ಚಿಕ್ಕಮಗಳೂರು: ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ

ಚಿಕ್ಕಮಂಗಳೂರಿನ ದೋಣಿಕಣ ಬಡಾವಣೆಯಲ್ಲಿ ವೈದ್ಯ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಗಂಡ ವೃತ್ತಿಯಲ್ಲಿ ವೈದ್ಯನಾಗಿದ್ದರೂ ಮಾನವೀಯತೆಯನ್ನೇ ಮರೆತು ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಪತಿ ಡಾ, ರವಿಕುಮಾರ್ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಮಹಿಳೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ.

ಚಿಕ್ಕಮಗಳೂರು: ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ
ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 12, 2024 | 12:39 PM

ಚಿಕ್ಕಮಗಳೂರು, ಡಿ11: ಚಿಕ್ಕಮಗಳೂರಿನಲ್ಲಿ ಒಂದು ಅವಮಾನಿಯ ಘಟನೆಯೊಂದು ನಡೆದಿದೆ. ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೈದ್ಯನೊಬ್ಬ ತನ್ನ ಪತ್ನಿಯನ್ನು ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆ ಚಿಕ್ಕಮಗಳೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಪೊಲೀಸರಿಗೆ ಈ ಸುದ್ದಿ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ರವಿಕುಮಾರ್ ನಾಪತ್ತೆಯಾಗಿದ್ದಾನೆ. ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ಡಾ. ರವಿಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. 22 ವರ್ಷಗಳ ಹಿಂದೆ ಡಾ.ರವಿಕುಮಾರ್, ವಿನುತಾರಾಣಿ (48) ಅವರನ್ನು ವಿವಾಹವಾಗಿದ್ದ. ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರು ಬೇರೆಯಾಗಿದ್ದಾರೆ. ಕಳೆದ 1 ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ ನೀಡಿದ್ದಾರೆ.

ಇದನ್ನೂ ಓದಿ: ಅತುಲ್​ಗೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ಬಾರ್ದು ಎಂಬ ನಿಕಿತಾ ಪ್ರಶ್ನೆಗೆ ನಕ್ಕಿದ್ದ ಜಡ್ಜ್​ ರೀಟಾ

ವಿನುತಾ ರಾಣಿ ಮೂಲತಃ ಶಿವಮೊಗ್ಗದ ವಿನೋಬಾನಗರದವರು, ಆದರೆ ವಿಚ್ಛೇದನ ನೀಡಿ ಕೂಡಾ ಆಕೆಯನ್ನು ಮನೆಯಲ್ಲಿ ಕೂಡಿ ಹಾಕಿದ್ದಾನೆ ಎಂದು ವಿನುತಾ ರಾಣಿ ಅವರ ಮನೆಯವರು ಆರೋಪಿಸಿದ್ದಾರೆ. ಡಾ.ರವಿಕುಮಾರ್ ವಿನುತಾ ರಾಣಿಗೆ ಚಿತ್ರಹಿಂಸೆ ನೀಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ. ಆಕೆಯ ಗಂಡ ಊಟದಲ್ಲಿ ಮತ್ತಿನ ಔಷಧ ನೀಡುತ್ತಿದ್ದ, ಜತೆಗೆ ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡುತ್ತಿದ್ದ ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆಯ ಕುಟುಂಬದವರು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ಬಂಧಿಸುವಂತೆ ಒತ್ತಾಯಿಸಿದ್ದಾರೆ. ವಿನುತಾ ರಾಣಿ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಕುಟುಂಬ ಹಾಗೂ ಮಹಿಳೆಯ ಹೇಳಿಕೆ ಆಧಾರದ ಮೇಲೆ ದೂರು ದಾಖಲಿಸಿಕೊಂಡು ನಾಪತ್ತೆಯಾಗಿರುವ ಡಾ.ರವಿಕುಮಾರ್​​​ನ ಪತ್ತೆಗಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:21 pm, Thu, 12 December 24