ಚಿಕ್ಕಮಗಳೂರು: ಕೊಪ್ಪ ತಾಲೂಕಿನಲ್ಲಿ ಒಂದೇ ದಿನ 9 ಜನರಿಗೆ ಮಂಗನ ಕಾಯಿಲೆ
ರಾಜ್ಯದ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬರೇಗುಂಜಿ ಗ್ರಾಮದ ಏಳು ಜನರಿಗೆ ಮಂಗನ ಕಾಯಿಲೆ (KFD) ಬಂದಿದೆ. ಭಾನುವಾರ ಕಾಡಿಗೆ ಸೌದೆ ತರಲು ಹೋದ 21 ಜನರ ರಕ್ತವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರು. 21 ಜನರಲ್ಲಿ ಏಳು ಮಂದಿಯಲ್ಲಿ ಮಂಗನ ಕಾಯಿಲೆ ದೃಡಪಟ್ಟಿದೆ.
ಚಿಕ್ಕಮಗಳೂರು, ಫೆಬ್ರವರಿ 13: ಕೊಪ್ಪ (Koppa) ತಾಲೂಕಿನ ಬರೇಗುಂಜಿ ಗ್ರಾಮದ ಏಳು ಜನರಿಗೆ ಮಂಗನ ಕಾಯಿಲೆ (KFD) ಬಂದಿದೆ. ಭಾನುವಾರ ಕಾಡಿಗೆ ಸೌದೆ ತರಲು ಹೋದ 21 ಜನರ ರಕ್ತವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು (Health Department) ತಪಾಸಣೆ ನಡೆಸಿದ್ದರು. 21 ಜನರಲ್ಲಿ ಏಳು ಮಂದಿಯಲ್ಲಿ ಮಂಗನ ಕಾಯಿಲೆ ದೃಡಪಟ್ಟಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 74 ಜನರ ರಕ್ತ ತಪಾಸಣೆ ಮಾಡಲಾಗಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಲೆನಾಡಿನಾದ್ಯಂತ ಕೆಎಫ್ಡಿ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಈ ಹಿಂದೆ 9 ಪ್ರಕರಣ ಪತ್ತೆ
ಕಳೆದ ಕೆಲವು ದಿನಗಳ ಹಿಂದೆ ಅಂದರೆ ಫೆ.08ರ ವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂಬತ್ತು ಜನರು ಮಂಗನ ಕಾಯಿಲೆಯಿಂದ ಬಳಲುತ್ತಿದ್ದರು. ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಒಂಬತ್ತು ಮಂಗನ ಕಾಯಿಲೆ ಪ್ರಕರಣಗಳ ಪೈಕಿ ಓರ್ವ ಸೋಂಕಿತ ಮೃತಪಟ್ಟಿದ್ದರು. ಇನ್ನು ಇಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಒಎಲ್‌ವಿ ಎಸ್ಟೇಟ್ ಭಾಗದಲ್ಲಿ ಪತ್ತೆಯಾಗಿವೆ. ಈ ಒಎಲ್‌ವಿ ಎಸ್ಟೇಟ್ ಕೊಪ್ಪ ತಾಲೂಕಿನಲ್ಲಿ ಇದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್ಡಿ ವಾರ್ಡ್ ತೆರೆದಿದೆ.
ಇದನ್ನೂ ಓದಿ: Monkeypox: ಮಂಗನ ಕಾಯಿಲೆಯಿಂದ ಯಾರಿಗೆ ಅಪಾಯ ಜಾಸ್ತಿ?; ಮಂಕಿಫಾಕ್ಸ್ನಿಂದ ಪಾರಾಗುವುದು ಹೇಗೆ?
ಕೆಎಫ್ಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಸಿದೆ. ಶಿವಮೊಗ್ಗ-ಉತ್ತರಕನ್ನಡಕ್ಕೆ ಹೊಂದಿಕೊಂಡಿದೆ. ಇದರಿಂದ ಈ ಭಾಗದಲ್ಲೂ ಪ್ರತಿ ವರ್ಷ ಮಂಗನ ಕಾಯಿಲೆ ಸೋಂಕಿನ ಆತಂಕ ಇದ್ದೇ ಇರುತ್ತದೆ.
ಮಂಗನ ಕಾಯಿಲೆಗೆ 18 ವರ್ಷದ ಯುವತಿ ಸಾವು
ಒಂದು ವಾರದ ಹಿಂದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಪ್ಪನಮನೆ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಮೃತಪಟ್ಟಿದ್ದರು. ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ. ಇದು ಮಂಗನ ಕಾಯಿಲೆಗೆ ಮೃತಪಟ್ಟ ಮೊದಲ ಪ್ರಕರಣವಾಗಿದೆ. ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ