Chikkamagaluru: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು: ನಾಲ್ವರಿಗೆ ಗಂಭೀರ ಗಾಯ

|

Updated on: May 17, 2023 | 9:23 PM

ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯ ಕವಿಕಲ್ ಗಂಡಿ ಬಳಿ ನಡೆದಿದೆ.

Chikkamagaluru: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು: ನಾಲ್ವರಿಗೆ ಗಂಭೀರ ಗಾಯ
ಪ್ರಪಾತಕ್ಕೆ ಬಿದ್ದ ಕಾರು
Follow us on

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯ (Mullayanagiri) ಕವಿಕಲ್ ಗಂಡಿ ಬಳಿ ನಡೆದಿದೆ. ಮುಳ್ಳಯ್ಯನಗಿರಿ ಪರ್ವತದ ತುದಿ ರಸ್ತೆಯಿಂದ ಕಾರು ಪ್ರಪಾತಕ್ಕೆ ಬಿದಿದ್ದೆ. ಸೀತಾರಾಮ್, ಸುಗುಣ, ಶ್ರೇಯಸ್, ಶುಭಾ ಗಾಯಾಳುಗಳು. ಮೈಸೂರು ಜಿಲ್ಲೆಯ ಕೆ.ಆರ್.ನಗದ ಕುಟುಂಬ ಪ್ರವಾಸಕ್ಕೆ ಬಂದಿದ್ದು, ವಾಪಸ್ ತೆರಳುವಾಗ ಅವಘಡ ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ನಾಲ್ವರು ಪಾರು

ಬೆಳಗಾವಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಗರದ ಆರ್‌‌ಪಿಡಿ ವೃತ್ತದ ಬಳಿ ಕಳೆದ ರಾತ್ರಿ ನಡೆದಿದೆ. ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಟಿಳಕವಾಡಿಯ ಆರ್‌ಪಿಡಿ ವೃತ್ತದ ಮಾರ್ಗವಾಗಿ ತೆರಳುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ.

ಇದನ್ನೂ ಓದಿ: Kodagu Rain: ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ವರುಣಾರ್ಭಟ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

ಈ ವೇಳೆ ಚಾಲಕ ತಕ್ಷಣ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು‌ ಕೆಳಗಿಳಿಸಿದ್ದಾನೆ. ಕಾರಿನಲ್ಲಿ ಇದ್ದವರು ಕೆಳಗಿಳಿಯುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

ಖಾಸಗಿ ಬಸ್ ಬೆಂಕಿಗೆ ಆಹುತಿ

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಒಎಂಪಿಎಲ್​ ಸಂಸ್ಥೆಗೆ ಸೇರಿದ ಬಸ್ಸೊಂದು ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಉರಿದುಹೋದ ಘಟನೆ ಬುಧವಾರ ನಡೆದಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್​ಗೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣ ಭಸ್ಮವಾಗಿದೆ.

ಇದನ್ನೂ ಓದಿ: Viral Video: ಪುಟ್ಟ ಬಾಲಕಿಯ ಮೇಲೆ ಕಾಡೆಮ್ಮೆಯ ಭಯಾನಕ ದಾಳಿ, ಪೋಷಕರ ಮೇಲೆ ನೆಟ್ಟಿಗರು ಆಕ್ರೋಶ

ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಬಳಿ ನೌಕರರನ್ನು ಇಳಿಸಿ ವಾಪಸ್ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಟ್ಯಾಂಕರ್​ನಿಂದ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಲಾಯಿತದಾರೂ ಪ್ರಯೋಜನವಾಗಲಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:23 pm, Wed, 17 May 23