ಚಿಕ್ಕಮಗಳೂರು: ಗ್ರಾಮದಲ್ಲಿ ಮಸೀದಿ ಬಳಿಯೇ ಕೇಸರಿ ಧ್ವಜ ಕಟ್ಟಿದ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ

| Updated By: ಆಯೇಷಾ ಬಾನು

Updated on: Dec 22, 2023 | 10:17 AM

ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ದತ್ತಮಾಲಾಧಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಾಂದಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಅಲಂಕಾರ ಮಾಡುತ್ತಿದ್ದ ವೇಳೆ ಮಸೀದಿ ಸಮೀಪ ಧ್ವಜ ಕಟ್ಟದಂತೆ ಅನ್ಯಕೋಮಿನ ಯುವಕರ ತಂಡ ದತ್ತಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು: ಗ್ರಾಮದಲ್ಲಿ ಮಸೀದಿ ಬಳಿಯೇ ಕೇಸರಿ ಧ್ವಜ ಕಟ್ಟಿದ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ  ಹಲ್ಲೆ
ಮಸೀದಿ ಬಳಿಯೇ ಕೇಸರಿ ಧ್ವಜ ಕಟ್ಟಿದ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ
Follow us on

ಚಿಕ್ಕಮಗಳೂರು, ಡಿ.22: ಮಸೀದಿಯ ಸಮೀಪ ಕೇಸರಿ ಧ್ವಜ ಕಟ್ಟುವುದಕ್ಕೆ ವಿರೋಧ ವ್ಯಕ್ತಪಡಿಸಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳ (Datta Mala) ಮೇಲೆ ಹಲ್ಲೆ (Assault) ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ದತ್ತಮಾಲಾಧಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲಂಕಾರ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಭಜರಂಗದಳ ಕಾರ್ಯಕರ್ತರು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ದತ್ತಜಯಂತಿ ಹಿನ್ನೆಲೆ ದತ್ತಮಾಲಾಧಾರಿಗಳು ಗ್ರಾಮದೆಲ್ಲೆಡೆ ಅಲಂಕಾರ ಮಾಡುತ್ತಿದ್ದಾರೆ. ಕೇಸರಿ ಧ್ವಜ ನೆಟ್ಟಿ ಗ್ರಾಮವನ್ನೆಲ್ಲ ಕೇಸರಿಮಯವನ್ನಾಗಿಸುತ್ತಿದ್ದಾರೆ. ಸದ್ಯ ಹಾಂದಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಅಲಂಕಾರ ಮಾಡುತ್ತಿದ್ದ ವೇಳೆ ಮಸೀದಿ ಸಮೀಪ ಧ್ವಜ ಕಟ್ಟದಂತೆ ಅನ್ಯಕೋಮಿನ ಯುವಕರ ತಂಡ ದತ್ತಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ.

ದತ್ತಜಯಂತಿ ಹಿನ್ನೆಲೆ VHP ಭಜರಂಗದಳ ಕಾರ್ಯಕರ್ತರು ದತ್ತಮಾಲೆ‌ ಧರಿಸಿದ್ದರು. ಘಟನೆ ಬಳಿಕ ಸ್ಥಳಕ್ಕೆ‌ ಆಲ್ದೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅತಿ ಸೂಕ್ಷ್ಮ ಪ್ರದೇಶವಾಗಿರುವ ಆಲ್ದೂರು ಮತ್ತು ಹಾಂದಿ ಗ್ರಾಮದಲ್ಲಿ ಅಲಂಕಾರ ಮಾಡುವುದಕ್ಕೆ ಹಿಂದೂ ಸಂಘನೆಗಳು ಗ್ರಾಮ ಪಂಚಾಯತಿಯಿಂದ ಅನುಮತಿ ಪಡೆದಿದ್ದರು. ಘಟನೆ ಸಂಬಂಧಿಸಿದಂತೆ ಭಜರಂಗದಳ ಕಾರ್ಯಕರ್ತರು ಸಭೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹನುಮ ಮಾಲೆ ಧರಿಸಿದ ಶಾಸಕ ಜನಾರ್ದನ ರೆಡ್ಡಿ

ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿದೆ. ಹೀಗಾಗಿ ಡಿಸೆಂಬರ್ 22ರಿಂದ 27ರವರೆಗೆ ಈ ಪ್ರದೇಶದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ರಜೆ ಇದೆ. ಹೀಗಾಗಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಕಳೆದ ವಾರವೇ ಮಾಹಿತಿ ನೀಡಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ