AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಗಂಗಾಧರ್ ಎಂಬವರ ವಿರುದ್ಧ ಬೆಂಗಳೂರಿನ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಆರೋಪ ಮಾಡಿದ್ದಾರೆ. ಸದ್ಯ ಈ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕಾಲೇಜು ಆಡಳಿತವು ಪ್ರೊಫೆಸರ್​​ಗೆ ಶೋಕಾಸ್ ನೋಟಿಸ್ ನೀಡಿ ವಿವರ ನೀಡುವಂತೆ ಸೂಚಿಸಿದೆ.

ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ
ಸಾಂದರ್ಭಿಕ ಚಿತ್ರ (ಒಳಚಿತ್ರದಲ್ಲಿ ಆರೋಪಿ ಗಂಗಾಧರ್)
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 25, 2025 | 1:40 PM

Share

ಚಿಕ್ಕಮಗಳೂರು, ನವೆಂಬರ್ 25: ಚಿಕ್ಕಮಗಳೂರು ಮೆಡಿಕಲ್ ಕಾಲೇಜು (Chikkamagaluru Institute of Medical Sciences) ಅನಾಟಮಿ ಪ್ರೊಫೆಸರ್‌ ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು ಮೂಲದ ಮೂರನೇ ಸೆಮಿಸ್ಟರ್​ನ ವೈದ್ಯಕೀಯ ವಿದ್ಯಾರ್ಥಿನಿಗೆ ವಾಟ್ಸ್​ಆ್ಯಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಇದೀಗ ಚಿಕ್ಕಮಗಳೂರು (Chikkamagaluru) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಹರೀಶ್ ಪ್ರೊಫೆಸರ್‌ ಗಂಗಾಧರ್​ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಗಂಗಾಧರ್​ರಿಂದ ಕಿರುಕುಳ ಆಗುತ್ತಿದೆ ಎಂದು ಬೆಂಗಳೂರು ಮೂಲದ ವಿದ್ಯಾರ್ಥಿನಿ ಆರೋಪ ಮಾಡಿದ್ದರು. 2023 ರಿಂದ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಸದ್ಯ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಚಿಕ್ಕಮಗಳೂರು ಮೆಡಿಕಲ್ ಕಾಲೇಜು ನೋಟಿಸ್​ನಲ್ಲೇನಿದೆ?

ಸಂತ್ರಸ್ತೆಯು ಇನ್​ಸ್ಟಾಗ್ರಾಂ ಹಾಗೂ ಯೂಟ್ಯೂಬ್​ನಲ್ಲಿ ನೀಡಿರುವ ಸಂದರ್ಶನದಲ್ಲಿ, ಡಾ.ಗಂಗಾಧರ ಅವರು ವಾಟ್ಸ್​​ಆ್ಯಪ್ ಚಾಟ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವ ಬಗ್ಗೆ ಆರೋಪಿಸಿರುತ್ತಾರೆ. ಕುರಿತು ಲಿಖಿತ ಸಮಜಾಯಿಷಿ ನೀಡಬಬೇಕು ಎಂದು ಶೋಕಾಸ್ ನೋಟಿಸ್​​ನಲ್ಲಿ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ: ಬೆಂಗಳೂರಿನಲ್ಲಿ ಯುವಕನ ಭೀಕರ ಕೊಲೆ

ಸಾಮಾಜಿಕ ಜಾಲತಾಣಗಳಾದ ಇನ್​ಸ್ಟಾಗ್ರಾಂ ಹಾಗೂ ಯೂಟ್ಯೂಬ್​ನಲ್ಲಿ ಸಂತ್ರಸ್ತೆಯು ನೀಡಿರುವ ಸಂದರ್ಶನದಲ್ಲಿ ನೀವು ವಿದ್ಯಾರ್ಥಿನಿಯೊಡನೆ ಅನುಚಿತ ವಾಟ್ಸ್​​ಆ್ಯಪ್ ಚಾಟ್ ನಡೆಸಿರುವ ಬಗ್ಗೆ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ದಿನಾಂಕ 23-11-2025 ರಿಂದ ಹರಿದಾಡುತ್ತಿರುತ್ತದೆ. ಈ ವಾಟ್ಸ್​​ಆ್ಯಪ್ ಚಾಟ್ ಕುರಿತಂತೆ ತಮ್ಮ ಬಗ್ಗೆ ನೀಡಿರುವ ಹೇಳಿಕೆಗಳ ಕುರಿತು ಈ ನೋಟೀಸ್ ತಲುಪಿದ ಕೂಡಲೇ ಲಿಖಿತ ಸಮಜಾಯಿಷಿಯನ್ನು ನೀಡಲು ಸೂಚಿಸಿದೆ. ತಪ್ಪಿದ್ದಲ್ಲಿ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಗಂಗಾಧರ್ ಅವರಿಗೆ ನೀಡಿದ ನೋಟಿಸ್​​ನಲ್ಲಿ ಡೀನ್ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?