Mullayyanagiri Betta: ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಸಸ್ಯ ಸಂಪತ್ತು ಭಸ್ಮ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 11, 2024 | 5:30 PM

Mullayyanagiri Betta: ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಬಿಸಿಲಿನ ತಾಪಕ್ಕೆ ಬೆಂಕಿ ಮತ್ತಷ್ಟು ವ್ಯಾಪಿಸುದ್ದು, ಮುಳ್ಳಯ್ಯನಗಿರಿ ಬೆಟ್ಟ ಧಗಧಗಿಸಿ ಉರಿದಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸಾಕಷ್ಟು ಪ್ರವಾಸಿಗರು ಮುಳ್ಳಯ್ಯನಗಿರಿ ಗುಡ್ಡಕ್ಕೆ ಭೇಟಿ ನೀಡುತ್ತಾರೆ.

Mullayyanagiri Betta: ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಸಸ್ಯ ಸಂಪತ್ತು ಭಸ್ಮ
ಕಾಡ್ಗಿಚ್ಚು
Follow us on

ಚಿಕ್ಕಮಗಳೂರು, ಫೆಬ್ರವರಿ 11: ಚಿಕ್ಕಮಗಳೂರು ತಾಲೂಕಿನ ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡ (Mullayyanagiri Betta) ದಲ್ಲಿ ಕಾಡ್ಗಿಚ್ಚು (Fire) ಹೊತ್ತಿಕೊಂಡ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿರುವಂತಹ ಘಟನೆ ನಡೆದಿದೆ. ಬಿಸಿಲಿನ ತಾಪಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ ಮುಳ್ಳಯ್ಯನಗಿರಿ ಬೆಟ್ಟ ಧಗಧಗಿಸಿ ಉರಿದಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಚಂದ್ರದ್ರೋಣ ಪರ್ವತದ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

ಸೋಯಾ ಬಣವಿಗೆ ಬೆಂಕಿ

ಕಟಾವು ಮಾಡಿ ಬಣವಿ ಮಾಡಿಟ್ಟಿದ್ದ ಸೋಯಾಬಿನ್ ಬೆಳೆಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಇತ್ತೀಚೆಗೆ ಧಾರವಾಡದಲ್ಲಿ ನಡೆದಿತ್ತು. ನಗರದ ಹೊರಭಾಗದಲ್ಲಿರುವ ಚರಂತಿಮಠ ಗಾರ್ಡನ್ ಹತ್ತಿರದ ಗಂಗನಗೌಡ ಪಾಟೀಲ್ ಅನ್ನೋರಿಗೆ ಸೇರಿದ್ದ ಬಣವಿಯಲ್ಲಿ ಸುಮಾರು 2 ಲಕ್ಷ ರೂ. ಮೌಲ್ಯದ ಸೋಯಾಬೀನ್ ಇತ್ತು. ಯಾರೋ ಕಿಡಿಗೇಡಿಗಳು ಈ ಬಣವಿಗೆ ಬೆಂಕಿ ಇಟ್ಟಿದ್ದಕ್ಕೆ ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣದ ದಾಖಲಾಗಿತ್ತು.

ತೋಟಕ್ಕೆ ಆಕಸ್ಮಿಕ ಬೆಂಕಿ: ತೆಂಗು, ಅಡಿಕೆ ನಾಶ

ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿತ್ತು.

ಇದನ್ನೂ ಓದಿ: Forest Fire: ಕಾಡ್ಗಿಚ್ಚಿನಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ 250 ಹೆಕ್ಟರ್​​ನಷ್ಟು ಅರಣ್ಯ ಸಂಪತ್ತು ಹಾನಿ

ಗ್ರಾಮದ ರಾಮಣ್ಣ ಎಂಬುವವರ ತೋಟದಲ್ಲಿ ಘಟನೆ ನಡೆದಿದ್ದು, ತೋಟದಲ್ಲಿ ಇದ್ದ ತೆಂಗು, ಅಡಿಕೆ ಮರಗಳು, ಪೈಪ್​ಗಳು ಬೆಂಕಿಗೆ ಆಹುತಿಯಾಗಿದ್ದವು. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಹಲಗೂರು ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಸೆರಾಮಿಕ್ಸ್ ಮತ್ತು ಗ್ರಾನೈಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್​: ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿ

ಶಾರ್ಟ್ ಸರ್ಕ್ಯೂಟ್​ನಿಂದಾಗಿ ಸೆರಾಮಿಕ್ಸ್ ಮತ್ತು ಗ್ರಾನೈಟ್ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಸೆರಾಮಿಕ್ಸ್ ವಸ್ತುಗಳು ಹಾಗೂ ವಿವಿಧ ವಸ್ತುಗಳು ಅಗ್ನಿಗೆ ಆಹುತಿಯಾದ‌ ಘಟನೆ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ಭಿನ್ನಮಂಗಲದ ಸೆರಾಮಿಕ್ಸ್ & ಗ್ರಾನೈಟ್ ಅಂಗಡಿಯಲ್ಲಿ ನಡೆದಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಕಾಡ್ಗಿಚ್ಚಿಗೆ ಧಗ-ಧಗ ಹೊತ್ತಿ ಉರಿದ ಅರಣ್ಯ ಇಲಾಖೆ ಸಿಬ್ಬಂದಿಯ ಮೂರು ಬೈಕ್​ಗಳು!

ಭಿನ್ನಮಂಗಲದಲ್ಲಿ ಶಿವರಾಜ್ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಬ್ಬದ ಪ್ರಯುಕ್ತ ಮಧ್ಯಾಹ್ನದವರೆಗೂ ಅಂಗಡಿ ಕಾರ್ಯನಿರ್ವಹಿಸಿ ಮನೆಗೆ ತೆರಳಿದ್ದರು. ಈ ವೇಳೆಯಲ್ಲಿ ಅಂಗಡಿಯಲ್ಲಿನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಸೆರಾಮಿಕ್ಸ್ ವಸ್ತುಗಳಿಗೆ ಬೆಂಕಿ ಹೊತ್ತಿದೆ ಅದೇ ಅಂಗಡಿ ಸಾಲಿನಲ್ಲಿ ವುಡ್ ಡೋರ್ ಅಂಗಡಿಗೂ ಬೆಂಕಿ ವಿಸ್ತರಿಸಿದ್ದು ತಕ್ಷಣ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದರು.

ಘಟನೆಯಲ್ಲಿ ಯಾರಿಗೂ ತೊಂದರೆಯಾಗದೇ 8 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂದು ಅಂಗಡಿ ಮಾಲಿಕ ಶಿವರಾಜ್ ತಿಳಿಸಿದ್ದರು. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:29 pm, Sun, 11 February 24