AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ; ಗೋಣಿಬೀಡು ಠಾಣೆಯ ಪಿಎಸ್​ಐ ಅರ್ಜುನ್​ಗೆ 14 ದಿನಗಳ ನ್ಯಾಯಾಂಗ ಬಂಧನ

ಮಹಿಳೆಗೆ ಕರೆ ಮಾಡಿದ ವಿಚಾರವೊಂದಕ್ಕೆ ಸಂಬಂಧಿಸಿ ಪಿಎಸ್​ಐ ಅರ್ಜುನ್ ನನ್ನ ಪೊಲೀಸ್ ಠಾಣೆಗೆ ದೈಹಿಕ ಹಲ್ಲೆ ನಡೆಸಿದ್ದರು. ಕುಡಿಯಲು ನೀರು ಕೇಳಿದಾಗ ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ ಮೂತ್ರ ಹೊಯ್ಯಿಸಿದ್ದರು. ಮತ್ತು ನೆಲಕ್ಕೆ ಬಿದ್ದಿದ್ದ ಮೂತ್ರವನ್ನು ನೆಕ್ಕಿಸಿದ್ದರು ಎಂದು ದಲಿತ ಸಮುದಾಯದ ಯುವಕ ಆರೋಪಿಸಿದ್ದರು.

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ; ಗೋಣಿಬೀಡು ಠಾಣೆಯ ಪಿಎಸ್​ಐ ಅರ್ಜುನ್​ಗೆ 14 ದಿನಗಳ ನ್ಯಾಯಾಂಗ ಬಂಧನ
ನ್ಯಾಯಾಂಗ ಬಂಧನಕ್ಕೊಳಗಾದ ಪಿಎಸ್​ಐ ಅರ್ಜುನ್
TV9 Web
| Edited By: |

Updated on: Sep 02, 2021 | 3:24 PM

Share

ಚಿಕ್ಕಮಗಳೂರು: ದಲಿತ ಸಮುದಾಯದ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣದಲ್ಲಿ ಪಿಎಸ್ಐ ಅರ್ಜುನ್​ಗೆ ಚಿಕ್ಕಮಗಳೂರಿನ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡುವಿನಲ್ಲಿ ದಲಿತ ಸಮುದಾಯದ ಯುವಕನಿಗೆ ಮೂತ್ರ ಕುಡಿಸಿದ ಆರೋಪಕ್ಕೆ ಸಂಬಂಧಿಸಿ ಪಿಎಸ್ಐ ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನಿನ್ನೆ ಸಿಐಡಿ ಪೊಲೀಸರು ಪಿಎಸ್ಐ ಅರ್ಜುನ್ ಅವರನ್ನು ವಶಪಡಿಸಿಕೊಂಡಿದ್ದರು.

ಮಹಿಳೆಗೆ ಕರೆ ಮಾಡಿದ ವಿಚಾರವೊಂದಕ್ಕೆ ಸಂಬಂಧಿಸಿ ಪಿಎಸ್​ಐ ಅರ್ಜುನ್ ನನ್ನ ಪೊಲೀಸ್ ಠಾಣೆಗೆ ದೈಹಿಕ ಹಲ್ಲೆ ನಡೆಸಿದ್ದರು. ಕುಡಿಯಲು ನೀರು ಕೇಳಿದಾಗ ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ ಮೂತ್ರ ಹೊಯ್ಯಿಸಿದ್ದರು. ಮತ್ತು ನೆಲಕ್ಕೆ ಬಿದ್ದಿದ್ದ ಮೂತ್ರವನ್ನು ನೆಕ್ಕಿಸಿದ್ದರು ಎಂದು ದಲಿತ ಸಮುದಾಯದ ಯುವಕ ಆರೋಪಿಸಿದ್ದರು. ಈಕುರಿತು ಪ್ರಕರಣದ ದಾಖಲಾಗುತ್ತಿದ್ದಂತೆ ಪಿಎಸ್​ಐ ಅರ್ಜಿನ್ ತಲೆಮರೆಸಿಕೊಂಡಿದ್ದರು, ಆನಂತರ ಸಿಐಡಿಗೆ ತನಿಖೆಯ ಹೊಣೆ ವಹಿಸಲಾಗಿತ್ತು. ಸಿಐಡಿ ತಂಡ ಪಿಎಸ್​ಐ ಅರ್ಜುನ್​ರನ್ನು ಬಂಧಿಸಿತ್ತು.

ಸೆಪ್ಟೆಂಬರ್ 1ರಂದು ಬೆಂಗಳೂರಿನಲ್ಲಿ ಪಿ.ಎಸ್.ಐ. ಅರ್ಜುನ್ ನನ್ನ ಬಂಧಿಸಿದ ಸಿ.ಐ.ಡಿ. ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಪುಷ್ಪಾಂಜಲಿ ಅವರು ಆರೋಪಿ ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪಿ.ಎಸ್.ಐ. ಆಗಿದ್ದ ಅರ್ಜುನ್ ಮೇ.10ರಂದು ಮಹಿಳೆಗೆ ಕರೆ ಮಾಡಿದ ವಿಚಾರ ಸಂಬಂಧ ಪುನೀತ್ ಎಂಬ ಯುವಕನನ್ನ ವಿಚಾರಣೆಗೆ ಕರೆತಂದಿದ್ದರು. ಈ ವೇಳೆ ನನಗೆ ಬಾಯಾರಿಕೆ ಎಂದು ನೀರು ಕೇಳಿದಾಗ ಮತ್ತೊಬ್ಬ ಆರೋಪಿಯ ಮೂತ್ರ ಕುಡಿಸಿ, ನೆಲಕ್ಕೆ ಬಿದ್ದ ಮೂತ್ರವನ್ನ ನೆಕ್ಕಿಸಿದ್ದರು ಎಂದು ಪುನೀತ್ ಆರೋಪಿಸಿದ್ದರು. ಘಟನೆ ಸಂಬಂಧ ಪಿಎಸ್ಐ ವಿರುದ್ಧ ಆರೋಪ ಮಾಡಿದ ಯುವಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದ. ಬಳಿಕ ಅರ್ಜುನ್ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಕೇಸ್ ದಾಖಲಾಗಿ, ಸರ್ಕಾರ ಅರ್ಜುನ್ ರನ್ನ ಅಮಾನತು ಮಾಡಿ ಪ್ರಕರಣವನ್ನ ಸಿಐಡಿಗೆ ವಹಿಸಿತ್ತು. ಬಂಧನಕ್ಕೊಳಗಾಗುವ ಆತಂಕದಿಂದ ಪಿಎಸ್​ಐ ಅರ್ಜುನ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಸೆಪ್ಟೆಂಬರ್ 1ರ ಬುಧವಾರ ರಾತ್ರಿ ಸಿಐಡಿ ಪೊಲೀಸರು ಅರ್ಜುನ್ ರನ್ನ ಬೆಂಗಳೂರಿನಲ್ಲಿ ಬಂಧಿಸಿದ್ದರು.

ಇದನ್ನೂ ಓದಿ: 

ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ: ವ್ಯಾಪಕ ಖಂಡನೆ

(Chikkamagaluru Mudigere Gonibeedu PSI Arjun gets 14-day judicial custody in Dalit youth forced to drink urine)