ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಕಾಡಾನೆಗಳ (Elephant) ದಾಳಿ ಹೆಚ್ಚಾದ ಹಿನ್ನೆಲೆ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಸರ್ಕಾರ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ಕಳೆದ 3 ತಿಂಗಳಿನಿಂದ ಕಾಡಾನೆ ದಾಳಿಗೆ ಮೂವರು ಮೃತಪಟ್ಟಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಿದೆ.
ಕಾಡಾನೆ ದಾಳಿಗೆ ನಿನ್ನೆ (ನ.20) ರಂದು ಮೂಡಿಗೆರೆ ತಾಲೂಕಿನ ಹುಲ್ಲೆ ಮನೆ ಕುಂದೂರಿನಲ್ಲಿ ಮಹಿಳೆ ಒಬ್ಬರು ಬಲಿಯಾಗಿದ್ದರು. ಘಟನಾ ಸ್ಥಳಕ್ಕೆ ಶಾಸಕ ಕುಮಾರಸ್ವಾಮಿ ತಡವಾಗಿ ಹೋಗಿದಕ್ಕೆ ಶಾಸಕರ ವಿರುದ್ಧ ಜನರು ಆಕ್ರೋಶಗೊಂಡಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ನಂತರ ಶಾಸಕ ಕುಮಾರಸ್ವಾಮಿ ಜನರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:09 pm, Mon, 21 November 22