AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ, ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ​ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದ್ದು, ಐವರನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ, ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಕೊಲೆ ಆರೋಪಿಗಳಲ್ಲಿ ಒಬ್ಬನಾದ ಮಿಥುನ್ (ಎಡಚಿತ್ರ) ಹಾಗೂ ಕೊಲೆಯಾದ ಗಣೇಶ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Dec 06, 2025 | 11:51 AM

Share

ಚಿಕ್ಕಮಗಳೂರು, ಡಿಸೆಂಬರ್ 6: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು.

ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶಾಸಕ ಆನಂದ್ ಹೇಳಿದ್ದೇನು?

ಘಟನೆಯ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ‘ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದೆ. ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

ಕಾರಿನಲ್ಲಿ ತೆರಳುತ್ತಿದ್ದ ಗಣೇಶ್​ನನ್ನು ಬೈಕ್​ನಲ್ಲಿ ಅಡ್ಡಗಟ್ಟಿ ಹಲ್ಲೆ, ಕೊಲೆ

ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಕಲ್ಮರಡಿ‌ ಮಠದ‌ ಕಿರಿದಾದ ರಸ್ತೆಯಲ್ಲಿ ಕಾರಿನಲ್ಲಿ ‌ತೆರಳುತ್ತಿದ್ದಾಗ ಬೈಕ್​​ನಲ್ಲಿ ಅಡ್ಡಗಟ್ಟಿದ ಹಂತಕರ ತಂಡ ಅವರ ಮೇಲೆ ಮಚ್ಚಿನಿಂದ ದಾಳಿ ಮಾಡಿದೆ. ನಂತರ ಮಚ್ಚನ್ನು ಅಲ್ಲೇ ಬಿಸಾಡಿ ಹಂತಕರು ತೆರಳಿದ್ದಾರೆ. ಸದ್ಯ ಆ ಮಚ್ಚು ರಸ್ತೆಯಲ್ಲೇ ಬಿದ್ದಿದೆ.

ಘಟನೆ ಸಂಬಂಧ ಸಖರಾಯಪಟ್ಟಣ ಪೊಲೀರು ಈವರೆಗೆ ಐವರನ್ನು ವಶಕ್ಕೆ ಪಡೆದಿದ್ದಾರೆ. ಸಂಜಯ್, ಭೂಷಣ್‌, ಮಿಥುನ್‌ ಸೇರಿದಂತೆ ‌5 ಜನರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಸೈಬರ್​​ ಕ್ರೈಂ​ ತಡೆಗೆ ಕರ್ನಾಟಕದ ದಿಟ್ಟ ಹೆಜ್ಜೆ: 2025ರಲ್ಲಿ ಕೇಸ್​​ಗಳ ಸಂಖ್ಯೆ 13,000ಕ್ಕೆ ಇಳಿಕೆ

ಘಟನೆ ಸಂಬಂಧ ಬಜರಂಗದಳದ 6 ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಆರೋಪಿಗಳಾದ ಸಂಜಯ್, ನಿತಿನ್, ನಾಗಭೂಷಣ್, ದರ್ಶನ್, ಅಜಯ್‌ ಸೇರಿದಂತೆ ಇತರರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಸದ್ಯ ಸಂಜಯ್, ನಾಗಭೂಷಣ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮಿಥುನ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 am, Sat, 6 December 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್