ಚಿಕ್ಕಮಗಳೂರು: ಮಹಿಷ ದಸರಾ ಆಚರಣೆಗೆ ಮುಂದಾದ ನೂರಾರು ಜನರು ವಶಕ್ಕೆ

ದಲಿತ ಪರ ಸಂಘಟನೆ, ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮೆರವಣಿಗೆಗೆ ಯತ್ನಿಸಿದ್ದು ಮಾತ್ರವಲ್ಲದೆ, ಮಹಿಷ ದಸರಾ ಆಚರಣೆಗೆ ಅನುಮತಿ ನೀಡದ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದ್ದರು. ಮಹಿಷ ದಸರಾ ಆಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರಿನಲ್ಲಿ ಗುರುವಾರದಿಂದ 6 ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ.

ಚಿಕ್ಕಮಗಳೂರು: ಮಹಿಷ ದಸರಾ ಆಚರಣೆಗೆ ಮುಂದಾದ ನೂರಾರು ಜನರು ವಶಕ್ಕೆ
ಮಹಿಷ ದಸರಾ ಆಚರಣೆಗೆ ಮುಂದಾದ ನೂರಾರು ಜನರು ವಶಕ್ಕೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on: Oct 20, 2023 | 3:34 PM

ಚಿಕ್ಕಮಗಳೂರು, ಅಕ್ಟೋಬರ್ 20: ಮಹಿಷ ದಸರಾ (Mahisha Dasara) ಆಚರಣೆಗೆ ಮುಂದಾದ ನೂರಾರು ಜನರನ್ನು ಚಿಕ್ಕಮಗಳೂರಿನಲ್ಲಿ (Chikkamagaluru) ಪೊಲೀಸರು ಶುಕ್ರವಾರ ವಶಕ್ಕೆ ಪಡೆದರು. ನಿಷೇಧಾಜ್ಞೆ ಮಧ್ಯೆಯೂ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾಗಲಾಗಿತ್ತು. ಆಚರಣೆಗೆ ಮುಂದಾದ ದಲಿತ ಪರ ಸಂಘಟನೆ, ಪ್ರಗತಿಪರ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರಿನ ಎಂಜಿ ರಸ್ತೆಯಲ್ಲಿ ಕಾರ್ಯಕರ್ತರು ಮೆರವಣಿಗೆಗೆ ಯತ್ನಿಸಿದ್ದರು. ಬ್ಯಾರಿಕೇಡ್ ತಳ್ಳಿ ಮೆರವಣಿಗೆ ಹೊರಡಲು ಮುಂದಾಗಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದೆ.

ದಲಿತ ಪರ ಸಂಘಟನೆ, ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮೆರವಣಿಗೆಗೆ ಯತ್ನಿಸಿದ್ದು ಮಾತ್ರವಲ್ಲದೆ, ಮಹಿಷ ದಸರಾ ಆಚರಣೆಗೆ ಅನುಮತಿ ನೀಡದ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದ್ದರು.

ಮಹಿಷ ದಸರಾ ಆಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರಿನಲ್ಲಿ ಗುರುವಾರದಿಂದ 6 ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ. ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಹಿಷ ದಸರಾ ಆಯೋಜನೆ ಮಾಡಲಾಗಿತ್ತು. ಮಹಿಷ ದಸರಾ ಆಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪ್ರೊ. ಕೆ.ಎಸ್ ಭಗವಾನ್ ಆಗಮಿಸಲಿದ್ದಾರೆ ಎನ್ನಲಾಗಿತ್ತು. ಒಕ್ಕಲಿಗ ಸಮುದಾಯದ ಬಗ್ಗೆ ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿರುವ ಕಾರಣ ಅವರ ಆಗಮನಕ್ಕೆ ಜಿಲ್ಲೆಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ವಿರೋಧ: 6 ದಿನ ನಿಷೇಧಾಜ್ಞೆ

ಮಹಿಷ ದಸರಾ ಆಚರಣೆ ವಿಚಾರವಾಗಿ ಕಳೆದ ಕೆಲವು ವರ್ಷಗಳಿಂದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕೂಗು ಕೇಳಿಬರುತ್ತಿದೆ. ಪ್ರೊ. ಭಗವಾನ್ ಮಹಿಷ ದಸರಾ ಆಚರಣೆಗೆ ಕರೆ ನೀಡುತ್ತಿದ್ದು, ಈ ವಿಚಾರ ವಿವಾದಕ್ಕೂ ಗುರಿಯಾಗುತ್ತಿದೆ. ಈ ವರ್ಷ ಭಗವಾನ್ ಅವರು ಒಕ್ಕಲಿಗರ ಬಗ್ಗೆ ನೀಡಿರುವ ಹೇಳಿಕೆ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರೊ. ಕೆ.ಎಸ್ ಭಗವಾನ್ ವಿರುದ್ಧ ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವೆಡೆ ಪೊಲೀಸ್​ ಠಾಣೆಗಳಲ್ಲಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ