ಚಿಕ್ಕಮಗಳೂರು: ಬೀದಿ ನಾಯಿ ಜೊತೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರ ಯತ್ನ, ಕೊಪ್ಪದಲ್ಲಿ ಯುವಕನ ವಿರುದ್ಧ ಎಫ್ಐಆರ್
ಚಿಕ್ಕಮಗಳೂರಿನ ಜಯಪುರದಲ್ಲಿ ಒಬ್ಬ ಯುವಕ ಬೀದಿನಾಯಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಕಾನ್ಸ್ಟೇಬಲ್ ನೀಡಿದ ಮಾಹಿತಿ ಆಧಾರದಲ್ಲಿ ಇದೀಗ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು, ನವೆಂಬರ್ 11: ಯುವಕನೊಬ್ಬ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು ಆತನ ವಿರುದ್ಧ ಚಿಕ್ಕಮಗಳೂರಿನ ಕೊಪ್ಪದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿ ನಾಯಿಗಳ ಜೊತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿ ಕ್ಯಾಮರಾ ದೃಶ್ಯದಲ್ಲಿ ಕಂಡುಬಂದಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಸ್ವಯಂಪ್ರೇರಿತವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವಕ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ವಿಡಿಯೋ ಜಯಪುರ, ಕೊಪ್ಪ ಭಾಗದಲ್ಲಿ ವೈರಲ್ ಆಗುತ್ತಿದೆ.
ಎಫ್ಐಆರ್ನಲ್ಲೇನಿದೆ?
ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ನೀಡಿದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 9ರಂದು ಕೃತ್ಯದ ಬಗ್ಗೆ ವಿಡಿಯೋ ಬೆಳಕಿಗೆ ಬಂದಿದ್ದು, ಸಿಸಿಟಿವಿ ದೃಶ್ಯದ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸ್ ಕಾನ್ಸ್ಟೇಬಲ್ ದೂರು ನೀಡಿದ್ದಾರೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಪೊಲೀಸ್ ಕಾನ್ಸ್ಟೇಬಲ್ ಹೇಳಿದ್ದೇನು?
ಜಯಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ಗುಪ್ತ ವರದಿಗಾಗಿ ಕರ್ತವ್ಯದಲಿರುವಾಗ ಬಾತ್ಮೀದಾರರುಗಳಿಂದ ತಿಳಿದು ಬಂದ ಮಾಹಿತಿಯ ಪ್ರಕಾರ, ವ್ಯಕ್ತಿಯೊಬ್ಬ ನಾಯಿಯನ್ನು ಹಿಡಿದುಕೊಂಡು ಅದರೊಂದಿಗೆ ಅಸಭ್ಯವರ್ತಿಸುತ್ತಿದ್ದಾನೆ. ಬೀದಿ ನಾಯಿಗೆ ಉಪದ್ರವ ಮಾಡುವುದರ ಜೊತೆಗೆ ಪ್ರಾಣಿ ಹಿಂಸೆ ಮಾಡಿರುವುದು ನಿಲ್ದಾಣದಲ್ಲಿರುವ ಜಯಪುರ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಬಗ್ಗೆ ದೊರೆತ ಮಾಹಿತಿ ಮೇರೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಜಯಪುರ ಎಂಟರ್ ಪ್ರೈಸಸ್ ಮಾಲೀಕರ ಮೊಬೈಲ್ನಿಂದ ಪಡೆದು ಪರಿಶೀಲಿಸಿದ್ದೇನೆ ಎಂದು ಪೊಲೀಸ್ ಕಾನ್ಸ್ಟೇಬಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಕಾಡಾನೆ ಉಪಟಳ, ಹಲವು ಗ್ರಾಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ವಿಡಿಯೋ ಪರಿಶೀಲಿಸಿದಾಗ ದಿನಾಂಕ, 18.10.2024 ರಂದು ಬೆಳಗಿನ ಜಾವ ಸುಮಾರು 4.00 ಗಂಟೆ ಸಮಯದಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇರುವ ಜಯಪುರ ಎಂಟರ್ ಪ್ರೈಸಸ್ ಎಂದು ಹೆಸರಿರುವ ಅಂಗಡಿಯ ಮುಂಭಾಗದ ಕಟ್ಟೆಯ ಮೇಲೆ ಯಾರೋ ಒಬ್ಬ ವ್ಯಕ್ತಿಯು ಕುಳಿತು ಅವೇಳೆಯಲಿ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಯನ್ನು ಹಿಡಿದುಕೊಂಡು ಆದರೊಂದಿಗೆ ಅಸಭ್ಯವಾಗಿ ವರ್ತಿಸಿ ಪ್ರಾಣಿಗೆ ಹಿಂಸೆ ಹಾಗೂ ಉಪದ್ರವ ನೀಡುತ್ತಿರುವುದು ಕಂಡು ಬಂದಿದೆ. ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ವಿಳಾಸದ ಬಗ್ಗೆ ಪರಿಶೀಲನೆ ನಡೆಸಿದಾಗ ಆತ ಕಟ್ಟಿ ಮನೆ ವಾಸಿ ಶಿವರಾಜ ಎಂದು ದೃಢಪಟ್ಟಿರುತ್ತದೆ ಎಂದು ಪೊಲೀಸ್ ಕಾನ್ಸ್ಟೇಬಲ್ ಹೇಳಿದ್ದಾರೆ. ಈ ವಿಚಾರ ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ