AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್​ ಸ್ವಾಮಿ ದರ್ಗಾ ವಿವಾದ: ಹಿಂದೂ ಸಂಘಟನೆಗಳಿಂದ ಉತ್ಖನಕ್ಕೆ ಪಟ್ಟು

ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ದತ್ತಪೀಠದಲ್ಲಿ ನಕಲಿ ಗೋರಿ ನಿರ್ಮಿಸಿದ್ದು, ಈ ಬಗ್ಗೆ ಸತ್ಯ ತಿಳಿಯಲು ಜಿಪಿಎಸ್​ ಆಧುನಿಕ ತಂತ್ರಜ್ಞಾನ ಬಳಸಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿವೆ.

ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್​ ಸ್ವಾಮಿ ದರ್ಗಾ ವಿವಾದ: ಹಿಂದೂ ಸಂಘಟನೆಗಳಿಂದ ಉತ್ಖನಕ್ಕೆ ಪಟ್ಟು
ಬಾಬಾ ಬುಡನ್​ ಸ್ವಾಮಿ ದರ್ಗಾ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 11, 2025 | 9:44 AM

Share

ಚಿಕ್ಕಮಗಳೂರು, ಆಗಸ್ಟ್​ 11: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್​ ಸ್ವಾಮಿ ದರ್ಗಾ (bababudangiri inam datta peetha) ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಎಸ್​ಐಟಿ (SIT) ರಚನೆ ಮಾಡಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ‌ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

ತಂತ್ರಜ್ಞಾನ ಬಳಸಿ ಉತ್ಖನನ ಮಾಡುವಂತೆ ಮನವಿ

ದತ್ತಪೀಠ ಹಿಂದೂಗಳ ಪೀಠ ದತ್ತಾತ್ರೇಯ ಸ್ವಾಮಿ ತಪಸ್ಸು ಮಾಡಿದ ಜಾಗ. ನಕಲಿ ಗೋರಿ ನಿರ್ಮಿಸಿದ್ದು ಈ ಬಗ್ಗೆ ಸತ್ಯ ತಿಳಿಯಲು ಜಿಪಿಎಸ್​ ಆಧುನಿಕ ತಂತ್ರಜ್ಞಾನ ಬಳಸಿ ಉತ್ಖನನ ಮಾಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಹಿಂದೂ ಸಂಘಟನೆ ಮುಖಂಡ ರಘು ಸಕಲೇಶಪುರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ದತ್ತಪೀಠದಲ್ಲಿನ ಗೋರಿಗಳಿಗೆ ಕುಂಕುಮ ಹಚ್ಚಿ ಪೂಜೆ: ಮುಸ್ಲಿಂ ಮುಖಂಡರ ಪ್ರತಿಭಟನೆ

ಇದನ್ನೂ ಓದಿ
Image
ಬಾಬಾಬುಡನ್​ಗಿರಿ ದತ್ತಪೀಠ ಮತ್ತೊಂದು ವಿವಾದ: ಹಿಂದೂ ಸಂಘಟನೆಗಳು ಆಕ್ರೋಶ
Image
Dattapeeta: ಇಂದು ಚಿಕ್ಕಮಗಳೂರಿನಲ್ಲಿ ಶ್ರೀಗುರುದತ್ತಾತ್ರೇಯ ಜಯಂತಿ
Image
Datta Peetha: ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ, ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್​ ಸೂಚನೆ
Image
ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್​ಗಿರಿ ಉಲ್ಲೇಖಕ್ಕೆ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಆಕ್ಷೇಪ

2017ರ ಡಿಸೆಂಬರ್ 3 ರಂದು ದತ್ತ ಜಯಂತಿ ದಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಿದ್ದ ಘಟನೆ ನಡೆದಿತ್ತು. ಈ ಕುರಿತಾಗಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಸುಮಾರು 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು.

ಅದೇ ರೀತಿಯಾಗಿ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿನ ಗೋರಿಗಳಿಗೆ ಅರ್ಚಕರು ಕುಂಕುಮ ಹಚ್ಚಿ, ಪೂಜೆ ಮಾಡಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ಆರೋಪಗಳು ಕೇಳಿಬಂದಿದ್ದವು. ಘಟನೆ ಖಂಡಿಸಿ ಶಾಖಾದ್ರಿ ಕುಟುಂಬಸ್ಥರು ದರ್ಗಾದ ಎದರು ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ: Datta Peetha: ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ, ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್​ ಸೂಚನೆ

ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಖಾದ್ರಿ ಕುಟುಂಬಸ್ಥರು ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳ ಮಧ್ಯೆ ವಾಗ್ವಾದ ಕೂಡ ನಡೆದಿತ್ತು. ಮುಸ್ಲಿಂ ಮುಖಂಡರು ಗ್ರಾಮಾಂತರ ಪೊಲೀಸ್ ‌ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ