AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ನಾಗೇಹನಹಳ್ಳಿಯಲ್ಲಿ 144 ಸೆಕ್ಷನ್​ ಜಾರಿ, ಶ್ರೀರಾಮ ಸೇನೆ ಮುಖಂಡ ರಂಜಿತ್ ಶೆಟ್ಟಿ ಅರೆಸ್ಟ್​

ದತ್ತಜಯಂತಿಯ ಕೊನೆಯ ದಿನವಾದ ಇಂದು (ಮಂಗಳವಾರ) ಶ್ರೀರಾಮ ಸೇನೆ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಗೇನಹಳ್ಳಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಚಿಕ್ಕಮಗಳೂರು: ನಾಗೇಹನಹಳ್ಳಿಯಲ್ಲಿ 144 ಸೆಕ್ಷನ್​ ಜಾರಿ, ಶ್ರೀರಾಮ ಸೇನೆ ಮುಖಂಡ ರಂಜಿತ್ ಶೆಟ್ಟಿ ಅರೆಸ್ಟ್​
ನಾಗೇನಹಳ್ಳಿ ದರ್ಗಾ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on:Dec 26, 2023 | 9:04 AM

Share

ಚಿಕ್ಕಮಗಳೂರು, ಡಿಸೆಂಬರ್​ 26: ದತ್ತಜಯಂತಿಯ (Datta Jayanti) ಕೊನೆಯ ದಿನವಾದ ಇಂದು (ಮಂಗಳವಾರ ಡಿ.26) ಶ್ರೀರಾಮ ಸೇನೆ ಚಿಕ್ಕಮಗಳೂರು (Chikkamgaluru) ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ (Nagenahalli Durga) ದತ್ತಜಯಂತಿ ಆಚರಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಗೇನಹಳ್ಳಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ದರ್ಗಾದ ಸುತ್ತ 200 ಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಪ್ರವೇಶಿಸದಂತೆ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್, ಶ್ರೀರಾಮ ಸೇನೆ ಮುಖಂಡ ಗಂಗಾಧರ್ ಕುಲಕರ್ಣಿ ಅವರಿಗೆ ನಿಷೇಧ ಹೇರಲಾಗಿದೆ. ಇನ್ನು ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ ಅವರನ್ನು ಬಸವನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ನಿಶ್ಚಯಿಸಿದ್ದ ಶ್ರೀರಾಮಸೇನೆ

ನಾಗೇನಹಳ್ಳಿ ದರ್ಗಾದಲ್ಲೂ ದರ್ಗಾದಲ್ಲಿಇದೆ ಮೊದಲ ಬಾರಿಗೆ ದತ್ತಜಯಂತಿ ಆಚರಣೆಗೆ ರಾಮಸೇನೆ ಪ್ಲಾನ್​ ಮಾಡಿಕೊಂಡಿತ್ತು. ಮುಸ್ಲಿಂರು ನಮ್ಮ ದತ್ತಪೀಠದಲ್ಲಿ ಉರುಸ್ ಆಚರಣೆ ಮಾಡುತ್ತಾರೆ. ನಾವು ನಾಗೇನಹಳ್ಳಿ ದರ್ಗಾದಲ್ಲಿ ಡಿ.26ರಂದು ದತ್ತಜಯಂತಿ ಆಚರಣೆ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಹೇಳಿದ್ದರು.

ಇದನ್ನೂ ಓದಿ: ದತ್ತಾತ್ರೆಯ ಜಯಂತಿಯ ಮಹತ್ವ ಏನು ? ಇಲ್ಲಿದೆ ನೋಡಿ

ದತ್ತಮಾಲಾ ಅಭಿಯಾನ

ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮಸೇನೆ ಇತ್ತೀಚೆಗೆ 7 ದಿನಗಳ ದತ್ತಮಾಲಾ ಅಭಿಯಾನವನ್ನು ಆರಂಭಿಸಿತ್ತು. ಈ ಬಾರಿ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆದಿದ್ದು ರಾಜ್ಯಾದ್ಯಂತ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿ ಏಳು ದಿನ ಅಭಿಯಾನ ಕೈಗೊಂಡಿದ್ದರು.

ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ: 4 ಸಾವಿರ ಪೊಲೀಸರ ನಿಯೋಜನೆ

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ 28 ಚೆಕ್​ಪೋಸ್ಟ್​, 300ಕ್ಕೂ ಹೆಚ್ಚು ಸಿಸಿ ಕ್ಯಾಮರಾ, 50ಕ್ಕೂ ಬಾಡಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 am, Tue, 26 December 23

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್