ದತ್ತಪೀಠದಲ್ಲಿ ಇಂದು ದತ್ತಮಾಲಾ ಅಭಿಯಾನ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್
ಚಿಕ್ಕಮಗಳೂರು ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್ಗಳನ್ನು ನೇಮಕ ಮಾಡಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಸಿಸಿಕ್ಯಾಮರಾ, ಡ್ರೋನ್ ಕಣ್ಗಾವಲು ಇರಿಲಸಾಗಿದೆ. ರಾಜ್ಯಾದ್ಯಂತ ದತ್ತಮಾಲಾ ಧರಿಸಿರುವ 5000ಕ್ಕೂ ಹೆಚ್ಚು ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕರ್ತರು ಶ್ರೀಗುರು ದತ್ತಾತ್ರೇಯರ ಪಾದುಕೆ ದರ್ಶನ ಪಡೆದು ಹೋಮ, ಪೂಜೆ ನರವೇರಿಸಲಿದ್ದಾರೆ.
ಚಿಕ್ಕಮಗಳೂರು ನ.05: ದತ್ತಮಾಲೆ (Dattamale) ಧರಿಸಿದ ಶ್ರೀರಾಮ ಸೇನೆ (Sriram Sene) ಕಾರ್ಯಕರ್ತರು ಇಂದು (ನ.05) ಚಿಕ್ಕಮಗಳೂರು (Chikkamagaluru) ತಾಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದತ್ತಪೀಠ ಸೇರಿದಂತೆ ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್ಗಳನ್ನು ನೇಮಕ ಮಾಡಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಸಿಸಿಕ್ಯಾಮರಾ, ಡ್ರೋನ್ ಕಣ್ಗಾವಲು ಇರಿಲಸಾಗಿದೆ. ರಾಜ್ಯಾದ್ಯಂತ ದತ್ತಮಾಲಾ ಧರಿಸಿರುವ 5000ಕ್ಕೂ ಹೆಚ್ಚು ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕರ್ತರು ಶ್ರೀಗುರು ದತ್ತಾತ್ರೇಯರ ಪಾದುಕೆ ದರ್ಶನ ಪಡೆದು ಹೋಮ, ಪೂಜೆ ನರವೇರಿಸಲಿದ್ದಾರೆ.
7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮ ಸೇನೆ
ದತ್ತಮಾಲೆ ಅಭಿಯಾನದ ಮೂಲಕ ಶ್ರೀರಾಮ ಸೇನೆ ಕಾರ್ಯಕರ್ತರು ಏಳು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಡಲಿದೆ. ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು. ದತ್ತಪೀಠದಲ್ಲಿ ಇಸ್ಲಾಂ ಚಟುವಟಿಕೆಗೆ ಅವಕಾಶ ನೀಡಬಾರದು. ದತ್ತಪೀಠದಲ್ಲಿ ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು. ಉರ್ದು ನಾಮಫಲಕವನ್ನ ತೆಗೆಯಬೇಕು. ದತ್ತಪೀಠದಲ್ಲಿರುವ ಗೋರಿಗಳ ಸ್ಥಳಾಂತರಿಸಬೇಕು ಎಂದು ಆಗ್ರಹಿಸಲಿದ್ದಾರೆ.
ಇದನ್ನೂ ಓದಿ: ಮತ್ತೆ ಮುನ್ನಲೆಗೆ ಬಂದ ದತ್ತಪೀಠ ವಿವಾದ: ಇಸ್ಲಾಂ ಆಚರಣೆಗೆ ಶ್ರೀರಾಮಸೇನೆ ವಿರೋಧ
ದತ್ತಮಾಲೆ ವೈಶಿಷ್ಯ
ಶ್ರೀಗರು ದತ್ತಾತ್ರೇಯರನ್ನು ನೆನಸಿಕೊಂಡು ದತ್ತಾಮಾಲೆ ಧಾರಾಣೆ ಮಾಡಲಾಗುತ್ತದೆ. ಸುಮಾರು ಏಳು ದಿನಗಳ ಕಾಲ ರಾಜ್ಯದ ವಿವಿಧಡೆ ಇರುವ ದತ್ತಾತ್ರೇಯ ಭಕ್ತರು ಮಡಿ, ಜಪ-ತಪಾಗಳಿಂದ ಶ್ರೀಗುರುಗಳ ಆರಾಧನೆ ಮಾಡುತ್ತಾರೆ. ಗುರು ದತ್ತರನ್ನು ನೆನಪಿಸಿಕೊಂಡು ಮಾಲಧಾರಣೆ ಮಾಡಿ, ಹೋಮ, ಹವನ ಜಪ, ಭಜನೆಗಳ ಮೂಲಕ ದತ್ತಾತ್ರೇಯರಿಗೆ ಭಕ್ತಿಯಿಂದ ಪೂಜಿಸುತ್ತಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ