AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಒತ್ತಾಯಿಸಿದರು.

ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು
ಪೊಲೀಸರ ಪ್ರತಿಭಟನೆ (ಎಡಚಿತ್ರ) ಎಫ್​ಐಆರ್​ (ಬಲಚಿತ್ರ)
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on: Dec 03, 2023 | 7:59 AM

Share

ಚಿಕ್ಕಮಗಳೂರು ಡಿ.03: ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ವಕೀಲರು (Lawyers) ಮತ್ತು ಪೊಲೀಸರ (Police) ನಡುವಿನ ಜಟಾಪಟಿ ತಾರಕಕ್ಕೆ ಏರಿದೆ. ಹೆಲ್ಮೆಟ್ (Helmet)​ ಹಾಕದ ವಿಚಾರವಾಗಿ ವಕೀಲ ಪ್ರೀತಮ್​ ಎಂಬುವರ ಮೇಲೆ ಶುಕ್ರವಾರ ಪೊಲೀಸರು ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲರು ಪೊಲೀಸ್​ ಠಾಣೆಯಲ್ಲಿ ಪ್ರತಿಭಟನೆ ಮಾಡಿದ್ದರು. ಹೀಗಾಗಿ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವಕೀಲರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್​ಐಆರ್​ ದಾಖಲಾಗಿವೆ.

ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಕೀಲನ ಮೇಲೆ ಹಲ್ಲೆ; PSI ಸೇರಿದಂತೆ 6 ಪೊಲೀಸ್ ಸಿಬ್ಬಂದಿಗಳ ಬಂಧನಕ್ಕೆ ವಿಶೇಷ ತಂಡ ರಚನೆ

ಈ ಪ್ರತಿಭಟನೆಯಲ್ಲಿ ಪೋಲಿಸ್ ಸಂಘ ಸ್ಥಾಪನೆಯ ಕೂಗು ಕೇಳಿ ಬಂದಿದೆ. ಪೊಲೀಸ್ ಸಿಬ್ಬಂದಿಗಳು ನಮಗೂ ಸಂಘ ಬೇಕು ಎಂದು ಚರ್ಚೆ ನಡೆಸಿದರು. ಪೋಲಿಸ್ ಸಂಘ ಸ್ಥಾಪನೆಗೆ ಈ ಹಿಂದೆ ಹಿರಿಯ ಅಧಿಕಾರಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ನಿನ್ನೆ (ಡಿ.02)ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಸಂಘ ಸ್ಥಾಪನೆಗೆ ಸಿದ್ದತೆ ನಡೆದಿದ್ದು, ಸಂಘವನ್ನು ರಿಜಿಸ್ಟರ್ ಮಾಡಿಸುವ ಬಗ್ಗೆ ಚರ್ಚೆ ನಡೆದಿದೆ. ಸೋಮವಾರ ರಿಜಿಸ್ಟರ್ ಮಾಡಿಸುವ ಸಾಧ್ಯತೆ ಇದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಅವರಿಗೆ ಪೊಲೀಸ್ ಇಲಾಖೆಗೆ ಸಂಘ ಯಾಕಿಲ್ಲ ಎಂದು ಪೊಲೀಸರ ಕುಟುಂಬಸ್ಥರು ಪ್ರಶ್ನೆ ಮಾಡಿದರು. ಆಗ ಐಜಿಪಿ ಚಂದ್ರಗುಪ್ತ ಅವರು ಇದು ನಿನಗೆ ಅರ್ಥವಾಗಲ್ಲವೆಂದು ಹೇಳಿದರು.

ಎಫ್​ಐಆರ್ ದಾಖಲಾಗಿರುವ 6 ಸಿಬ್ಬಂದಿಯನ್ನು ಬಂಧಿಸಬಾರದು. ಪೊಲೀಸ್ ಸಿಬ್ಬಂದಿಯ ಅಮಾನತು ಆದೇಶ ಹಿಂಪಡೆಯಬೇಕು ಎಂದು ಡಿ.5ರವರೆಗೂ ಇಲಾಖೆಗೆ ಗಡುವು ನೀಡಿ ಪೊಲೀಸರು ಧರಣಿ ಹಿಂಪಡೆದರು. ಇನ್ನು ವಕೀಲರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಗುರುಪ್ರಸಾದ್‌ ಅವರನ್ನು ಡಿವೈಎಸ್​ಪಿ ಶೈಲೇಂದ್ರ ಕುಮಾರ್ ಅವರು ವಿಚಾರಣೆ ನಡೆಸಿ ಬಿಡುಗಡೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು