ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆ ಉಲ್ಬಣ: ಓರ್ವ ಮಹಿಳೆ ಸಾವು

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (KFD) ಪ್ರಕರಣಗಳು ಹೆಚ್ಚುತ್ತಿದ್ದು, 65 ವರ್ಷದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. 51 ಜನರಲ್ಲಿ ಕಾಯಿಲೆ ದೃಢಪಟ್ಟಿದೆ. ಕೊಪ್ಪ ಮತ್ತು ಎನ್‌.ಆರ್‌.ಪುರ ತಾಲೂಕುಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಇಲಾಖೆ ಅಲರ್ಟ್‌ ಆಗಿದ್ದು, ಜಾಗೃತಿ ಮೂಡಿಸುತ್ತಿದೆ ಮತ್ತು DMPA ತೈಲ ಸಿಂಪಡಿಸುತ್ತಿದೆ. ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆ ಉಲ್ಬಣ: ಓರ್ವ ಮಹಿಳೆ ಸಾವು
ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆ
Updated By: ವಿವೇಕ ಬಿರಾದಾರ

Updated on: Mar 17, 2025 | 11:04 AM

ಚಿಕ್ಕಮಗಳೂರು, ಮಾರ್ಚ್​ 17: ರಾಜ್ಯದಲ್ಲಿ ಮಂಗನ ಕಾಯಿಲೆ (KFD) ಭೀತಿ ಹೆಚ್ಚಾಗಿದ್ದು, ಮಂಗನ ಕಾಯಿಲೆಯಿಂದಾಗ ಚಿಕ್ಕಮಗಳೂರಿನಲ್ಲಿ (Chikkamagaluru) ಸೋಮವಾರ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65 ವರ್ಷ) ಮೃತ ದುರ್ದೈವಿ. ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಮಲಾ ಮೃತಪಟ್ಟಿದ್ದಾರೆ.

ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢವಾಗಿದೆ. ಕೊಪ್ಪ, ಎನ್​.ಆರ್.ಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದೆ. ಹೀಗಾಗಿ, ಮಲೆನಾಡು ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ ತೆರದಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಉಲ್ಬಣಗೊಂಡ ಮಂಗನ ಕಾಯಿಲೆ: ಒಂದೇ ದಿನ ನಾಲ್ವರಲ್ಲಿ ದೃಢ

ಇದನ್ನೂ ಓದಿ
ಚಿಕ್ಕಮಗಳೂರು: ಮತ್ತೆ ಇಬ್ಬರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ
ಅಂಕೋಲಾ ತಾಲೂಕಿಗೆ ವ್ಯಾಪಿಸಿದ ಮಂಗನ ಕಾಯಿಲೆ- ಜನರಲ್ಲಿ ಹೆಚ್ಚಿದ ಆತಂಕ
ಮಲೆನಾಡಿನಲ್ಲಿ ಹೆಚ್ಚುತ್ತಲೇ ಇದೆ ಮಂಗನ ಕಾಯಿಲೆ; ಮಂಕಿಪಾಕ್ಸ್ ಲಕ್ಷಣಗಳಿವು
ಉತ್ತರ ಕನ್ನಡದಲ್ಲಿ ಹೆಚ್ಚಿದ ಮಂಗನ ಕಾಯಿಲೆ; ಒಂದೇ ದಿನ 8 ಜನರಲ್ಲಿ ಪತ್ತೆ

ಆರೋಗ್ಯ ಇಲಾಖೆ ಅಲರ್ಟ್​

ಮಂಗನ ಕಾಯಿಲೆ ರೋಗ ತೀವ್ರ ಸ್ವರೂಪ ಪಡೆಯದಂತೆ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದ್ದು, ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಗ್ರಾಮಗಳಲ್ಲಿ DMPA ತೈಲ ಸಿಂಪಡಿಸುತ್ತಿದೆ.

ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್​ಆರ್​ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಇನ್ನಷ್ಟು ಅಲರ್ಟ್ ಆಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ