ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ; ಅರಣ್ಯ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು

ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ‌ದರ್ಗಾದ ಶಾಖಾದ್ರಿ ಮನೆಯಲ್ಲಿ ಹುಲಿ ಚರ್ಮ ಇಟ್ಟುಕೊಂಡಿದ್ದಾರೆಂದು ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಶುಕ್ರವಾರ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಶೀಲನೆ ವೇಳೆ ಚಿರತೆ, ಜಿಂಕೆ ಮತ್ತು ಚರ್ಮ ಪತ್ತೆಯಾಗಿತ್ತು.

ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ; ಅರಣ್ಯ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು
ಬಾಬಾ ಬುಡನ್​ಸ್ವಾಮಿ ದರ್ಗಾ ಶಾಖಾದ್ರಿ ನಿವಾಸದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Oct 28, 2023 | 9:57 AM

ಚಿಕ್ಕಮಗಳೂರು ಅ.28: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ‌ದರ್ಗಾದ ಶಾಖಾದ್ರಿ (Dattatreya Baba Budan Dargah chief) ಹಜರತ್ ಸೈಯದ್ ಗೌತ್ ಮೊಹಿದ್ದೀನ್ ಮನೆಯಲ್ಲಿ ಹುಲಿ‌, ಚಿರತೆ, ಜಿಂಕೆ ಚರ್ಮ (Deer skin) ಪತ್ತೆಯಾದ ಹಿನ್ನೆಲೆಯಲ್ಲಿ ಶಾಖಾದ್ರಿ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1972 ರ ಅಡಿ ಪ್ರಕರಣ ದಾಖಲಾಗಿದೆ. ಇದೀಗ ಅರಣ್ಯ ಇಲಾಖೆ ಸಿಬ್ಬಂದಿ (Forest Department Officer) ಶಾಖಾದ್ರಿ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ.

ಶಾಖಾದ್ರಿ ಮನೆಯಲ್ಲಿ ಹುಲಿ ಚರ್ಮ ಇಟ್ಟುಕೊಂಡಿದ್ದಾರೆಂದು ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಶುಕ್ರವಾರ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಶೀಲನೆ ವೇಳೆ ಚಿರತೆ, ಜಿಂಕೆ ಮತ್ತು ಚರ್ಮ ಪತ್ತೆಯಾಗಿತ್ತು. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚರ್ಮದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು ಶಾಖಾದ್ರಿ ಶುಕ್ರವಾರದಿಂದ ಅಧಿಕಾರಿಗಳ ತನಿಖೆಗೆ ಸಹಕಾರ ನೀಡದೆ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಉಪ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನೇ ಗುರಿಯಾಗಿಸುತ್ತಿದೆ. ದರ್ಗಾಗಳಲ್ಲಿ ನವಿಲು ಗರಿ ಬಳಸುತ್ತಿಲ್ಲವೇ ಎಂದು ಕೆಲವು ಮಂದಿ ಬಿಜೆಪಿ ನಾಯಕರು ಪ್ರಶ್ನಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನೂ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪ ಕೇಳಿಬಂದಿತ್ತು. ಆದರೆ, ಅದು ನಕಲಿ ಎಂದು ಸಚಿವೆ ಸ್ಪಷ್ಟಪಡಿಸಿದ್ದರು. ವನ್ಯಜೀವಿ ಸಂರಕ್ಷಣೆ ಕಾನೂನಿನ ವಿಚಾರದಲ್ಲಿ ಒಬ್ಬರಿಗೆ ಒಂದು ನ್ಯಾಯ ಇನ್ನೊಬ್ಬರಿಗೆ ಇನ್ನೊಂದು ನ್ಯಾಯ ಎಂಬಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ತಾರತಮ್ಯ ಎಸಗುತ್ತಿದೆ ಎಂದೂ ಪ್ರತಿಪಕ್ಷಗಳು ಆರೋಪಿಸಿದ್ದವು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಬಾಬಾ ಬುಡನ್​ಸ್ವಾಮಿ ದರ್ಗಾದ ಶಾಖಾದ್ರಿ ಗೌಸ್ ಮೊಹಿದ್ದೀನ್ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: ಹುಲಿ ಉಗುರು ವಿವಾದ: ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ಅಮಾನತು

ಏನಿದು ಹುಲಿ ಉಗುರು ವಿವಾದ

ಹುಲಿ ಉಗುರು ಧರಿಸಿದ್ದ ವರ್ತೂರು ಸಂತೋಷ್ ಅವರನ್ನು ಕಳೆದ ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆತಂದಿದ್ದಾರೆ. ಸದ್ಯ ವರ್ತೂರು ಸಂತೋಷ್​​​ ಅವರಿಗೆ ಜಾಮೀನು ಸಿಕ್ಕಿತ್ತು. ಇವರ ಬಂಧನ ಬಳಿಕ ಹುಲಿ ಉಗುರು ಪ್ರಕರಣದ ರಾಜ್ಯದಲ್ಲಿ ಒಂದು ಮಟ್ಟಿಗೆ ಕಾವು ಎದ್ದಿತ್ತು. ಆದರೆ ಯಾವಾಗ ಕನ್ನಡದ ಖ್ಯಾತ ಚಲನಚಿತ್ರ ನಟರೂ ಹುಲಿ ಉಗುರು ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು ಈ ಕಾವು ಜಾಸ್ತಿ ಆಯ್ತು. ಈ ಹುಲಿ ಉಗುರಿನ ನಂಜು ರಾಜಕಾರಣಿ, ಅಧಿಕಾರಿಗಳಿಗೆ ಮಾತ್ರವಲ್ಲದೆ ಸ್ವಾಮೀಜಿ ಮತ್ತು ಶಾಖಾದ್ರಿಯರಿಗೂ ಅಂಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:17 am, Sat, 28 October 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್