವ್ರ, ಉದ್ವಿಗ್ನ ಪರಿಸ್ಥಿತಿ
ಗೇರಮರಡಿ ಗ್ರಾಮದಲ್ಲಿ ದಲಿತರ ಪ್ರತಿಭಟನೆ ತೀವ್ರ, ಉದ್ವಿಗ್ನ ಪರಿಸ್ಥಿತಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 02, 2024 | 2:14 PM

Share

ಚಿಕ್ಕಮಗಳೂರು, ಜನವರಿ 2: ಚಿಕ್ಕಮಗಳೂರು (Chikkamagaluru) ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ಹೊಸ ವರ್ಷದಂದು ದಲಿತ ಯುವಕನ (Dalit Youth) ಮೇಲೆ ಹಲ್ಲೆ ನಡೆದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇದೇ ವೇಳೆ ದೇವಸ್ಥಾನಕ್ಕೆ ನುಗ್ಗಲು ದಲಿತ ಯುವಕರ ಯತ್ನಿಸಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು.

ದಲಿತ ಸಂಘಟನೆ ಕಾರ್ಯಕರ್ತರು ಊರಿನ ತುಂಬಾ ಮೆರವಣಿಗೆ ನಡೆಸಿದರು. ಗೊಲ್ಲರಹಟ್ಟಿ ತುಂಬಾ ಓಡಾಡಿದ ದಲಿತ ಯುವಕರು ಬಳಿಕ ದೇವಸ್ಥಾನಕ್ಕೆ ಹೋಗಲೇಬೇಕು ಎಂದು ದಲಿತ ಯುವಕರು ಪಟ್ಟು ಹಿಡಿದಿದ್ದಲ್ಲದೆ, ಒಳ ಪ್ರವೇಶಿಸಲು ಮುಂದಾದರು. ಆದರೆ, ದೇವಸ್ಥಾನ ಪ್ರವೇಶಕ್ಕೆ ದಲಿತರಿಂದಲೇ ವಿರೋಧ ವ್ಯಕ್ತವಾಯಿತು. ಬಾಗಿಲು ಹಾಕಿದೆ ಬೇಡ, ಇನ್ನೊಮ್ಮೆ ಬರೋಣ ಎಂದು ಕೆಲವರು ಮನವಿ ಮಾಡಿದರು. ಆದಾಗ್ಯೂ ಕೆಲ ದಲಿತ ಯುವಕರು ದೇವಸ್ಥಾನಕ್ಕೆ ಹೋಗಲೇ ಬೇಕು ಅಂತ ಪಟ್ಟು ಹಿಡಿದರು. ಬಳಿಕ ತಹಶೀಲ್ದಾರ್, ಪೊಲೀಸರ ಮಧ್ಯ ಪ್ರವೇಶದಿಂದ ವಾತಾವರಣ ತಿಳಿಯಾಯಿತು.

ದಲಿತ ಯುವಕರ ಪ್ರತಿಭಟನೆ ತೀವ್ರಗೊಂಡಿರುವುದರಿಂದ ಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತಹಶೀಲ್ದಾರ್, ಪಿ.ಎಸ್.ಐ. ದಲಿತ ಮುನ್ನೆಚ್ಚರಿಕಾ ಕ್ರಮಗಳ ನೇತೃತ್ವ ವಹಿಸಿಕೊಂಡಿದ್ದಾರೆ.

ಊರೊಳಗೆ ಬಂದಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲರಹಟ್ಟಿ ಜನ ಹಲ್ಲೆ ಮಾಡಿದ್ದರು. ದೇವರಿಗೆ ಮೈಲಿಗೆ ಆಗಿದೆ‌ ಎಂದು ಹಲ್ಲೆಗೈದಿದ್ದರು. ಇದರಿಂದ ದಲಿತ ಯುವಕರ ಆಕ್ರೋಶ ಕಟ್ಟೆ ಒಡೆದಿದೆ.

ಇದನ್ನೂ ಓದಿ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ, ಗೊಲ್ಲರ ಬೀದಿಗೆ ಕೆಲಸಕ್ಕೆ ಬಂದ ದಲಿತ ಯುವಕನ ಮೇಲೆ ಹಲ್ಲೆ

ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ನಡೆದಿದ್ದೇನು?

ದಲಿತ ಯುವಕ ಮಾರುತಿ ಗೊಲ್ಲರ ಬೀದಿಗೆ ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದ. ಮಾರುತಿ ದಲಿತ ಯುವಕ ಎಂದು ತಿಳಿಯುತ್ತಿದ್ದಂತೆ ಗೊಲ್ಲರ ಬೀದಿ ನಿವಾಸಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಯುವಕನಿಗೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್