AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್​ ಗಿರಿ ಪ್ರಕರಣ; ಆರೋಪಿಗಳಿಗೆ 13 ದಿನ ನ್ಯಾಯಾಂಗ ಬಂಧನ

ಇತ್ತೀಚೆಗೆ ಲವ್​ ಜಿಹಾದ್​ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಪ್ರಾಪ್ತ ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಮುಸ್ಲಿಂ (Muslim) ಯುವಕನ ಮೇಲೆ ಭಜರಂಗದಳ ಕಾರ್ಯಕರ್ತರು (Bajrang Dal Workers) ನೈತಿಕ ಪೊಲೀಸ್ ಗಿರಿ (Moral Policing) ನಡೆಸಿದ್ದರು. ಈ ಹಿನ್ನಲೆ 7 ಜನರಿಗೆ 13 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚಿಕ್ಕಮಗಳೂರು ನಗರದ JMFC ನ್ಯಾಯಾಲಯ ಆದೇಶಿಸಿದೆ.

ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್​ ಗಿರಿ ಪ್ರಕರಣ; ಆರೋಪಿಗಳಿಗೆ 13 ದಿನ ನ್ಯಾಯಾಂಗ ಬಂಧನ
ಚಿಕ್ಕಮಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್​ ಗಿರಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 09, 2024 | 4:50 PM

Share

ಚಿಕ್ಕಮಗಳೂರು, ಫೆ.09: ಚಿಕ್ಕಮಗಳೂರಿನಲ್ಲಿ ಲವ್​ ಜಿಹಾದ್ ಮತ್ತೆ ಸದ್ದು ಮಾಡಿದ್ದು, ಇಂದು ಮುಂಜಾನೆ ಅಪ್ರಾಪ್ತ ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಮುಸ್ಲಿಂ (Muslim) ಯುವಕನ ಮೇಲೆ ಭಜರಂಗದಳ ಕಾರ್ಯಕರ್ತರು (Bajrang Dal Workers) ನೈತಿಕ ಪೊಲೀಸ್ ಗಿರಿ (Moral Policing) ನಡೆಸಿದ್ದರು. ಈ ಹಿನ್ನಲೆ 7 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಜಿಲ್ಲಾ ಘಟಕದ ಸಂಚಾಲಕ ಶಿವಕುಮಾರ್ ಸ್ವರೂಪ್,  ಕಾರ್ತಿಕ್ ಸೇರಿ 7 ಆರೋಪಿಗಳಿಗೆ 13 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚಿಕ್ಕಮಗಳೂರು ನಗರದ JMFC ನ್ಯಾಯಾಲಯ ಆದೇಶಿಸಿದೆ.

ಘಟನೆ ವಿವರ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗಾಳಿಗಂಡಿ ನಿವಾಸಿಯಾದ ರೂಮನ್ , ಉಜಿರೆಯ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ ಅಪ್ರಾಪ್ತ ಬಾಲಕಿಯ ಜೊತೆ ಸುತ್ತಾಡುತ್ತಿದ್ದು, ಆಕೆಯ ಜೊತೆ ರೂಮನ್ ಇರುವ ಫೋಟೋಸ್ ಹಾಗೂ ವಿಡಿಯೋಸ್ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಭಜರಂಗದಳ ಕಾರ್ಯಕರ್ತರು, ನಿನ್ನೆ(ಫೆ,08) ರಾತ್ರಿ ರೂಮನ್​ನನ್ನು ಆಲ್ದೂರಿಗೆ ಕರೆಸಿಕೊಂಡು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ರೂಮನ್ ದೂರು ದಾಖಲಿಸಿದ್ದ. ಮತ್ತೊಂದೆಡೆ ಡ್ಯಾನ್ಸ್ ಮಾಸ್ಟರ್ ರೂಮನ್ ವಿರುದ್ಧ ಕೂಡ ಅಪ್ರಾಪ್ತ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ಬಳಿಕ ಆಲ್ದೂರು ಪೊಲೀಸ್ ಠಾಣೆಯಲ್ಲಿ ರೂಮನ್ ಮತ್ತು ಭಜರಂಗದಳ ಕಾರ್ಯಕರ್ತರ ವಿರುದ್ಧ FIR ದಾಖಲಾಗಿತ್ತು.

ಇದನ್ನೂ ಓದಿ:Love Jihad: ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಭಜರಂಗದಳ ಕಾರ್ಯಕರ್ತರ ಹಲ್ಲೆ, 7 ಮಂದಿ ಅರೆಸ್ಟ್

ಆಲ್ದೂರು ಪಟ್ಟಣದಲ್ಲಿ ನೂರಾರು ಪೊಲೀಸರ ನಿಯೋಜನೆ

ಇನ್ನು ಡ್ಯಾನ್ಸ್ ಮಾಸ್ಟರ್ ರೂಮನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದರೆ, ಇತ್ತ ಬಂಧನಕ್ಕೋಳಗಾಗಿದ್ದ 7 ಜನ ಬಜರಂಗ ಕಾರ್ಯಕರ್ತರನ್ನು 13 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶಿಸಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಆಲ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಇಂತಹ ಪ್ರಕರಣಗಳು ಸರ್ವೇ ಸಾಮಾನ್ಯವಾಗಿದೆ. ಇತ್ತೀಚೆಗೆ ಗದಗದ ಬೆಟಗೇರಿಯಲ್ಲೂ ಲವ್ ಜಿಹಾದ್ ಪ್ರಕರಣವೊಂದು ನಡೆದಿತ್ತು. 19 ವರ್ಷದ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ಯುವಕನೊಬ್ಬ ಪ್ರೀತಿಯ ಬಲೆಗೆ ಬೀಳಿಸಿಕೊಂಡು ಮೋಸ ಮಾಡಿದ್ದ. ಇದೀಗ  ಇಂತಹ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ