ಪ್ರವಾಸಿಗರ ಸ್ವರ್ಗದಲ್ಲಿ ಹೊಸ ರೂಲ್ಸ್: ಚಿಕ್ಕಮಗಳೂರು ಟ್ರಿಪ್ ಹೋಗುವವರು ತಿಳಿದುಕೊಳ್ಳಲೇಬೇಕು

ಕಾಫಿನಾಡು ಚಿಕ್ಕಮಗಳೂರು ಹಚ್ಚ ಹಸಿರಿನ ಪರ್ವತ ಶ್ರೇಣಿಗಳು, ಮಂಜಿನ ಮುಸುಕು, ಸುರಿಯುವ ಜರಿಗಳಿಗೆ ಹೆಸರಾಗಿದೆ. ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಬಗೆ ಬಗೆಯ ಹೂವು, ಗಿಡ-ಮರಗಳನ್ನೊಳಗೊಂಡ ಪ್ರಕೃತಿ ಪ್ರವಾಸಿಗರನ್ನು ಕೈ ಬೀಸಿ ತನ್ನತ್ತ ಕರೆಯುತ್ತೆ. ಗಿರಿ-ಪರ್ವತ ಶ್ರೇಣಿಗಳ ಸಾಲುಗಳ ಸೌಂದರ್ಯವನ್ನು ಸವಿಯಲು ಪ್ರವಾಸಿಗರೂ ಸಹ ಹೆಚ್ಚಾಗಿ ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಆದ್ರೆ, ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್​ ಜಾರಿ ಮಾಡಲಾಗಿದೆ.

ಪ್ರವಾಸಿಗರ ಸ್ವರ್ಗದಲ್ಲಿ ಹೊಸ ರೂಲ್ಸ್: ಚಿಕ್ಕಮಗಳೂರು ಟ್ರಿಪ್ ಹೋಗುವವರು ತಿಳಿದುಕೊಳ್ಳಲೇಬೇಕು
Mullayanagiri
Image Credit source: shanthikunnj.com
Edited By:

Updated on: Apr 02, 2026 | 6:41 PM

ಚಿಕ್ಕಮಗಳೂರು, (ಏಪ್ರಿಲ್ 02):  ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ (Chikmagalur) ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ವಿಶ್ವ ಪ್ರಸಿದ್ಧ ಎತ್ತರದ ಶಿಖರ ಮುಳ್ಳಯ್ಯನಗಿರಿ (Mullayanagiri) ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್ ಮಾಡಲಾಗಿದೆ. ಹೌದು…ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.

ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತೆರಳದಂತೆ ಪ್ರವಾಸೋದ್ಯಮ ಇಲಾಖೆ ಸೂಚನ ಫಲಕಗಳ ಅಳವಡಿಸಿದೆ. ಇನ್ನು ಪ್ರವಾಸಿಗರು ಝರಿ ಫಾಲ್ಸ್ ಗೆ ಕಾಲ್ನಡಿಗೆಯಲ್ಲಿ ತೆರಳಲು ಅನುಮತಿ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ವರು ಆದೇಶ ಹೊರಡಿಸಿದ್ದಾರೆ.

ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ ಸೇರಿದಂತೆ ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಗಾಳಿಕೆರೆ ಹೊನ್ನಮ್ಮನ ಹಳ್ಳಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ನಿತ್ಯವೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಈಗ ಸ್ಕೂಲ್ ಹಾಲಿಡೇಸ್ ಇರುವುರಿದ ಪೋಷಕರು ಮಕ್ಕಳ ಸಮೇತ ಪ್ರವಾಸಕ್ಕೆ ಆಗಮಿಸುತ್ತಾರೆ. ಹೀಗಾಗಿ ಮತ್ತಷ್ಟು ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ, ಅಲ್ಲದೇ ಹೆಚ್ಚು ಹೊತ್ತು ಮೋಜು ಮಸ್ತಿಗೆ ಜಿಲ್ಲಾಡಳಿ ಬ್ರೇಕ್ ಹಾಕಿದೆ.

ಇದನ್ನೂ ಓದಿ

ಇದನ್ನೂ ಓದಿ: Karnataka 2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ, ಆನ್​ಲೈನಲ್ಲಿ ನೋಡೋದು ಹೇಗೆಂಬ ಮಾಹಿತಿ ಇಲ್ಲಿದೆ

ಪ್ರವಾಸಿಗರ ಸ್ವರ್ಗ ಚಿಕ್ಕಮಗಳೂರು

ಕರ್ನಾಟಕದಲ್ಲಿ ಪ್ರಕೃತಿ ಸೌಂದರ್ಯದೊಂದಿಗೆ ಪ್ರವಾಸಿ ತಾಣಗಳನ್ನು ನೋಡಬೇಕೆಂದರೆ ಚಿಕ್ಕಮಗಳೂರಿಗೆ ಹೋಗಬೇಕು. ಬೆಂಗಳೂರಿನಿಂದ ಚಿಕ್ಕಮಗಳೂರು ಸುಮಾರು 250 ರಿಂದ 265 ಕಿ.ಮೀ ದೂರದಲ್ಲಿದ್ದು, ಚಿಕ್ಕಮಗಳೂರಿನಲ್ಲಿ ನೋಡಬೇಕಾದ ಸಾಕಷ್ಟು ಪ್ರವಾಸಿ ಆಕರ್ಷಣೆಗಳಿವೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಮಾಣಿಕ್ಯಧಾರ ಜಲಪಾತ, ಕಲ್ಹಟ್ಟಿ ಜಲಪಾತ, ಮುಳ್ಳಯ್ಯನಗಿರಿ, ಹೆಬ್ಬೆ ಜಲಪಾತ, ಬಾಬಾ ಬುಡನ್‌ಗಿರಿ, ಕೆಮ್ಮಣ್ಣುಗುಂಡಿ, ಭದ್ರಾ ವನ್ಯಜೀವಿ ಧಾಮ, ಕಾಫಿ ವಸ್ತು ಸಂಗ್ರಹಾಲಯ, ಕದಂಬಿ ಜಲಪಾತ, ಝಡ್ ಪಾಯಿಂಟ್ ಸೇರಿದಂತೆ ಇನ್ನು ಹಲವಾರು ಪ್ರವಾಸಿ ತಾಣಗಳು ಪ್ರವಾಸಿಗರ ಕಣ್ಮನಸೆಳೆಯುವಂತಿವೆ.

ಚಳಿಗಾಲದಲ್ಲಿ ಜಿನುಗುವ ಮಂಜು ನೋಡುವುದೇ ಒಂದು ಮಜಾ. ಇನ್ನು ಮಳೆಗಾಲದಲ್ಲಿ ಎಲ್ಲಿ ನೋಡಿದರೂ ಅಲ್ಲಿ ಹಚ್ಚ ಹಸಿರಿನಿಂದ ಕೂಡಿರುತ್ತೆ. ಕಣ್ಣು ಹಾಯಿಸುವ ಕಡೆಗಳಲ್ಲಿ ವಿವಿಧ ಬಗೆಯ ಹೂವುಗಳು ಗಿಡಿ ಮರಗಳ ಪ್ರಕೃತಿ ಸೌಂದರ್ಯವನ್ನು ಸವಿಯಬಹುದು.

ನೀವೇನಾದರೂ ಚಿಕ್ಕಮಗಳೂರು ಟ್ರಿಪ್ ಹೋಗುವ ಪ್ಲ್ಯಾನ್ ಮಾಡಿದರೆ ಮೇಲೆ ತಿಳಿಸಲಾದ ನಿಯಮಗಳನ್ನು ತಿಳಿದುಕೊಂಡು ಹೋಗಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Thu, 2 April 26

Follow Us