ಚಿಕ್ಕಮಗಳೂರು: ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರಿನ ಕಳಸ ತಾಲೂಕಿನ ಹಳುವಳ್ಳಿಯ ಬಳಿ ಭದ್ರಾ ನದಿಯಲ್ಲಿ 10ನೇ ತರಗತಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮಾರ್ಚ್ 16ರಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಪೊಲೀಸರು ಹುಡುಕಿದ್ದರು. ಸದ್ಯ ಆತನ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಚಿಕ್ಕಮಗಳೂರು: ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ
ಚಿಕ್ಕಮಗಳೂರು: ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ
Edited By:

Updated on: Mar 19, 2025 | 8:35 PM

ಚಿಕ್ಕಮಗಳೂರು, ಮಾರ್ಚ್​​ 19: ನಾಪತ್ತೆಯಾಗಿದ್ದ (Missing) 10ನೇ ತರಗತಿ ವಿದ್ಯಾರ್ಥಿ (student) ನದಿಯಲ್ಲಿ ಶವವಾಗಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿರುವ ಶ್ರೇಯಸ್, ಕಳಸ ಪಟ್ಟಣದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಕಳಸ‌ ಪಟ್ಟಣದ ಚಿಕ್ಕಪ್ಪನ ನಿವಾಸದಲ್ಲಿ ಶ್ರೇಯಸ್ ವಾಸವಿದ್ದ. ನಾಪತ್ತೆಯಾಗಿದ್ದ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಇಂದು ಭದ್ರಾ ನದಿಯಲ್ಲಿ ಶವ ತೆಲುವುದನ್ನ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಭದ್ರಾ ನದಿಯಿಂದ ಶ್ರೇಯಸ್​ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ. ಶ್ರೇಯಸ್ ಸಾವಿನ ಸುತ್ತ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ.

ಕಾನೂನು ವಿದ್ಯಾರ್ಥಿ ಹಾಸ್ಟೆಲ್​​​ ಕೊಠಡಿಯಲ್ಲಿ ನೇಣಿಗೆ ಶರಣು

ಕಾನೂನು ವಿದ್ಯಾರ್ಥಿ ಓರ್ವ ಎಸ್​ಸಿ, ಎಸ್​​ಟಿ ಹಾಸ್ಟೆಲ್​​​ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆಕಾಶ್(21) ಮೃತ ವಿದ್ಯಾರ್ಥಿ. ಮೃತ ಆಕಾಶ್ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ತೇರದಾಳ ಗ್ರಾಮದ ನಿವಾಸಿ. ಚಿತ್ರದುರ್ಗದ ಕೋಟೆ ಠಾಣೆಗೆ ಆಕಾಶ್ ತಂದೆ ಶರಣಪ್ಪ ದೂರು ನೀಡಿದ್ದಾರೆ.

ಇದನ್ನೂ ಓದಿ
ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ!
7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್
ಮರ್ಮಾಂಗಕ್ಕೆ ಒದ್ದು ಕೊಲ್ಲಲು ಯತ್ನ: ಪತ್ನಿ ವಿರುದ್ಧ ಪತಿ ಕಿರುಕುಳ ಆರೋಪ
ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು

ಇದನ್ನೂ ಓದಿ: ಮರ್ಮಾಂಗಕ್ಕೆ ಒದ್ದು ಕೊಲ್ಲಲು ಪ್ರಯತ್ನಿಸಿದ್ದಾಳೆ: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿದ ಟೆಕ್ಕಿ

ಸಹಪಾಠಿ ವಿದ್ಯಾರ್ಥಿನಿಯನ್ನು ಮೃತ ಆಕಾಶ್ ಪ್ರೀತಿಸುತ್ತಿದ್ದ.​ ವಿಷಯ ತಿಳಿದು ವಿದ್ಯಾರ್ಥಿನಿಯ ಸಂಬಂಧಿಕರು 2024ರ ಆಗಸ್ಟ್​ನಲ್ಲೇ ಕಾಲೇಜಿಗೆ ಬಂದು ಬೆದರಿಕೆ ಆರೋಪ ಮಾಡಿದ್ದಾರೆ. ಇದರಿಂದ ಮನನೊಂದು ಆಕಾಶ್ ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿಬಂದಿದೆ. ಆ ಮೂಲಕ ಮಗನ ಸಾವಿನ ಬಗ್ಗೆ ತಂದೆ ಶರಣಪ್ಪ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

ಕ್ಷುಲ್ಲಕ ವಿಚಾರಕ್ಕೆ ಪ್ರೌಢ ಶಾಲೆ ವಿದ್ಯಾರ್ಥಿಗಳ ನಡುವೆ ಮಾರಾಮರಿ ನಡೆದಿರುವಂತಹ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಲ್ಲನಾಯಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ ಊಟ ಮಾಡಿದ ನಂತರ ತಟ್ಟೆತೊಳೆಯುವ ವಿಚಾರದಲ್ಲಿ ಗಲಾಟೆ ನಡೆದಿದೆ.

ಇದನ್ನೂ ಓದಿ: ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ: ಅಳಿಯನ ಕೈಯಲ್ಲೇ ಹೆಣವಾದ ಪಂಚನಹಳ್ಳಿ ಸಾಹುಕಾರ

ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾರಾಮರಿ ನಡೆದಿದ್ದು, ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರಿಂದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ಮಾಡಲಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.