AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನ ಕೆರೆಯಲ್ಲಿ ಮುಳುಗಿ 3 ಬಾಲಕರು ಸಾವು

ಚಿಕ್ಕಮಗಳೂರಿನಲ್ಲಿ ದಸರಾ ರಜೆ ವೇಳೆ ಕೆರೆಯಲ್ಲಿ ಈಜಲು ತೆರಳಿದ ಮೂವರು ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ, ಬೀದರ್‌ನಲ್ಲಿ ಇಬ್ಬರು ಸಹೋದರರ ಮೇಲೆ ಬೀದಿನಾಯಿ ಭೀಕರವಾಗಿ ದಾಳಿ ಮಾಡಿದೆ. ಈ ದುರಂತ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಮಕ್ಕಳ ಸುರಕ್ಷತೆ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಮಗಳೂರಿನ ಕೆರೆಯಲ್ಲಿ ಮುಳುಗಿ 3 ಬಾಲಕರು ಸಾವು
ಕೆರೆಯಲ್ಲಿ ಮುಳುಗಿ 3 ಬಾಲಕರು ಸಾವು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Oct 06, 2026 | 4:34 PM

Share

ಚಿಕ್ಕಮಗಳೂರು, ಅ.6: ದಸರಾ ರಜೆಯ ಖುಷಿಯಲ್ಲಿದ್ದ ಬಾಲಕರ ಪಾಲಿಗೆ ವಿಧಿ ಕ್ರೂರವಾಗಿ ನಡೆದುಕೊಂಡಿದೆ. ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿಗೆ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಭೀಕರ ಹಾಗೂ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ. ಸಾವಿಗೀಡಾದ ಮೂವರೂ ಬಾಲಕರು ಕೇವಲ 12 ವರ್ಷದವರಾಗಿದ್ದು, ಒಂದೇ ಗ್ರಾಮದ ಮೂವರು ಚಿಗುರು ಕಂದಮ್ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಕ್ರಂದನ ಮುಗಿಲು ಮುಟ್ಟಿದೆ. ಶಾಲಾ ದಸರಾ ರಜೆ ಇರುವುದರಿಂದ ಲಿಖಿತ್ (12), ಭುವನ್ (12) ಹಾಗೂ ತರುಣ್ (12) ಎಂಬ ಮೂವರು ಬಾಲಕರು ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಆಟವಾಡಿಕೊಂಡು, ಬಳಿಕ ಗ್ರಾಮದ ಸಮೀಪವಿರುವ ಮರ್ಲೆ ಕೆರೆಗೆ ಈಜಾಡಲು ತೆರಳಿದ್ದಾರೆ.

ಸರಿಯಾಗಿ ಈಜು ಬಾರದ ಬಾಲಕರು ಕೆರೆಯ ಆಳ ತಿಳಿಯದೆ ನೀರಿಗಿಳಿದಿದ್ದಾರೆ. ಈ ವೇಳೆ ಒಬ್ಬರು ಮುಳುಗುತ್ತಿದ್ದಂತೆ ರಕ್ಷಿಸಲು ಹೋಗಿ ಮೂವರೂ ಕೆರೆಯ ಆಳಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಬಾಲಕರು ಮನೆಗೆ ಮರಳದಿದ್ದಾಗ ಹುಡುಕಾಟ ನಡೆಸಿದ ಗ್ರಾಮಸ್ಥರಿಗೆ ಕೆರೆಯ ದಂಡೆಯ ಮೇಲೆ ಬಾಲಕರ ಉಡುಪುಗಳು ಕಂಡುಬಂದಿವೆ. ತಕ್ಷಣವೇ ಕೆರೆಗಿಳಿದ ಸ್ಥಳೀಯರು ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸಜಾ ಕೈದಿ ಬಿಡುಗಡೆಗೆ ಪತ್ನಿ ದೇಹದ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್

ಬೀದರ್‌ನಲ್ಲಿ ಬೀದಿನಾಯಿಗಳ ಅಟ್ಟಹಾಸ

ಮತ್ತೊಂದೆಡೆ, ಬೀದರ್ ನಗರದ ನಾವದಗೇರಿಯಲ್ಲಿ ಬೀದಿನಾಯಿಗಳ ಆತಂಕ ತೀವ್ರಗೊಂಡಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಸಹೋದರರ ಮೇಲೆ ಬೀದಿನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ. ನಿನ್ನೆ ಸಂಜೆ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 6 ವರ್ಷದ ಶರತ್ ಹಾಗೂ 12 ವರ್ಷದ ಸಾಯಿನಾಥ್ ಅವರ ಮೇಲೆ ಏಕಾಏಕಿ ಎರಗಿದ ನಾಯಿ, ಬಾಲಕರ ಮುಖ, ಕೈ ಹಾಗೂ ಕಾಲುಗಳಿಗೆ ಮನಬಂದಂತೆ ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡ ಇಬ್ಬರೂ ಬಾಲಕರನ್ನು ತಕ್ಷಣವೇ ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಗರದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗಾಯಾಳು ಬಾಲಕರ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Tue, 6 October 26

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!