AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ನಡುಗಿದ ಮಲೆನಾಡು: ಕುಸಿದ ಧರೆ, ರಸ್ತೆಗೆ ಉರುಳಿದ ಮರಗಳು

Chikkamagaluru Rain News: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮತ್ತೆ ಹೆಚ್ಚಾಗಿದೆ. ಕೊಪ್ಪ ಮತ್ತು ಶೃಂಗೇರಿ ಸುತ್ತಮುತ್ತ ಧಾರಾಕಾರ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಕೊಪ್ಪದಲ್ಲಿ ಮನೆಗಳಿಗೆ ಅಪಾಯ ಎದುರಾಗಿದೆ. ಶೃಂಗೇರಿ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಬೃಹತ್ ಗುಡ್ಡ ಕುಸಿದು ಸಂಚಾರಕ್ಕೆ ಅಡಚಣೆಯಾಗಿದೆ.

ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ನಡುಗಿದ ಮಲೆನಾಡು: ಕುಸಿದ ಧರೆ, ರಸ್ತೆಗೆ ಉರುಳಿದ ಮರಗಳು
ಗಾಳಿ-ಮಳೆ ಅಬ್ಬರImage Credit source: tv9 kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Aug 10, 2026 | 6:59 PM

Share

ಮುಖ್ಯಾಂಶಗಳು

  • ಕೊಪ್ಪ ತಾಲೂಕಿನಲ್ಲಿ ಸುರಿದ ಮಳೆಗೆ ಧರೆ ಕುಸಿತ
  • ಮನೆ ನುಗ್ಗಿದ ಮಣ್ಣು ಮಿಶ್ರಿತ ನೀರು
  • ಶೃಂಗೇರಿ-ಮಂಗಳೂರು ಹೆದ್ದಾರಿ ನಡುವೆ ಸಂಚಾರಕ್ಕೆ ಅಡಚಣೆ!

ಚಿಕ್ಕಮಗಳೂರು, ಆಗಸ್ಟ್​​ 10: ಮಳೆಯನಾಡು ಎಂದೇ ಪ್ರಸಿದ್ಧವಾಗಿರುವ ಕಾಫಿನಾಡು ಚಿಕ್ಕಮಗಳೂರು (chikkamagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೊಂಚ ವಿರಾಮ ನೀಡಿದ್ದ ಮಳೆ (Rain) ಮತ್ತೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಹಲವು ಭಾಗಗಳಲ್ಲಿ ರಣಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣದಷ್ಟು ಮಳೆಯಾಗದಿದ್ದರೂ ಬಿಟ್ಟು ಬಿಟ್ಟು ಸುರಿಯುತ್ತಿರುವ ನಿರಂತರ ಗಾಳಿ-ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಾಗಿ ನಾನಾ ಅವಾಂತರಗಳು ಸಂಭವಿಸುತ್ತಿವೆ.

ಮಳೆಗೆ ಧರೆ ಕುಸಿತ: ಮನೆ ನುಗ್ಗಿದ ಮಣ್ಣು ಮಿಶ್ರಿತ ನೀರು

ಕೊಪ್ಪ ತಾಲೂಕಿನ ಅಂಬಳಿಕೆ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಗೆ ಪವನ್ ಎಂಬುವವರ ಮನೆಯ ಬಳಿ ಇರುವ ಧರೆ ಕುಸಿಯುತ್ತಿದೆ. ಧರೆ ಕುಸಿದು ಮನೆಯ ಹಿಂಭಾಗಕ್ಕೆ ಬಂದಿದ್ದು. ಮಳೆ ಹೆಚ್ಚಾದರೆ ಸಂಪೂರ್ಣ ಧರೆ ಕುಸಿಯುವ ಆತಂಕ ಎದುರಾಗಿದೆ. ಮನೆಯೊಳಗು ಮಣ್ಣು ಮಿಶ್ರಿತ ನೀರು ನುಗ್ಗಿದ್ದು, ಸದ್ಯ ಮನೆ ಖಾಲಿ ಮಾಡಿದ್ದಾರೆ. ಇನ್ನಷ್ಟು ಮಳೆಯಾದರೆ 100 ಅಡಿಗಳ ಎತ್ತರದಿಂದ ಧರೆ ಕುಸಿದು ಮನೆ ಮೇಲೆ ಬೀಳುವ ಆತಂಕ ಎದುರಾಗಿದೆ.

ಇದನ್ನೂ ಓದಿ: ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ: ಪೊಲೀಸ್ ವಸತಿಗೃಹಗಳತ್ತ ಕೊಚ್ಚಿಬಂತು ನೂರಾರು ಟನ್ ಕಸದ ರಾಶಿ!

ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಅಬ್ಬರ ಮುಂದುವರೆದಿದ್ದು, ನಿರಂತರ ಮಳೆಗೆ ಭೂಮಿಯ ತೇವಾಂಶ ಹೆಚ್ಚಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ-ಪದೇ ಗುಡ್ಡ ಕುಸಿಯುತ್ತಿದೆ. ಶೃಂಗೇರಿ ತಾಲೂಕಿನ ಸುತ್ತಮುತ್ತ ನಿರಂತರ ಮಳೆಯಿಂದ ನಾನಾ ಅವಾಂತರಗಳು ಸೃಷ್ಠಿಯಾಗಿವೆ. ಶೃಂಗೇರಿ ತಾಲೂಕಿನ ಕಡೇಮನೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಬೃಹತ್ ಗುಡ್ಡ ಕುಸಿದಿದೆ.

ಶೃಂಗೇರಿ-ಮಂಗಳೂರು ಹೆದ್ದಾರಿ ನಡುವೆ ಸಂಚಾರಕ್ಕೆ ಅಡಚಣೆ!

ಗಾಳಿ-ಮಳೆ ಹೆಚ್ಚಾದಂತೆ ರಸ್ತೆ ಬದಿಯ ಗುಡ್ಡವು ಮರಗಳ ಸಮೇತ ಧರೆಗೆ ಉರುಳಿದ್ದು, ರಾಷ್ಟ್ರೀಯ ಹೆದ್ದಾರಿ 169ರ ಕಾರ್ಕಳ-ಮಂಗಳೂರು- ಶೃಂಗೇರಿ ನಡುವಿನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ರಸ್ತೆಗೆ ಬಿದ್ದಿರುವ ಭಾರೀ ಪ್ರಮಾಣದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ. ಆದರೆ, ಮಳೆಯಿಂದಾಗಿ ಸ್ವಲ್ಪ ಸ್ವಲ್ಪ ಮಣ್ಣು ಜಾರುತ್ತಿದ್ದು, ತೆರವು ಕಾರ್ಯ ಸವಾಲಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ಮಾರ್ಗದಲ್ಲಿ ಮಳೆ ಹೆಚ್ಚಾದಂತೆಲ್ಲ ಭೂಮಿಯ ತೇವಾಂಶ ಹೆಚ್ಚಾಗಿ ಧರೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಹುಟ್ಟಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ತುಂಗಾ, ಭದ್ರಾ ಅಬ್ಬರಕ್ಕೆ ಹೊಲ-ಗದ್ದೆಗಳು ಜಲಾವೃತ

ಕೊಂಚ ವಿರಾಮ ನೀಡಿದ್ದ ಮಳೆ ಮತ್ತೆ ಮಲೆನಾಡು ಭಾಗದಲ್ಲಿ ಆರ್ಭಟ ಮುಂದುವರೆಸಿದೆ. ಕೊಪ್ಪ, ಶೃಂಗೇರಿ ಭಾಗದಲ್ಲಿ ಧರೆ ಕುಸಿಯುವ ಆತಂಕ ಸೃಷ್ಟಿಯಾಗಿದೆ. ವಾಡಿಕೆ ಪ್ರಮಾಣದಷ್ಟು ಮಳೆಯಾಗದೆ ಇದ್ದರು ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ಅನಾಹುತಗಳು‌ ಸಂಭವಿಸುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ