ಚಿಕ್ಕಮಗಳೂರು: ಇನಾಂ ದತ್ತಪೀಠ ಕೇಸ್​ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 18, 2024 | 5:29 PM

ಚಿಕ್ಕಮಗಳೂರು ಜಿಲ್ಲೆಯ ಇನಾಂ ದತ್ತಾತ್ರೇಯ ಪೀಠದ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಶ್ರೀ ಸೈಯದ್ ಮೊಹಿಯುದ್ದೀನ್ ಶಾಖಾದ್ರಿ ಕೇಸ್ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಕೇಸ್​ಗೆ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚನೆ ಮಾಡಲಾಗಿದೆ. 

ಚಿಕ್ಕಮಗಳೂರು: ಇನಾಂ ದತ್ತಪೀಠ ಕೇಸ್​ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚನೆ
ಇನಾಂ ದತ್ತಪೀಠ
Follow us on

ಚಿಕ್ಕಮಗಳೂರು, ಜನವರಿ 18: ಜಿಲ್ಲೆಯ ಇನಾಂ ದತ್ತಾತ್ರೇಯ ಪೀಠದ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ (bababudan) ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಶ್ರೀ ಸೈಯದ್ ಮೊಹಿಯುದ್ದೀನ್ ಶಾಖಾದ್ರಿ ಕೇಸ್ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಕೇಸ್​ಗೆ ಆಕ್ಷೇಪಣೆ ಸಲ್ಲಿಸಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚನೆ ಮಾಡಲಾಗಿದೆ.

ಸಂಪುಟ ಉಪಸಮಿತಿ ರಚನೆ

  • ಅಧ್ಯಕ್ಷರು – ಗೃಹ ಸಚಿವ ಡಾ. ಜಿ. ಪರಮೇಶ್ವರ್
  • ಕಾನೂನು, ಸಂಸದೀಯ ಮತ್ತು ಸಚಿವರು, ವ್ಯವಹಾರಗಳು ಪ್ರವಾಸೋದ್ಯಮ ಎಚ್.ಕೆ ಪಾಟೀಲ್​
  • ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
  • ಕಂದಾಯ ಸಚಿವ ಕೃಷ್ಣಬೈರೇಗೌಡ
  • ಚಿಕ್ಕಮಗಳೂರು ಉಸ್ತುವಾರಿ ಸಚಿವರು ಕೆಜೆ. ಜಾರ್ಜ್

ಇದನ್ನೂ ಓದಿ: ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ

ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಅರ್ಚಕರನ್ನು ನೇಮಕ ಮಾಡುವ ವಿಚಾರವಾಗಿ ಈ ಹಿಂದೆ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ ಒಟ್ಟು 8 ಜನರು ಇದ್ದಾರೆ. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು.

ಏನಿದು ವಿವಾದ:

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ.

ಇದನ್ನೂ ಓದಿ: Baba Budan Giri: ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ, ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ

ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.