ಚಿಕ್ಕಮಗಳೂರು: ಇನಾಂ ದತ್ತಪೀಠ ಕೇಸ್ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚನೆ
ಚಿಕ್ಕಮಗಳೂರು ಜಿಲ್ಲೆಯ ಇನಾಂ ದತ್ತಾತ್ರೇಯ ಪೀಠದ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಶ್ರೀ ಸೈಯದ್ ಮೊಹಿಯುದ್ದೀನ್ ಶಾಖಾದ್ರಿ ಕೇಸ್ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಕೇಸ್ಗೆ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚನೆ ಮಾಡಲಾಗಿದೆ.
ಚಿಕ್ಕಮಗಳೂರು, ಜನವರಿ 18: ಜಿಲ್ಲೆಯ ಇನಾಂ ದತ್ತಾತ್ರೇಯ ಪೀಠದ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ (bababudan) ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಶ್ರೀ ಸೈಯದ್ ಮೊಹಿಯುದ್ದೀನ್ ಶಾಖಾದ್ರಿ ಕೇಸ್ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಕೇಸ್ಗೆ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚನೆ ಮಾಡಲಾಗಿದೆ.
ಸಂಪುಟ ಉಪಸಮಿತಿ ರಚನೆ
- ಅಧ್ಯಕ್ಷರು – ಗೃಹ ಸಚಿವ ಡಾ. ಜಿ. ಪರಮೇಶ್ವರ್
- ಕಾನೂನು, ಸಂಸದೀಯ ಮತ್ತು ಸಚಿವರು, ವ್ಯವಹಾರಗಳು ಪ್ರವಾಸೋದ್ಯಮ ಎಚ್.ಕೆ ಪಾಟೀಲ್
- ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
- ಕಂದಾಯ ಸಚಿವ ಕೃಷ್ಣಬೈರೇಗೌಡ
- ಚಿಕ್ಕಮಗಳೂರು ಉಸ್ತುವಾರಿ ಸಚಿವರು ಕೆಜೆ. ಜಾರ್ಜ್
ಇದನ್ನೂ ಓದಿ: ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ
ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಅರ್ಚಕರನ್ನು ನೇಮಕ ಮಾಡುವ ವಿಚಾರವಾಗಿ ಈ ಹಿಂದೆ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ ಒಟ್ಟು 8 ಜನರು ಇದ್ದಾರೆ. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು.
ಏನಿದು ವಿವಾದ:
ಬಾಬಾಬುಡನ್ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ.
ಇದನ್ನೂ ಓದಿ: Baba Budan Giri: ಬಾಬಾಬುಡನ್ಗಿರಿ ದತ್ತಪೀಠ ಪೂಜಾ ವಿಧಾನ, ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ
ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.