Chikkamagaluru News: ಗಂಡನ ಮೇಲಿನ ಅನೈತಿಕ ಸಂಬಂಧಕ್ಕೆ 4 ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಯುವತಿ ದುರಂತ ಅಂತ್ಯ

ಮಂಜುನಾಥ್ ಮದುವೆಯಾದ ವಿಚಾರ ಕಾಂತಾಳಿಗೆ ತಿಳಿಯುತ್ತಿದ್ದಂತೆ ಆಕೆ ಪ್ರಿಯತಮನ ಮನೆಗೆ ಬಂದು ಆತನ ಹೆಂಡತಿ ಭರತಿಯನ್ನು ಮನೆಯ ಹಿಂಭಾಗದ ಹೊಲಕ್ಕೆ ಕರೆದುಕೊಂಡು ಹೋಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

Chikkamagaluru News: ಗಂಡನ ಮೇಲಿನ ಅನೈತಿಕ ಸಂಬಂಧಕ್ಕೆ 4 ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಯುವತಿ ದುರಂತ ಅಂತ್ಯ
ಘಟನಾ ಸ್ಥಳ
Edited By: ಆಯೇಷಾ ಬಾನು

Updated on: Jul 07, 2023 | 12:08 PM

ಚಿಕ್ಕಮಗಳೂರು: ಗಂಡನ ಅನೈತಿಕ ಸಂಬಂಧಕ್ಕೆ(Illegal Affair) ನಾಲ್ಕು ತಿಂಗಳ ಹಿಂದಷ್ಟೇ ತಾಳಿ ಕಟ್ಟಿಸಿಕೊಂಡು ಮನೆಗೆ ಬಂದಿದ್ದ ಹೆಂಡತಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಗಣಿ ಬಸಳ್ಳಿ ಗ್ರಾಮದಲ್ಲಿ ನಡೆದಿದೆ(Murder). ಭಾರತಿ(20) ಹತ್ಯೆಯಾದ ಮಹಿಳೆ. ಮೃತ ಭಾರತಿಯ ಗಂಡನ ಪ್ರಿಯತಮೆ ಮನೆಯ ಹಿಂಭಾಗದ ಹೊಲದಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ.

ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಮಂಜುನಾಥ್ ಎಂಬುವವನ ಜೊತೆ ಭಾರತಿಗೆ ವಿವಾಹವಾಗಿತ್ತು. ಆದ್ರೆ ಮದುವೆಗೆ ಮುಂಚೆಯೇ ಮಂಜುನಾಥನಿಗೆ ಕಾಂತ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತು. ಮಂಜುನಾಥ್ ಮದುವೆಯಾದ ವಿಚಾರ ಕಾಂತಾಳಿಗೆ ತಿಳಿಯುತ್ತಿದ್ದಂತೆ ಆಕೆ ಪ್ರಿಯತಮನ ಮನೆಗೆ ಬಂದು ಆತನ ಹೆಂಡತಿ ಭರತಿಯನ್ನು ಮನೆಯ ಹಿಂಭಾಗದ ಹೊಲಕ್ಕೆ ಕರೆದುಕೊಂಡು ಹೋಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಹತ್ಯೆ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿ ಮದುವೆಯಾಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಬಳಿ ಹೇಳಿದ್ದಾಳೆ. ಇವರ ಅನೈತಿಕ ಸಂಬಂಧಕ್ಕೆ ಏನು ತಿಳಿಯದ ಅಮಾಯಕ ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ. ಭಾರತಿ ಸಂಬಂಧಿಕರು ಮಂಜುನಾಥ್ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಮಗಳ ಸಾವಿಗೆ ಕಣ್ಣೀರು ಹಾಕಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Jihad: ಇದೊಂದು ವಿಕೃತನ ಕತೆ, ಅದೀಗ ಲವ್ ಜಿಹಾದ್ ಬಣ್ಣವೂ ಪಡೆದುಕೊಂಡಿದೆ

ಶಾಲಾ ಬಸ್ ಹರಿದು ಅದೇ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಸಾವು

ಶಾಲಾ ಬಸ್​ ಹರಿದು 2ನೇ ತರಗತಿ ಓದುತ್ತಿದ್ದ ದಿವ್ಯಾಂಶು ಸಿಂಗ್​(8) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಎಂ.ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿದರಗೆರೆಯ ಎಸ್.ಎಸ್.ವಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ದಿವ್ಯಾಂಶು, ನಿನ್ನೆ(ಜು.06) ಸಂಜೆ 6 ಗಂಟೆಗೆ ಟ್ಯೂಷನ್ ಮುಗಿಸಿ ಶಾಲಾ ವಾಹನದಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಶಾಲೆಯ ವಾಹನದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Loading...
Unable to load recommendations.
Follow Us