AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru News: ಆರ್ಕೆಸ್ಟ್ರಾ ಹಾಡಿಗಾಗಿ ಮರ್ಡರ್​​: 7 ಆರೋಪಿಗಳ ಬಂಧನ

ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

Chikkamagaluru News: ಆರ್ಕೆಸ್ಟ್ರಾ ಹಾಡಿಗಾಗಿ ಮರ್ಡರ್​​: 7 ಆರೋಪಿಗಳ ಬಂಧನ
ಬಂಧಿತ ಆರೋಪಿ ಕಬಾಬ್ ಮೂರ್ತಿ, ಮೃತ ವರುಣ್
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 3:01 PM

Share

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್​​, ಧನು, ಈಶ್ವರ್​, ಪರಮೇಶ್ವರ್​, ನಿತಿನ್​ನನ್ನು ಬಂಧಿತರು. ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ವರುಣ್​ಗೆ ಚಾಕು ಇರಿದು ಕಬಾಬ್ ಮೂರ್ತಿ ಎಂಬಾತ ಪರಾರಿಯಾಗಿದ್ದ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿತ್ತು.

ಘಟನೆ ಹಿನ್ನಲೆ

ಶನಿವಾರ ರಾತ್ರಿ ಕಾಂಗ್ರೆಸ್​ ಶಾಸಕ ಶ್ರೀನಿವಾಸ್​ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಸಮಾರಂಭದಲ್ಲಿ ಆರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ.

ಇದನ್ನೂ ಓದಿ: ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿದ ‘ಕಿಂಗ್ ಕೊಹ್ಲಿ’

ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್​ಗೆ ಡ್ರ್ಯಾಗರ್​ನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವೇಳೆ ಮಂಜು ಹಾಗೂ ಸಂಜು ಎಂಬಿಬ್ಬರ ಕೈ ಹಾಗೂ ಕಾಲಿಗೆ ಗಾಯಗಳಾಗಿದೆ. ಬಳಿಕ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಜೈಲುಶಿಕ್ಷೆ

ಕೋಲಾರ: ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಮುರುಗೇಶ್​ಗೆ 30 ವರ್ಷ ಜೈಲುಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ದೇವೆಮಾನೆ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ವ್ಯಕ್ತಿ ಕೊಲೆ; ಕಾರಣ ಇಲ್ಲಿದೆ ನೋಡಿ

2022 ರ ಅಕ್ಟೋಬರ್ 9ರಂದು ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮುರುಗೇಶ್ ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ಮುಳಬಾಗಲು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ‌ ದಾಖಲಿಸಿಕೊಂಡಿದ್ದರು. ಸದ್ಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದೇವೆಮಾನೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:00 pm, Sun, 4 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More