AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಹಾಸ್ ಹತ್ಯೆ, ಪಹಲ್ಗಾಮ್​​ ಉಗ್ರರ ದಾಳಿ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್​​ಗೆ ಕರೆ

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಒಂದು ಕಡೆಯಾದರೆ, ಇತ್ತ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಯನ್ನು ಖಂಡಿಸಿ, ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡಿದೆ. ನಾಳೆ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ಆಚರಿಸಲು ನಿರ್ಧರಿಸಲಾಗಿದೆ.

ಸುಹಾಸ್ ಹತ್ಯೆ, ಪಹಲ್ಗಾಮ್​​ ಉಗ್ರರ ದಾಳಿ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್​​ಗೆ ಕರೆ
ನಾಳೆ ಚಿಕ್ಕಮಗಳೂರು ಬಂದ್​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: May 04, 2025 | 9:33 AM

Share

ಚಿಕ್ಕಮಗಳೂರು, ಮೇ 04: ಪಹಲ್ಗಾಮ್​​ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (VHP) ನಾಳೆ (ಮೇ 05) ಬಂದ್​ಗೆ ಕರೆ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಭಜರಂಗದಳ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಪಾಕಿಸ್ತಾನದ ಮುಸ್ಲಿಂರು ಹಿಂದೂಗಳನ್ನ ಹತ್ಯೆ ಮಾಡುತ್ತಿದ್ದಾರೆ. ಭಜರಂಗದಳದ ಕಾರ್ಯಕರ್ತರನ್ನ ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದಾರೆ. ಇದನ್ನ ಖಂಡಿಸಿ ನಾವು ಚಿಕ್ಕಮಗಳೂರು ಬಂದ್ ಕರೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು? ಅವರ ಹಿನ್ನೆಲೆ ಏನು?

ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು, ಹೋಟೆಲ್ ಬಂದ್ ಮಾಡಲು ಮನವಿ ಮಾಡಿರುವುದಾಗಿ ರಂಗನಾಥ್​ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಸದ್ಯ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಹಿಂದೂಗಳು ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ ಎಂದು ನಿನ್ನೆ ಮಂಗಳೂರು ಪೊಲೀಸ್​ ಆಯುಕ್ತ ಅನುಪಮ್ ಅಗರ್ವಾಲ್​ ಹೇಳಿದ್ದಾರೆ.

ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್

ಇನ್ನು ಬಂಧಿತ ಇಬ್ಬರು ಹಿಂದೂಗಳಾದ ನಾಗರಾಜ್ ಮತ್ತು ರಂಜಿತ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು. ಹೀಗಾಗಿ ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಪಕ್ಕದ ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಚಾರ್ಮಾಡಿ ಘಾಟಿ ಮಾರ್ಗವಾಗಿ ಬರುವ ಪ್ರತಿ ವಾಹನಗಳನ್ನ‌ ತಪಾಸಣೆ ನಡೆಸಿದ್ದಾರೆ.

ದಿನದ 24 ಗಂಟೆಗಳ ಕಾಲ ಕೊಟ್ಟಿಗೆಹಾರ ಚೆಕ್​ ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದು, ಜಿಲ್ಲೆಗೆ ಬರುವ ಮತ್ತು ಹೊರ ಹೋಗುವ ಪ್ರತಿಯೊಬ್ಬರ ಮೇಲು ಪೊಲೀಸ್ ಇಲಾಖೆ ಕಣ್ಣಿಟ್ಟಿದೆ . ಕೋಮು ಸೂಕ್ಷ್ಮ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಹೈ ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್

ಇನ್ನು ಸುಹಾಸ್ ಶೆಟ್ಟಿ ಹತ್ಯೆ, ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ನಿನ್ನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಂದ್ ಕರೆ ನೀಡಲಾಗಿತ್ತು. ಹಿಂದೂ ಸಂಘಟನೆಗಳು ಕರೆದ ಆಲ್ದೂರು ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!