ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಮಗಳೂರು KSRTC ಡಿಸಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 06, 2024 | 8:18 PM

ಶಿವಮೊಗ್ಗ, ಕಲಬುರಗಿ ಹಾಗೂ ಚಿಕ್ಕಮಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರು ಕಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವರ್ಗಾವಣೆ ಮಾಡಲು ಚಾಲಕನಿಂದ ಹಣಕ್ಕೆ ಭೇಡಿಕೆಯಿಟ್ಟ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಮಗಳೂರು KSRTC ಡಿಸಿ
ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ಡಿಸಿ
Follow us on

ಚಿಕ್ಕಮಗಳೂರು, ಫೆ.06: ಚಿಕ್ಕಮಗಳೂರು ಕೆಎಸ್​ಆರ್​ಟಿಸಿ (KSRTC) ವಿಭಾಗ ನಿಯಂತ್ರಕ ಬಸವರಾಜು ಎಂಬುವವರು  ಲೋಕಾಯುಕ್ತ(Lokayukta) ಬಲೆಗೆ ಬಿದ್ದಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಬಸ್ ಚಾಲಕನಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದು, ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ  ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ಚಾಲಕ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಚಾಲಕ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದ ಲೋಕಾಯುಕ್ತರು, ಅಧಿಕಾರಿಯನ್ನು ಬಂಧಿಸಿದ್ದಾರೆ.

ಲಂಚ ಪಡೆಯುವಾಗ ಎಫ್​ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ

ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಜನನ ಮತ್ತು ಮರಣ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್‌ಡಿಎ ಅಧಿಕಾರಿ ಆಗಿರುವ ನಾಗರಾಜ್ ಅವರು ಜನನ ಪ್ರಮಾಣ ಪತ್ರ ನೀಡಲು 1 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಗಿರೀಶ್ ಎಂಬುವವರು ಈ ಕುರಿತು ಲೋಕಾಯುಕ್ತಕ್ಕೆ  ದೂರು ನೀಡಿದ್ದರು. ಅದರಂತೆ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್​ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.

ಇದನ್ನೂ ಓದಿ:ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಎಫ್​ಡಿಎ

ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

ಸೈಟ್ ಮ್ಯೂಟೆಶನ್ ಮಾಡಿಕೊಡಲು 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಕಲಬುರಗಿ ನಗರದ ಲಾಲ್ ಗೇರಿ ಕ್ರಾಸ್ ಬಳಿಯ ಹೊಟೇಲ್​ನಲ್ಲಿ ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಮರತೂರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಎಂಬುವವರು ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗಿತ್ತು. ಇದೀಗ ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ