ಬಿಜೆಪಿ ಕಾರ್ಯಕರ್ತರಿಂದ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು

ಲೋಕಸಭಾ ಚುನಾವಣೆ ಇಂದು(ಏ.26) ರಾಜ್ಯದ 14 ಕ್ಷೇತ್ರಗಳಲ್ಲಿ ಅದ್ದೂರಿಯಾಗಿ ನಡೆದಿದೆ. ಅದರಂತೆ ಚಿಕ್ಕಮಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಬಿಜೆಪಿ(BJP) ಕಾರ್ಯಕರ್ತರ ಗುಂಪು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ವೇಳೆ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯಗೆ ತಲೆ‌ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರಿಂದ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು
ಹಿಂದೂ ಕಾರ್ಯಕರ್ತ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 26, 2024 | 7:26 PM

ಚಿಕ್ಕಮಗಳೂರು, ಏ.26: ಹಿಂದೂ ಕಾರ್ಯಕರ್ತನ ಮೇಲೆ ಬಿಜೆಪಿ(BJP) ಕಾರ್ಯಕರ್ತರ ಗುಂಪು ಹಲ್ಲೆ ಮಾಡಿದ ಆರೋಪ ಚಿಕ್ಕಮಗಳೂರು ತಾಲೂಕಿನ ಉಜೈನಿ ಮತಗಟ್ಟೆ ಬಳಿ ಕೇಳಿಬಂದಿದೆ. ಮತಗಟ್ಟೆಗಳ ವೀಕ್ಷಕನಾಗಿ ತೆರಳಿದಾಗ ಹಿಂದೂ ಕಾರ್ಯಕರ್ತ ಪ್ರವೀಣ ಖಾಂಡ್ಯ(Praveen Khandya) ಮೇಲೆ ಏಕಾಏಕಿ ಗುಂಪೊಂದು ಹಲ್ಲೆ ಮಾಡಿದೆ. ಇದರಿಂದ ಪ್ರವೀಣ್ ಖಾಂಡ್ಯಗೆ ತಲೆ‌ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆ ಮುಂಭಾಗದಲ್ಲಿ ನೂರಾರು ಕಾರ್ಯಕರ್ತರು ಜಮಾವಣೆ

ಇನ್ನು ಪ್ರವೀಣ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ. ಇದೀಗ ಆತನ ಮೇಲೆ ಏಕಾಎಕಿ ದಾಳಿ ಆಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂಭಾಗದಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಜೈಶ್ರೀರಾಮ ಹೇಳಿದ್ದಕ್ಕೆ ಹಲ್ಲೆ: ಘಟನೆ ಹೇಗಾಯ್ತು? ದೂರಿನಲ್ಲಿ ಘಟನೆ ಬಗ್ಗೆ ವಿವರಿಸಿದ ಹಲ್ಲೆಗೊಳಗಾದ ಯವಕ

ಚಿರತೆ ದಾಳಿ, ಓರ್ವ ವ್ಯಕ್ತಿ ಗಂಭೀರ

ಉತ್ತರ ಕನ್ನಡ: ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಓರ್ವ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿದ್ದು, ಮಹಾಬಲೇಶ್ವರ ನಾಯ್ಕ ಎಂಬುವವರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮನೆಯಿಂದ ಹೊರಗೆ ಬರದಂತೆ ಗ್ರಾಮ ಪಂಚಾಯತಿಯಿಂದ ಜನತೆಗೆ ಎಚ್ಚರಿಗೆ ನೀಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Fri, 26 April 24

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ