AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru News: ಚಿಕ್ಕಮಗಳೂರಿನ ಶೇ 40 ರಷ್ಟು ಮಹಿಳೆಯರಿಗಿಲ್ಲ ಶಕ್ತಿ ಯೋಜನೆಯ ಪ್ರಯೋಜನ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಅಲಭ್ಯತೆಯಿಂದಾಗಿ ಶೇ 40ರಷ್ಟು ಮಹಿಳೆಯರು ಶಕ್ತಿ ಉಚಿತ ಪ್ರಯಾಣ ಯೋಜನೆಯಿಂದ ವಂಚಿತರಾಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

Chikkamagaluru News: ಚಿಕ್ಕಮಗಳೂರಿನ ಶೇ 40 ರಷ್ಟು ಮಹಿಳೆಯರಿಗಿಲ್ಲ ಶಕ್ತಿ ಯೋಜನೆಯ ಪ್ರಯೋಜನ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jun 20, 2023 | 7:00 PM

Share

ಚಿಕ್ಕಮಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಜಾರಿಯಿಂದ ಚಿಕ್ಕಮಗಳೂರು (Chikkamagalur) ವಿಭಾಗದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (KSRTC Bus) ಪ್ರಯಾಣಿಸುವವರ ಸಂಖ್ಯೆಯಲ್ಲಿ ಶೇ 25ರಷ್ಟು ಏರಿಕೆಯಾಗಿದೆ. ಆದಾಗ್ಯೂ, ಹೊಸ ಯೋಜನೆಯ ಅನುಷ್ಠಾನದ ನಂತರ ಆದಾಯ ಸಂಗ್ರಹವು ಸುಮಾರು ಶೇ 45 ರಷ್ಟು ಕುಸಿದಿದೆ. ಈ ವಿಭಾಗವು ಚಿಕ್ಕಮಗಳೂರು ಜಿಲ್ಲೆಯ ಏಳು ತಾಲ್ಲೂಕುಗಳನ್ನು ಮತ್ತು ಹಾಸನ ಜಿಲ್ಲೆಯ ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳನ್ನು ಒಳಗೊಂಡಿದೆ. ವಿಪರ್ಯಾಸವೆಂದರೆ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಅಲಭ್ಯತೆಯಿಂದಾಗಿ ಶೇ 40ರಷ್ಟು ಮಹಿಳೆಯರು ಯೋಜನೆಯಿಂದ ವಂಚಿತರಾಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಮತ್ತೊಂದೆಡೆ, ಪ್ರಯಾಣಿಕರ ಸಂಖ್ಯೆ 1.6 ಲಕ್ಷ ಮತ್ತು ಆದಾಯ 65 ಲಕ್ಷ ರೂಪಾಯಿ ತಲುಪಿದೆ. ಹೊಸ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ 20ರಷ್ಟು ಹೆಚ್ಚಾಗಿದೆ. ಮೊದಲು ಶೇ 15 ರಿಂದ 20 ರಷ್ಟು ಪ್ರಯಾಣಿಕರು ಮಹಿಳೆಯರಾಗಿದ್ದರು. ಆದರೆ ಈಗ ಶೇ 40 ರಷ್ಟು ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಕೆಎಸ್‌ಆರ್‌ಟಿಸಿಯು 35 ರಿಂದ 40 ಲಕ್ಷ ರೂಪಾಯಿ ಟಿಕೆಟ್ ಮೊತ್ತವನ್ನು ಸಂಗ್ರಹಿಸುತ್ತಿದ್ದು, ಮಹಿಳಾ ಪ್ರಯಾಣಿಕರ ಟಿಕೆಟ್ ಶುಲ್ಕವನ್ನು ರಾಜ್ಯ ಸರ್ಕಾರ ಭರಿಸಲಿದೆ. ಮಹಿಳಾ ಪ್ರಯಾಣಿಕರ ಟಿಕೆಟ್ ಮೊತ್ತವು ದಿನಕ್ಕೆ 25 ರಿಂದ 30 ಲಕ್ಷ ರೂಪಾಯಿಗಳವರೆಗೆ ಇರುತ್ತದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆಆರ್ ಬಸವರಾಜ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ವಿಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ಗಳು ದಿನಕ್ಕೆ ಸುಮಾರು 1.80 ಲಕ್ಷ ಕಿಲೋಮೀಟರ್ ಕ್ರಮಿಸುತ್ತವೆ ಮತ್ತು 65 ಲಕ್ಷ ರೂಪಾಯಿ ಆದಾಯವನ್ನು ಗಳಿಸುತ್ತವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Chikkamagaluru: ಡ್ರೈವರ್​​ ಸೀಟ್​​ನ ಡೋರ್​ ಮೂಲಕ ಬಸ್​ ಹತ್ತಿದ ನಾರಿಯರು, ಬಪ್ಪರೆ ಲೇಡಿಸ್​

ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಹೊಸ ಯೋಜನೆ ಜಾರಿಗೆ ತಂದಿದ್ದರೂ, 430 ಹಳ್ಳಿಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಲಭ್ಯವಿಲ್ಲದ ಕಾರಣ ಜಿಲ್ಲೆಯ ಸುಮಾರು ಶೇ 40 ರಷ್ಟು ಮಹಿಳೆಯರು ಯೋಜನೆಯಿಂದ ವಂಚಿತರಾಗಿದ್ದಾರೆ. 10 ಕಿಲೋಮೀಟರ್ ದೂರ ಕ್ರಮಿಸಿ ಕೆಲಸದ ಸ್ಥಳಕ್ಕೆ ಬರುತ್ತಿದ್ದು, ಖಾಸಗಿ ವಾಹನಗಳನ್ನೇ ಅವಲಂಬಿಸಿದ್ದಾರೆ ಎಂದು ಕೊಪ್ಪ ತಾಲೂಕಿನ ಕೂಲಿ ಕಾರ್ಮಿಕರಾಗಿರುವ ಅನ್ನಪೂರ್ಣ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. ನಮ್ಮ ಗ್ರಾಮಕ್ಕೆ ಬಸ್ ಸೌಕರ್ಯವಿಲ್ಲ, ಹೊಸದಾಗಿ ಜಾರಿಗೆ ತಂದಿರುವ ಯೋಜನೆ ಪ್ರಯೋಜನವಾಗಿಲ್ಲ, ಕೆಎಸ್‌ಆರ್‌ಟಿಸಿಯವರು ಬೆಳಗ್ಗೆ ಮತ್ತು ಸಂಜೆಯಾದರೂ ಸೇವೆ ಆರಂಭಿಸಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್ಲ ಪ್ರದೇಶಗಳಿಗೆ ಬಸ್ ಸೌಲಭ್ಯ ಕಲ್ಪಿಸಬೇಕಿದ್ದರೆ ಕನಿಷ್ಠ 50 ಬಸ್‌ಗಳು ಮತ್ತು ಹೆಚ್ಚುವರಿ ಸಿಬ್ಬಂದಿ ಅಗತ್ಯವಿದೆ ಎಂದು ಕೆಎಸ್​ಆರ್​​ಟಿಸಿ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Tue, 20 June 23

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?