ಬೆಂಗಳೂರಿನ ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: ಚಿಕ್ಕಮಗಳೂರಿನ ಶ್ವಾನಗಳಿಗೆ ಊಟ ಹಾಕುವಂತಿಲ್ಲ

ಚಿಕ್ಕಮಗಳೂರಿನಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮುಂದುವರಿದಿದೆ. ಕಳೆದ ಮೂರು ದಿನದಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿವೆ. ಹೀಗಾಗಿ ಬೀದಿ ನಾಯಿಗಳಿಗೆ ಆಹಾರ ನೀಡದಂತೆ ನಗರಸಭೆ ಜನರಿಗೆ ಎಚ್ಚರಿಕೆ ನೀಡಿದೆ. ಸದ್ಯ ನಗರಸಭೆಯ ಈ ನಿರ್ಧಾರಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: ಚಿಕ್ಕಮಗಳೂರಿನ ಶ್ವಾನಗಳಿಗೆ ಊಟ ಹಾಕುವಂತಿಲ್ಲ
ಬೀದಿ ನಾಯಿ
Edited By:

Updated on: Jul 25, 2025 | 11:21 AM

ಚಿಕ್ಕಮಗಳೂರು, ಜುಲೈ 25: ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ (Street Dogs) ಬಿರಿಯಾನಿ ಭಾಗ್ಯ ಒದಗಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಇತ್ತ ಚಿಕ್ಕಮಗಳೂರಲ್ಲಿ (Chikkamagaluru) ಇದಕ್ಕೆ ತದ್ವಿರುದ್ಧವಾಗಿ ಬೀದಿ ನಾಯಿಗಳಿಗೆ ಊಟ ಹಾಕಿದರೆ ಕೇಸ್​ ಹಾಕಲಾಗುತ್ತಿದೆ. ನಗರದಲ್ಲಿ ಕಳೆದ ಮೂರು ದಿನಗಳಲ್ಲಿ ಮಕ್ಕಳು ಸೇರಿದಂತೆ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಇದರ ಬೆನ್ನಲ್ಲೇ ನಾಯಿಗಳಿಗೆ ಊಟ ಹಾಕಿದರೆ ಕೇಸ್ ಹಾಕುವುದಾಗಿ ನಗರಸಭೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

35ಕ್ಕೂ ಹೆಚ್ಚು ಜನರ ಮೇಲೆ ಅಟ್ಯಾಕ್​

ಚಿಕ್ಕಮಗಳೂರು ನಗರದಾದ್ಯಂತ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳು ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ನಿನ್ನೆ ಒಂದೇ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು, ಕಳೆದ ಮೂರು ದಿನದಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಅಟ್ಯಾಕ್​ ಮಾಡಿವೆ. ಸದ್ಯ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಮೂರು ದಿನದಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳ ದಾಳಿ

ಇದನ್ನೂ ಓದಿ
ಬೀದಿ ನಾಯಿಗಳಿಗೆ ಬಿಬಿಎಂಪಿ ಬಾಡೂಟ: ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ
ಜನರಿಗೆ ಇಂದಿರಾ ಕ್ಯಾಂಟೀನ್, ಬೀದಿ ನಾಯಿಗಳಿಗೆ ಬಾಡೂಟ! ಬಿಬಿಎಂಪಿ ಹೊಸ ಯೋಜನೆ
ಬೀದಿ ನಾಯಿಗಳ ನಿಯಂತ್ರಣಕ್ಕೆ BBMPಯಿಂದ 4 ವರ್ಷದಲ್ಲಿ 40 ಕೋಟಿ ರೂ. ಖರ್ಚು
ಬೆಂಗಳೂರಿನಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

ಇತ್ತ ಬೀದಿ ನಾಯಿಗಳ ದಾಳಿ ಹೆಚ್ಚಾದ ಬೆನ್ನಲ್ಲೇ ಚಿಕ್ಕಮಗಳೂರು ನಗರಸಭೆಯಿಂದ ನಗರದ ನಿವಾಸಿಗಳಿಗೆ ಕೇಸ್ ಹಾಕುವ ಎಚ್ಚರಿಕೆ ನೀಡಲಾಗಿದೆ. ಉಳಿದ ಆಹಾರ ನಾಯಿಗಳಿಗೆ ಹಾಕಬಾರದು. ಒಂದು ವೇಳೆ ಊಟ ಹಾಕಿದರೆ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮಕೈಗೊಳ್ಳುವುದಾಗಿ ನಗರಸಭೆ ಎಚ್ಚರಿಕೆ ನೀಡಿದೆ.

ನಗರಸಭೆ ಪ್ರಕಟಣೆಯಲ್ಲಿ ಏನಿದೆ?

ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಯಿ ಸಾಕಾಣಿಕೆದಾರರು ನಿಮ್ಮ ನಾಯಿಗಳನ್ನು ರಸ್ತೆಗೆ ಬಿಡದೆ ಬೆಲ್ಟ್, ಹಗ್ಗದಿಂದ ಕಟ್ಟಿ ನಿಮ್ಮ ಆವರಣದಲ್ಲೇ ಇಟ್ಟುಕೊಳ್ಳಿ. ಸಾರ್ವಜನಿಕರು ತಮ್ಮ ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳಿಗೆ ಆಹಾರವನ್ನು ಹಾಕುತ್ತಿರುವುದು ಕಂಡುಬಂದಿರುವುದರಿಂದ ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದಲ್ಲದೇ ಇದರಿಂದ ಸಾರ್ವಜನಿಕರಿಗೆ ಉಪದ್ರವಗಳೊಂದಿಗೆ ನಾಯಿ ಕಡಿತಗಳ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಕಛೇರಿಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆಹಾರವನ್ನು ಹಾಕುವುದು ಕಂಡುಬಂದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಂಬಂಧಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.

ನಗರಸಭೆ ಕಮಿಷನರ್ ವಿರುದ್ಧ ಜನರು ಆಕ್ರೋಶ

ನಗರದಾದ್ಯಂತ ಸಾವಿಕ್ಕೂ ಅಧಿಕ ಬೀದಿ ನಾಯಿಗಳು ಬೀಡು ಬಿಟ್ಟಿವೆ. ನಾಯಿ ಸೆರೆ ಹಿಡಿಯುವುದನ್ನು ಬಿಟ್ಟು ಕೇಸ್​ ಹಾಕುತ್ತೇವೆ ಎಂದ ನಗರಸಭೆ ಕಮಿಷನರ್ ಬಸವರಾಜ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.